ತುಮಕೂರು: ಜಿಲ್ಲೆಯ ಪ್ರಗತಿ ಮತ್ತು ಆರ್ಥಿಕ ಅಭಿವೃದ್ಧಿಯಲ್ಲಿ ಕೈಗಾರಿಕೋದ್ಯಮಿಗಳ ಕೊಡುಗೆ ಪ್ರಮುಖವಾಗಿದ್ದು ಎಲ್ಲ ರೀತಿಯಲ್ಲೂ ಅನುಕೂಲ ಕಲ್ಪಿಸಲು ಜಿಲ್ಲಾಡಳಿತ ಬದ್ಧವಾಗಿದೆ ಎಂದು ಜಿಲ್ಲಾಧಿಕಾರಿ ಹಾಗೂ ಸಮಿತಿ ಅಧ್ಯಕ್ಷ ಕೆ.ಶ್ರೀನಿವಾಸ್ ಹೇಳಿದರು.
ಜಿಲ್ಲಾಧಿಕಾರಿಗಳ ಕಚೇರಿ ನ್ಯಾಯಾಲಯ ಸಭಾಂಗಣದಲ್ಲಿ ಆಯೋಜಿಸಿದ್ದ ಜಿಲ್ಲಾ ಮಟ್ಟದ ಕೈಗಾರಿಕೋದ್ಯಮಿಗಳ ಕುಂದು ಕೊರತೆ, ಕೈಗಾರಿಕಾ ಸ್ಪಂದನ ಹಾಗೂ ಜಿಲ್ಲಾ ಮಟ್ಟದ ಕೈಗಾರಿಕೆಗಳ ಏಕ ಗವಾಕ್ಷಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ, ಜಿಲ್ಲೆಯು ಅಪಾರವಾದ ನೈಸರ್ಗಿಕ ಸಂಪನ್ಮೂಲವನ್ನು ಹೊಂದಿದ್ದು, ಕೈಗಾರಿಕಾ ಅಭಿವೃದ್ಧಿಗೆ ಹೆಚ್ಚಿನ ಅವಕಾಶ ಹೊಂದಿದೆ. ಜಿಲ್ಲೆಯ ವಿದ್ಯಾವಂತ ನಿರುದ್ಯೋಗಿ ಯುವಕ, ಯುವತಿ ಯರಿಗೆ ಕೈಗಾರಿಕೆಗಳಿಂದ ಉತ್ತಮ ಉದ್ಯೋಗಾವಕಾಶ ದೊರೆಯಬೇಕು, ಈ ನಿಟ್ಟಿನಲ್ಲಿ ಜಿಲ್ಲೆಯಲ್ಲಿ ಉದ್ಯೋಗ ಸೃಷ್ಟಿಸಲು ಉದ್ಯೋಗ ಮೇಳ ಆಯೋಜಿಸಿದ್ದು, ತುಮಕೂರು ಹಾಗು ಬೆಂಗಳೂರಿನ ಪ್ರಮುಖ ೨೩ ಉದ್ದಿಮೆದಾರರು ಇದರಲ್ಲಿ ನೊಂದಾಯಿಸಿದ್ದು ಇವರಿಗೆ ವಿವಿಧ ಕೌಶಲ್ಯವುಳ್ಳ ೧೫೨೩ ನೌಕರರ ಅಗತ್ಯವಿದೆ ಎಂದರು.
ಕೆ.ಐ.ಎ.ಡಿ.ಬಿ.ಯ ಡಿ.ಲಕ್ಷಿö್ಮÃಶ ಮಾತನಾಡಿ, ಸದರಿ ಕೈಗಾರಿಕಾ ಪ್ರದೇಶವು ರಾಷ್ಟಿçÃಯ ಹೆದ್ದಾರಿಗೆ ಹೊಂದಿಕೊ0ಡಿದ್ದು, ಸರ್ವಿಸ್ ರಸ್ತೆಯಲ್ಲಿ ಯಾವುದೇ ಕಾಮಗಾರಿ ಕೈಗೊಳ್ಳಲು ಚಿತ್ರದುರ್ಗದ ರಾಷ್ಟಿçÃಯ ಹೆದ್ದಾರಿ ಪ್ರಾಧಿಕಾರದಿಂದ ಅನುಮತಿ ಅವಶ್ಯಕತೆ ಇದೆ ಎಂದರು. ಪ್ರಾಧಿಕಾರದ ಅಧಿಕಾರಿ ಮಾತನಾಡಿ, ಈ ಬಗ್ಗೆ ಸ್ಥಳ ಪರೀಶೀಲನೆ ಮಾಡಲಾಗುತ್ತಿದ್ದು ಪ್ರಾಧಿಕಾರದ ಸಭೆಯಲ್ಲಿ ತಿರ್ಮಾನ ಕೈಗೊಳ್ಳಬೇಕಾಗಿದೆ ಎಂದು ಸಭೆಗೆ ತಿಳಿಸಿದಾಗ ಇದು ತುಂಬ ತಡವಾಗುತ್ತದೆ. ತಾತ್ಕಾಲಿಕ ಬದಲಿ ವ್ಯವಸ್ಥೆಗಾಗಿ ಕೆಐಎಡಿಬಿ ಅಭಿವೃದ್ದಿ ಅಧಿಕಾರಿಗಳಿಗೆ ಜಿಲ್ಲಾಧಿಕಾರಿಗಳು ಸೂಚಿಸಿದರು.
