ಇದೇ ವೇಳೆ ಹಾಸನ ಜಿಲ್ಲೆಯ ಬೇಲೂರಿನಲ್ಲಿರುವ ಗಾಯತ್ರಿ ಶಾಂತೇಗೌಡ ಅವರ ಅಳಿಯನ ಮನೆ ಮೇಲೂ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಇನ್ನು ಐಟಿ ಅಧಿಕಾರಿಗಳ ತಂಡ ಚಿಕ್ಕಮಗಳೂರು ತಾಲೂಕಿನ ಮರ್ಲೆ ಗ್ರಾಮದಲ್ಲಿರುವ ಗಾಯತ್ರಿ ಶಾಂತೇಗೌಡ ಒಡೆತನದಲ್ಲಿ ರುವ ಕ್ರಷರ್ ಮೇಲೂ ದಾಳಿ ನಡೆಸಿ ದಾಖಲೆಗಳನ್ನು ಪರಿಶೀಲಿಸಿದ್ದಾರೆ. ಇಷ್ಟಲ್ಲದೆ ಗಾಯತ್ರಿ ಅವರ ಮನೆಯಲ್ಲಿ ಕೆಲಸ ಮಾಡು ವವರ ಮನೆಗಳ ಮೇಲೂ ಐಟಿ ದಾಳಿ ನಡೆದಿದೆ. ಗಾಯತ್ರಿ ಶಾಂತೇಗೌಡ ಕಾಂಗ್ರೆಸ್ ಪಕ್ಷದ ಹಿರಿಯ ನಾಯಕಿ ಯಾಗಿದ್ದು, ಸಿದ್ದರಾಮಯ್ಯ ಅವರ ಆಪ್ತರೂ ಆಗಿದ್ದಾರೆ.
ಚುನಾವಣೆಗೆ ಇನ್ನು ಕೆಲವೇ ತಿಂಗಳು ಬಾಕಿ ಇರುವ ಸಂದರ್ಭದಲ್ಲಿ ಗಾಯತ್ರಿ ಶಾಂತೇಗೌಡ ಅವರ ಮನೆ ಮೇಲೆ ಐಟಿ ದಾಳಿ ನಡೆದಿರುವುದು ತೀವ್ರ ಚರ್ಚೆಗೆ ಗ್ರಾಸವಾಗಿದೆ. ಶಾಸಕ ಸಿ.ಟಿ.ರವಿ ಅವರ ಹುನ್ನಾರದಿಂದಲೇ ಐಟಿ ಅಧಿಕಾರಿಗಳು ಈ ದಾಳಿ ನಡೆಸಿ ದ್ದಾರೆ ಎಂದು ಜಿಲ್ಲಾ ಕಾಂಗ್ರೆಸ್ ಮುಖಂಡರು ಆರೋಪಿಸಿದ್ದಾರೆ.