ಚಿಕ್ಕಬಳ್ಳಾಪುರ : ಪರಿಶಿಷ್ಟ ಜಾತಿಯ ಉಪಜಾತಿಗಳಿಗೆ ಒಳಮೀಸಲಾತಿ ಕಲ್ಪಿಸಲು ರಾಜ್ಯಸರಕಾರಗಳಿಗೆ ಸಂವಿಧಾನ ಬದ್ಧ ಅಧಿಕಾರವಿದೆಯೆಂಬ ಸುಪ್ರೀಂಕೋರ್ಟ್ ಆದೇಶವನ್ನು ಅನುಷ್ಟಾನಗೊಳಿಸಲು ಒತ್ತಾಯಿಸಿ ಕೆಡಿಎಸ್ಎಸ್ ನಿಂದ ನಗರದಲ್ಲಿ ಬೃಹತ್ ತಮಟೆ ಚಳುವಳಿಯ ಮೂಲಕ ಅಂಬೇಡ್ಕರ್ ವೃತ್ತದಲ್ಲಿ ಸುಮಾರು ಒಂದು ಗಂಟೆಗೂ ಹೆಚ್ಚು ಕಾಲ ರಸ್ತೆ ನಡೆಸಿ ಪ್ರತಿಭಟಿಸಲಾಯಿತು.
ಕೆಡಿಎಸ್ಎಸ್ ರಾಜ್ಯ ಸಂಘಟನಾ ಸಂಚಾಲಕ ಬಾಲಕುಂಟಹಳ್ಳಿ ಎನ್.ಗಂಗಾಧರ್ ಮಾತನಾಡಿ, ಒಳಮೀಸಲಾತಿ ಕಲ್ಪಿಸಲು ರಾಜ್ರ್ಕಾರಕ್ಕೆ ಅಧಿಕಾರಯಿದೆ ಎಂದು ಸುಪ್ರೀಂಕೋರ್ಟ್ ಐತಿಹಾಸಿಕ ತೀರ್ಪು ನೀಡಿದೆ. ಜೊತೆಗೆ ಒಳ ಮೀಸಲಾತಿಯ ಕುರಿತ ಗೊಂದಲಗಳಿಗೆ ಸುಪ್ರೀಂಕೋರ್ಟ್ ತೆರೆ ಎಳೆದಿದೆ. ಇದರಿಂದ ಒಳಮೀಸಲಾತಿಗೆ ಒತ್ತಾಯಿಸಿ ಹಲವು ದಶಕಗಳಿಂದ ಸಂಘಟನೆಗಳು ಮಾಡುತ್ತಿರುವ ಹೋರಾಟಗಳಿಗೆ ಜಯವು ದೊರೆತಂತಾಗಿದೆ ಎಂದರು.
ಒಳಮೀಸಲಾತಿ ಕಲ್ಪಿಸಿದಲ್ಲಿ ಸೌಲಭ್ಯ ವಂಚಿತ ಹಲವು ತಳಸಮುದಾಯಗಳ ಸಮಗ್ರ ಅಭಿವೃದ್ಧಿಗೆ ಸಹಕಾರಿ ಯಾಗಲಿದೆ. ಅಲ್ಲದೆ ಒಳಮೀಸಲಾತಿ ಜಾರಿಗಾಗಿ ಸಂವಿಧಾನಕ್ಕೆ ತಿದ್ದುಪಡಿಯನ್ನು ತರಬೇಕೆಂದು ಈ ಹಿಂದೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆಗ್ರಹಿಸಿದ್ದರು. ಆದರೆ ಸುಪ್ರೀಂಕೋರ್ಟ್ ಆದೇಶ ನೀಡಿ ತಿಂಗಳು ಕಳೆದಿದ್ದರೂ ರಾಜ್ಯ ಸರಕಾರ ಒಳಮೀಸಲಾತಿಯ ಕುರಿತು ಪ್ರಸ್ತಾಪ ಮಾಡದಿರುವುದು ದುರಂತವಾಗಿದೆ ಎಂದು ಟೀಕಿಸಿದರು.
