Saturday, 27th July 2024

1,254 ಗ್ರಾಂ ಚಿನ್ನ ಅಕ್ರಮ ಸಾಗಾಟ

ಮಂಗಳೂರು: ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಎರಡು ಪತ್ಯೇಕ ಪ್ರಕರಣಗಳ ಅಡಿ ಅಕ್ರಮವಾಗಿ ಸಾಗಿಸುತ್ತಿದ್ದ 1,254 ಗ್ರಾಂ ಚಿನ್ನವನ್ನು ವಶಕ್ಕೆ ಪಡೆಯಲಾಗಿದೆ.

ಮೊದಲ ಪ್ರಕರಣದಲ್ಲಿ ಅಕ್ಟೋಬರ್ 9ರಂದು ಎರ್ ಇಂಡಿಯಾ ಎಕ್ಸ್‌ಪ್ರೆಸ್ ವಿಮಾನ IX 816 ಮೂಲಕ ಅಬುಧಾ ಬಿಯಿಂದ ಮಂಗಳೂರಿಗೆ ಆಗಮಿಸುತ್ತಿದ್ದ ಪ್ರಯಾಣಿಕನನ್ನು ಮಂಗಳೂರು ಕಸ್ಟಮ್ಸ್ ಅಧಿಕಾರಿಗಳು ತಡೆದು ತಪಾ ಸಣೆ ನಡೆಸಿದ್ದಾರೆ.

ಆತನ ಬಳಿ 1,053 ಗ್ರಾಂ ಚಿನ್ನದ ಪೇಸ್ಟ್ ಪತ್ತೆಯಾಗಿದೆ. ಇದರ ಮೌಲ್ಯ 61.6 ಲಕ್ಷ ರೂಪಾಯಿ ಆಗಿದೆ. ಈತ ನಾಲ್ಕು ಅಂಡಾಕಾರದ ವಸ್ತುಗಳಲ್ಲಿ ಚಿನ್ನವನ್ನು ಇರಿಸಿದ್ದನು. ಆ ನಾಲ್ಕು ವಸ್ತುಗಳನ್ನು ಆತನ ಗುದನಾಳದಲ್ಲಿ ಬಚ್ಚಿಟ್ಟು ಕೊಂಡು ಅಕ್ರಮವಾಗಿ ಸಾಗಾಟ ಮಾಡಿರುವುದು ಪತ್ತೆಯಾಗಿದೆ. ಈ ಪ್ರಕರಣದ ಕುರಿತಂತೆ ತನಿಖೆ ನಡೆಯುತ್ತಿದೆ.

ಎರಡನೇ ಪ್ರಕರಣದಲ್ಲಿ ಅಕ್ಟೋಬರ್ 9 ರಂದು ಏರ್ ಇಂಡಿಯಾ ಎಕ್ಸ್‌ಪ್ರೆಸ್ ವಿಮಾನ IX384 ಮೂಲಕ ದುಬೈನಿಂದ ಮಂಗಳೂರಿಗೆ ಪ್ರಯಾಣಿಸುತ್ತಿದ್ದ ಪ್ರಯಾಣಿಕನ ಬ್ಯಾಗ್‌ನಲ್ಲಿ ಹೊದಿಕೆಯೊಳಗೆ ಇರಿಸಲಾದ ಡಬಲ್ ಲೇಯರ್ಡ್ ಬಟ್ಟೆಯಲ್ಲಿ ಬಚ್ಚಿಡಲಾಗಿದ್ದ 201 ಗ್ರಾಂ ಚಿನ್ನದ ಪೇಸ್ಟ್ ಅನ್ನು ವಶಪಡಿಸಿಕೊಳ್ಳಲಾಗಿದೆ. ಈ ಬಗ್ಗೆ ತನಿಖೆ ಕೈಗೊಳ್ಳಲಾಗಿದೆ.

Leave a Reply

Your email address will not be published. Required fields are marked *

error: Content is protected !!