ತುಮಕೂರು: ಪೋಕ್ಸೊ ಪ್ರಕರಣ ಸಂಬಂಧ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪಗೆ ಸಿಐಡಿ ಅಧಿಕಾರಿಗಳು ನೋಟಿಸ್ ನೀಡಿದ್ದು ಅಗತ್ಯಬಿದ್ದರೆ ಬಂಧಿಸುತ್ತಾರೆ ಎಂದು ಗೃಹ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ.ಜಿ.ಪರಮೇಶ್ವರ್ ಹೇಳಿದರು.
ನಗರದಲ್ಲಿ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿ, ಪ್ರಕರಣ ಸಂಬಂಧ ಈಗಾಗಲೇ ಸಿಐಡಿ ಅಧಿಕಾರಿಗಳು ನೋಟಿಸ್ ನೀಡಿದ್ದಾರೆ. ತನಿಖೆ ಅವರು ಮಾಡುತ್ತಿರುವುದರಿಂದ ಅದರಲ್ಲಿ ನಾನು ತನಿಖೆ ಹೀಗೆ ಮಾಡಿ ಹಾಗೆ ಮಾಡಿ ಎಂದು ಹೇಳಲು ಆಗುವುದಿಲ್ಲ. ಅಲ್ಲದೆ ಈಗಾಗಲೇ ಯಡಿಯೂರಪ್ಪ ಅವರು ಬಂಧಿಸದಂತೆ ಕೋರಿ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿದ್ದಾರೆ. ಪೊಲೀಸ್ ಅಧಿಕಾರಿಗಳು ಜೂ.15ರ ಒಳಗೆ ಚಾರ್ಜ್ ಶೀಟ್ ಸಲ್ಲಿಸಬೇಕಿದೆ. ಅಷ್ಟರ ಒಳಗೆ ಎಲ್ಲ ಪ್ರಕ್ರಿಯೆ ಪೂರ್ಣಗೊಳಿಸಿ ಯಡಿಯೂರಪ್ಪ ಅವರಿಂದಲೂ ಹೇಳಿಕೆ ಪಡೆಯುತ್ತಾರೆ’ ಎಂದರು.
ಇದೇ ವೇಳೆ, ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣ ಸಂಬಂಧ ಹೈದರಾಬಾದ್‌ನಲ್ಲಿ ಎಸ್‌ಐಟಿ ಅಧಿಕಾರಿಗಳು ಮತ್ತಿಬ್ಬರನ್ನು ಬಂಧಿಸಿದ್ದಾರೆ ಎಂದು ಮಾಹಿತಿ ನೀಡಿದರು.