ಪರಿಶಿಷ್ಟ ಜಾತಿಗಳಲ್ಲಿ ನೂರಾರು ಉಪಜಾತಿಗಳಿವೆ ಒಪ್ಪಿತವಾದ ಮಾನದಂಡಗಳು ಮತ್ತು ವಿಧಾನಗಳ ಮೂಲಕ ತುಲನಾತ್ಮಕವಾಗಿ, ಸ್ಪಷ್ಟವಾದ ದತ್ತಾಂಶದ ಆಧಾರದಲ್ಲಿ ಒಳಮೀಸಲಾತಿಯನ್ನು ನ್ಯಾಯಯುತವಾಗಿ ನೀಡ ಬೇಕಿದೆ. ಬಾಕಿ ಉಳಿದಿರುವ ಬ್ಯಾಕ್ಲಾಗ್ ಹುದ್ದೆಗಳನ್ನು ತಕ್ಷಣ ಭರ್ತಿ ಮಾಡಬೇಕು, ಒಳಮೀಸಲಾತಿ ಜಾರಿಯಾಗು ವವರೆಗೂ ಎಲ್ಲಾ ಹೊಸ ನೇಮಕಾತಿ ಪ್ರಕ್ರಿಯೆ ತಡೆಹಿಡಿಯಲು ಒತ್ತಾಯಿಸಿದರು.
ಬಗರ್ಹುಕುಂ ಸಾಗುವಳಿಯನ್ನು ಸಕ್ರಮಗೊಳಿಸಿ ಹಕ್ಕುಪತ್ರ ನೀಡಬೇಕು, ಸಮಾಜ ಕಲ್ಯಾಣ ಇಲಾಖೆಯ ವಿದ್ರ್ಥಿ ವಸತಿ ನಿಲಯ ಮತ್ತು ವಸತಿ ಶಾಲೆಗಳಲ್ಲಿ ಹೊರ ಸಂಪನ್ಮೂಲದಡಿ ಕರ್ತವ್ಯ ನಿರ್ವಹಿಸುತ್ತಿರುವ ನೌಕರರನ್ನು ಖಾಯಂಗೊಳಿಸುವುದು ಸೇರಿ ಹಲವು ಬೇಡಿಕೆಗಳನ್ನು ಈಡೇರಿಸಬೇಕು. ಇಲ್ಲವಾದಲ್ಲಿ ಮುಂಬರುವ ದಿನಗಳಲ್ಲಿ ಉಗ್ರ ಹೋರಾಟಗಳನ್ನು ನಡೆಸುವುದಾಗಿ ಎಚ್ಚರಿಸಿದರು.
ಇದಕ್ಕೂ ಎಂ.ಜಿರಸ್ತೆಯ ಜೈ ಭೀಮ್ ವಿದ್ಯಾರ್ಥಿ ನಿಲಯದ ಬಳಿಯಿಂದ ಅಂಬೇಡ್ಕರ್ ವೃತ್ತದವರೆಗೆ ತಮಟೆಗಳ ಸದ್ದಿನೊಂದಿಗೆ ಪ್ರತಿಭಟನಾ ಮೆರವಣಿಗೆ ನಡೆಸಿ, ಬೇಡಿಕೆ ಈಡೇರಿಸಲು ಒತ್ತಾಯಿಸಿ ಜಿಲ್ಲಾಧಿಕಾರಿ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿದರು.
ಜಿಲ್ಲಾ ಸಂಚಾಲಕ ನಲ್ಲಕದೀರೆನಹಳ್ಳಿ ಗಂಗಪ್ಪ, ಮಂಜು ತುಳಸಿ, ಲಕ್ಷ್ಮಣ್ರಾಜ್, ವೆಂಕಟರಮಣ, ಶ್ರೀನಿವಾಸ್, ನರಸಿಂಹಪ್ಪ, ಎಚ್.ಎಂ.ವೆAಕಟೇಶ್, ನಾಗರಾಜ್, ಕೃಷ್ಣರ್ತಿ, ಮುನಿರಾಜು, ಅಂಬರೀಶ್, ನಾಗೇಶ್, ಮುನಿಕೃಷ್ಣ, ಲಕ್ಷಿö್ಮÃನರಸಪ್ಪ, ಗಾಯತ್ರಮ್ಮ ಇದ್ದರು.