Friday, 13th December 2024

ಐಎಫ್ ಡಬ್ಲ್ಯೂಜೆ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿಯಾಗಿ ಸತೀಶ್ 

ತುಮಕೂರು: ಭಾರತೀಯ ಕಾರ್ಯನಿರತ ಪತ್ರಕರ್ತರ ಒಕ್ಕೂಟದ(ಐಎಫ್ ಡಬ್ಲ್ಯೂಜೆ) ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿಯಾಗಿ ಸುದ್ದಿ ಬಿಂಬ ಪತ್ರಿಕೆ ಸಂಪಾದಕ ಹಾಗೂ ಕರ್ನಾಟಕ ಕಾರ್ಯನಿರತ ಪರ್ತಕರ್ತರ ಸಂಘದ ರಾಷ್ಟ್ರೀಯ ಮಂಡಳಿ ಸದಸ್ಯ ಡಿ.ಎಂ.ಸತೀಶ್ ಅವರನ್ನು ನೇಮಕ ಮಾಡಲಾಗಿದೆ.
ಕರ್ನಾಟಕ, ಕೇರಳ, ತಮಿಳು ನಾಡು, ತೆಲಂಗಾಣ, ಗೋವಾ ಹಾಗೂ ಕೇಂದ್ರಾಡಳಿತ ಪ್ರದೇಶಗಳಾದ ಲಕ್ಷದ್ವೀಪ, ಅಂಡಮಾನ್ ನಿಕೋಬಾರ್ ನಲ್ಲಿ ಕಾರ್ಯನಿರತ ಪರ್ತಕರ್ತರ ಸಂಘಟನೆ ಯ ಜವಾಬ್ದಾರಿ ನೀಡಲಾಗಿದೆ ಎಂದು ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನಯ್ಯ ತಿಳಿಸಿದ್ದಾರೆ.
ಡಿ.ಎಂ.ಸತೀಶ್ ಅವರು ಸಂಘದ  ಜಿಲ್ಲಾ ನಿರ್ದೇಶಕರು, ರಾಷ್ಟ್ರೀಯ ಮಂಡಳಿ ಸದಸ್ಯ ರಾಗಿ ಎರಡು ಅವಧಿಗೆ ಕಾರ್ಯನಿರ್ವಹಿಸಿದ್ದು, ಹಿಂದೆ ಐಎಫ್ ಡಬ್ಲ್ಯೂಜೆ  ದಕ್ಷಿಣ ಭಾರತ ಸಣ್ಣ ಮತ್ತು ಮಧ್ಯಮ ಪತ್ರಿಕೆ ಗಳ  ರಾಷ್ಟ್ರೀಯ ಸಂಚಾಲಕರಾಗಿಯೂ ಸಂಘಟನೆ ಗೆ ಶ್ರಮಿಸಿದ್ದಾರೆ.