Sunday, 15th December 2024

ಜಾಗೃತಿ ಸಮಾವೇಶ: ಜಿಲ್ಲೆಯಿಂದ ಮೂವತ್ತು ಸಾವಿರ ಜನರು ಭಾಗವಹಿಸುವ ನಿರೀಕ್ಷೆ

ತುಮಕೂರು : ಕಲಬುರ್ಗಿಯಲ್ಲಿ ಅ ೩೦ ರಂದು ರಾಜ್ಯ ಹಿಂದುಳಿದ ವರ್ಗಗಳ ಜಾಗೃತಿ ಸಮಾವೇಶ ನಡೆಯಲಿದ್ದು ತುಮಕೂರು ಸಂಘಟನಾತ್ಮಕ ಜಿಲ್ಲೆಯಿಂದ ೩೦ ಸಾವಿರ ಸಂಖ್ಯೆಯಲ್ಲಿ ಜನರನ್ನು ಕರೆತರುವುದು ಪ್ರತಿಯೊಬ್ಬ ಕಾರ್ಯಕರ್ತರ ಜವಾಬ್ದಾರಿ ಎಂದು ನಗರಾಭಿವೃದ್ಧಿ ಸಚಿವ ಭೃರತಿ ಬಸವರಾಜು ಕಾರ್ಯಕರ್ತರಿಗೆ ಕರೆ ನೀಡಿದರು.
ನಗರದ ಕಮಲಕೃಪ ಜಿಲ್ಲಾ ಕಾರ್ಯಾಲಯದಲ್ಲಿ ಹಮ್ಮಿಕೊಂಡಿದ್ದ ಸಮಾವೇಶದ ಪೂರ್ವ ಭಾವಿ ಸಭೆಯಲ್ಲಿ ಕಾರ್ಯಕರ್ತ ರನ್ನು ಉದ್ದೇಶಿಸಿ ಮಾತನಾಡಿ, ಇನ್ನೂ ಹೆಚ್ಚು ಹೆಚ್ಚು ಸಂಘಟನೆ ಹೊಂದುವ ಮೂಲಕ ಕೇಂದ್ರ ಮತ್ತು ರಾಜ್ಯ ಸರ್ಕಾರ ಜನಪರ ಯೋಜನೆ ಗಳನ್ನು ಪ್ರತಿ ಗ್ರಾಮಗಳಿಗೂ ತಲುಪಿಸುವ ಕೆಲಸವನ್ನು ಕಾರ್ಯಕರ್ತರು, ಮುಖಂಡರು ಮಾಡಬೇಕಾಗಿದೆ. ಈ ಹಿನ್ನೆಲೆಯಲ್ಲಿ ಕಲಬುರ್ಗಿಯಲ್ಲಿ ಸಮಾವೇಶ ಹಮ್ಮಿಕೊಳ್ಳಲಾಗಿದ್ದು ಹೆಚ್ಚಿನ ಸಂಖ್ಯೆಯಲ್ಲಿ ಜನರು ಭಾಗವಹಿಸಿ ಕಾರ್ಯಕ್ರಮ ವನ್ನು ಯಶಸ್ವಿಗೊಳಿಸ ಬೇಕೆಂದರು.
ಮುಂಬರುವ ಚುನಾವಣೆಗೆ ದಿಕ್ಸೂಚಿ : ಗುಲ್ಬರ್ಗಾದಲ್ಲಿ ನಡೆಯುವ ಸಮಾವೇಶಕ್ಕೆ ರಾಜ್ಯದ ಸುಮಾರು ೭ ರಿಂದ ೮ ಲಕ್ಷ ಕಾರ್ಯಕರ್ತರು ಸೇರುವ ನಿರೀಕ್ಷೆ ಇದೆ.
ಸಮಾವೇಶದಲ್ಲಿ ಹಿಂದುಳಿದ ವರ್ಗಗಳ ಶಕ್ತಿ ಪ್ರದರ್ಶನ ನಡೆಯಲಿದ್ದು, ಮುಂಬರುವ ಚುನಾವಣೆಗೆ ಈ ಸಮಾವೇಶ ದಿಕ್ಸೂಚಿಯಾಗಲಿದೆ. ಪ್ರತಿಯೊಬ್ಬರೂ ಮನಸ್ತಾಪ, ಭಿನ್ನಾಭಿಪ್ರಾಯಗಳಿದ್ದರೂ ಅವುಗಳನ್ನೆಲ್ಲಾ ಬದಿಗೊತ್ತಿ ಒಗ್ಗಟ್ಟು ಪ್ರದರ್ಶಿಸುವ ಮೂಲಕ ಪ್ರಧಾನಿ ನರೇಂದ್ರ ಮೋದಿಯವರ ಕೈ ಬಲಪಡಿಸಲು ಮತ್ತು ಕೇಂದ್ರ, ರಾಜ್ಯದಲ್ಲಿ ಬಿಜೆಪಿಯನ್ನು ಮತ್ತೆ ಅಧಿಕಾರಕ್ಕೆ ತರುವ ನಿಟ್ಟಿನಲ್ಲಿ ಶಾಸಕರು, ಮುಖಂಡರು ಮತ್ತು ಕಾರ್ಯಕರ್ತರು ಕಾರ್ಯೋನ್ಮುಖ ರಾಗಬೇಕಿದೆ ಎಂದು ತಿಳಿಸಿದರು.