ವಸಂತನರಸಾಪುರ ಕೈಗಾರಿಕಾ ಪ್ರದೇಶದ ಕಾರ್ಯದರ್ಶಿ ಹರೀಶ್ ಮಾತನಾಡಿ, ಉದ್ದಮಿದಾರರು ಕೊಳವೆಬಾವಿ ಕೊರೆಯಲು ಅನುಮತಿ ಕೋರಿದರು. ಈ ಬಗ್ಗೆ ಗಣಿ ಮತ್ತು ಭೂಗರ್ಭ ಅಂತರ್ಜಲ ಇಲಾಖೆಯ ಅಧಿಕಾರಿಗಳಿಗೆ ಸಭೆ ಕರೆಯುವಂತೆ ಜಿಲ್ಲಾಧಿ ಕಾರಿಗಳು ಸೂಚಿಸಿದರು.
ಜಿಲ್ಲಾ ಕೌಶಲ್ಯ ಅಭಿವೃದ್ಧಿ ಅಧಿಕಾರಿ ಶ್ರೀನಿವಾಸ, ಮಾತನಾಡಿ ಉದ್ದಿಮೆದಾರರು ಇಲಾಖಾ ಪೊರ್ಟಲ್‌ನಲ್ಲಿ ನೊಂದಾಯಿಸಿ ಕೊ0ಡಲ್ಲಿ ಸೂಕ್ತ ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಲಭ್ಯವಾಗುತ್ತಾರೆ ಹಾಗೂ ಶಿಶಿಕ್ಷÄ ತರಬೇತಿಗೆ ಉದ್ದಮೆದಾರರು ನೊಂದಾಯಿ ಕೊಳ್ಳಲು ಕೋರಿದರು. ಮಹಾನಗರ ಪಾಲಿಕೆಯ ಆಯುಕ್ತರು, ವಿಧಾನಸಭಾ ಮಾಜಿ ಸದಸ್ಯ ಶಫಿ ಅಹಮದ್, ಜಿಲ್ಲಾ ಕೈಗಾರಿಕಾ ಕೇಂದ್ರದ ಉಪ ನಿರ್ದೇಶಕ ನಾಗರಾಜು, ಕೆ.ಎಸ್.ಎಸ್.ಐ.ಡಿ.ಸಿ, ಹಾಗೂ ಕೆ.ಐ.ಎ.ಡಿ.ಬಿ.ರವರ ಕುಣಿಗಲ್, ವಸಂತನರಸಾಪುರ, ಅಂತರಸನಹಳ್ಳಿ, ಹಿರೇಹಳ್ಳಿ, ಸತ್ಯಮಂಗಲ ಕೈಗಾರಿಕಾ ಪ್ರದೇಶಗಳ, ಜಿಲ್ಲಾ ಸಣ್ಣ ಕೈಗಾರಿಕೆಗಳ ಹಾಗೂ ವಾಣಿಜ್ಯ ಮತ್ತು ಕೈಗಾರಿಕಾ ಮಹಾ ಮಂಡಳಿಯ, ವಿವಿಧ ಉಪಾಧ್ಯಕ್ಷರು, ಕಾರ್ಯದರ್ಶಿಗಳು, ಕಾರ್ಯಕಾರಿ ಸಮಿತಿ ಸದಸ್ಯರು, ವಿವಿಧ ಕೈಗಾರಿಕಾ ಸಂಘದ ಪದಾಧಿಕಾರಿಗಳು ಹಾಗೂ ವಿಶೇಷ ಭೂ ಸ್ವಾಧೀನಾಧಿಕಾರಿಗಳು, ಕಾರ್ಯ ನಿರ್ವಾಹಕ ಉಪಸ್ಥಿತರಿದ್ದರು.
*
ಗ್ರಾಮಿಣ ಪ್ರದೇಶದಲ್ಲಿ ಕೈಗಾರಿಕೆಗಳನ್ನು ಸ್ಥಾಪಿಸಲು ತುಂಬಾ ಉಪಯುಕ್ತ ತೆರಿಗೆ ವಿಧಾನಗಳನ್ನು ಅನುಸರಿಸಲಾಗುತ್ತಿದೆ. ಈ ಬಗ್ಗೆ ಕೈಗಾರಿಕೆಗಳ ಮಾಲೀಕರು ಯಾವುದಾದರು ಸಮಸ್ಯೆ ಇದ್ದಲ್ಲಿ ಗ್ರಾಮ ಪಂಚಾಯತ್ ಅಭಿವೃದ್ದಿ ಅಧಿಕಾರಿಗಳನ್ನು ಸಂಪರ್ಕಿಸಬಹುದಾಗಿದೆ.
ಜಿ.ಪ್ರಭು, ಜಿಪಂ ಸಿಇಒ