Sunday, 8th September 2024

ಐಟಿ ಕಂಪನಿಗಳಿಗೆ ಐಟಿ ಇಲಾಖೆ ಶಾಕ್

ಬೆಂಗಳೂರು: ಹಲವು ಕಂಪನಿಗಳಿಗೆ ಬುಧವಾರ ಆದಾಯ ತೆರಿಗೆ ಇಲಾಖೆ ಶಾಕ್ ನೀಡಿದೆ. ಬೆಂಗಳೂರಿನ 10ಕ್ಕೂ ಹೆಚ್ಚು ಖಾಸಗಿ ಕಂಪನಿಗಳ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದು, ಆದಾಯ ತೆರಿಗೆ ತಪ್ಪು ಮಾಹಿತಿ, ಸುಳ್ಳು ಮಾಹಿತಿ ನೀಡಿದ ಹಿನ್ನೆಲೆ ಯಲ್ಲಿ ಈ ದಾಳಿ ನಡೆದಿದೆ.

ನಗರದ ಸರ್ ಸಿ.ವಿ. ರಾಮನ್ ನಗರ, ಬಾಗಮನೆ ಟೆಕ್ ಪಾರ್ಕ್, ಹುಳಿಮಾವು ಮೊದಲಾದ ಕಡೆಗಳಲ್ಲಿ ದಾಳಿ ನಡೆದಿದೆ. ಸುಮಾರು 10ಕ್ಕೂ ಹೆಚ್ಚು ಐಟಿ ಅಧಿಕಾರಿಗಳ ತಂಡ ಏಕಕಾಲದಲ್ಲಿ ನಾನಾ ಕಡೆ ದಾಳಿ ಮಾಡಿದೆ. ಹುಳಿಮಾವು ಸಮೀಪದ ಆಪಸ್ ಅಪಾ ರ್ಟ್ಮೆಂಟ್ ಮೇಲೆ ದಾಳಿ ಮಾಡಿರುವ ಐಟಿ ಟೀಂ ಅಲ್ಲಿ ತಪಾಸಣೆಯನ್ನು ನಡೆಸುತ್ತಿದೆ. ಅಲ್ಲದೇ, ಹಲವು ಕಡೆಗಳಲ್ಲಿ ದಾಳಿ ನಡೆದಿರುವ ಮಾಹಿತಿ ಇದೆ.

ಆದಾಯ ತೆರಿಗೆ ಪಾವತಿಯಲ್ಲಿ ಕೆಲವು ಕಂಪನಿಗಳು ವಂಚನೆ ಮಾಡುತ್ತಿವೆ ಎಂಬುದನ್ನು ಕಂಡುಕೊಂಡಿರುವ ಅಧಿಕಾರಿಗಳು ಕಂಪನಿಯ ದಾಖಲೆ, ಕಡತಗಳ ಪರಿಶೀಲನೆಗಾಗಿ ಈ ದಾಳಿ ನಡೆಸಿವೆ.

ತಂಡಗಳು ಕಂಪನಿಗಳ ಕಚೇರಿಯಲ್ಲಿರುವ ದಾಖಲೆಗಳನ್ನು ಪರಿಶೀಲನೆ ನಡೆಸುತ್ತಿವುದಾಗಿ ತಿಳಿದು ಬಂದಿದೆ. ಹಲವಾರು ಖಾಸಗಿ ಕಂಪನಿಗಳು ಆದಾಯ ತೆರಿಗೆ ವಂಚನೆ ಮಾಡುವು ದಕ್ಕಾಗಿ ಎರಡು ರೀತಿಯ ದಾಖಲೆ ನಿರ್ವಹಣೆ ಮಾಡುತ್ತಿರುವುದನ್ನು ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಕಂಡುಕೊಂಡಿ ದ್ದರು.

ಇದು ವಂಚನೆಯ ಪರಿಧಿಗೆ ಬರುತ್ತಿದ್ದು, ತೆರಿಗೆ ತಪ್ಪಿಸುವ ಹುನ್ನಾರವನ್ನು ಬಯಲು ಮಾಡಲು ಈ ದಾಳಿ ನಡೆದಿದೆ ಎಂದು ಹೇಳಲಾಗಿದೆ.

Leave a Reply

Your email address will not be published. Required fields are marked *

error: Content is protected !!