ಜಾಗೃತಿ ಸಮಾವೇಶದಲ್ಲಿ ೭-೮ ಲಕ್ಷ ಜನ ಬರುವ ನಿರೀಕ್ಷೆಯಿದೆ. ಇದಕ್ಕಾಗಿ ಪಕ್ಷ ಎಲ್ಲ ಸಿದ್ಧತೆ ಮಾಡಿಕೊಳ್ಳಲಿದೆ  ಎಂದರು.
ಸಿದ್ದರಾಮಯ್ಯ ಅವರನ್ನು ಕಂಡರೆ ಬಿಜೆಪಿ ನಾಯಕರಿಗೆ ಭಯವೇ ಎಂಬ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದ ಸಚಿವ ಭೈರತಿ ಬಸವರಾಜು ನಮಗೆ ಯಾರನ್ನು ಕಂಡರೂ ಭಯವಿಲ್ಲ. ನಮ್ಮಲ್ಲಿಯೂ ಸಹ ಸಿದ್ದರಾಮಯ್ಯ ಅವರಿಗೆ ಸರಿಸಮಾನರಾದ ನಾಯಕರು ಇದ್ದಾರೆ. ನಮ್ಮ ಮುಖ್ಯಮಂತ್ರಿ ಬಸವರಾಜು ಬೊಮ್ಮಾಯಿ  ಅವರ ಮೇಲೆ ೪೦ % ಮುಖ್ಯಮಂತ್ರಿ ಎಂಬ ಆರೋಪ ಮಾಡುತ್ತಿದ್ದಾರೆ. ಇದಕ್ಕೆ ಯಾವುದೇ ರೀತಿಯಾದ ಪುರಾವೆಗಳಿಲ್ಲ.  ಸುಳ್ಳು ದಾಖಲೆ, ಪುರಾವೆಗಳ ಮೇಲೆ ಆರೋಪ ಮಾಡುವುದು ಅವರ ಜಾಂiÀiಮಾನ ಎಂದು ಛೇಡಿಸಿದರು.
ಸಂಸದ ಜಿ.ಎಸ್. ಬಸವರಾಜು ಮಾತನಾಡಿ, ಚುನಾವಣೆ ಹತ್ತಿರ ಬರುತ್ತಿದ್ದಂತೆ ಕಾಂಗ್ರೆಸ್ ಭಾರತ್ ಜೋಡೋ ಯಾತ್ರೆ ಕೈಗೊಂಡಿದ್ದಾರೆ.  ಇದರಿಂದ ಬಿಜೆಪಿಗೆ ಲಾಭವೇ ಹೊರತು ಕಾಂಗ್ರೆಸ್‌ಗೆ ಏನು ಲಾಭವಾಗುವುದಿಲ್ಲ. ಜಿಲ್ಲೆಯಲ್ಲಿ ಓಬಿಸಿ ವರ್ಗಕ್ಕೆ ಇನ್ನೂಚೈತನ್ಯ ನೀಡಲು ಎಲ್ಲರೂ ಒಗ್ಗೂಡಿ ಮತ್ತೆ ರಾಜ್ಯದಲ್ಲಿ  ಹಾಗೂ ಕೇಂದ್ರದಲ್ಲಿ ಬಿಜೆಪಿಯನ್ನು ಅಧಿಕಾರಕ್ಕೆ ತರಬೇಕಿದೆ ಇದಕ್ಕೆ ಎಲ್ಲರೂ ಕೈ ಜೋಡಿಸಬೇಕಿದೆ ಎಂದು ಕರೆ ನೀಡಿದರು.
ಕಾರ್ಯಕ್ರಮದಲ್ಲಿ ರಾಜ್ಯ ಪ್ರಧಾನ ಕಾರ್ಯದರ್ಶಿ ಸುರೇಶ್ ಬಾಬು, ಮಾಜಿ ಎಂಎಲ್‌ಸಿಗಳಾದ  ಲಕ್ಷ್ಮೀನಾರಾಯಣ್, ಡಾ. ಹುಲಿನಾಯ್ಕರ್, ಶಾಸಕ ಜಿ.ಬಿ. ಜ್ಯೋತಿಗಣೇಶ್, ಜಿಲ್ಲಾಧ್ಯಕ್ಷ ರವಿಕುಮಾರ್ ಹೆಬ್ಬಾಕ, ಜಿಲ್ಲಾ ಪ್ರಭಾರಿಗಳಾದ ಪ್ರೇಮಾನಾಗಯ್ಯ, ರಾಜ್ಯ ರೈತ ಮೋರ್ಚಾದ ರಾಜ್ಯ  ಪ್ರಧಾನ ಕಾರ್ಯದರ್ಶಿ ಶಿವಪ್ರಸಾದ್, ಜಿಲ್ಲಾ ಕಾರ್ಯದರ್ಶಿ ಆ.ನಾ.ಲಿಂಗಪ್ಪ, ಓಬಿಸಿ ಮುಖಂಡ ಬೆಟ್ಟಸ್ವಾಮಿ, ರಾಜ್ಯ ಕಾರ್ಯಕಾರಿಣಿ ಸದಸ್ಯ ರುದ್ರೇಶ್, ಜಿಲ್ಲಾ ಸಂಯೋಜಕ ಚಂದನ್, ಜಿಲ್ಲಾ ಮಾಧ್ಯಮ ಸಂಚಾಲಕ ನಾಗೇಶ್ ವಿ.ಬಿ.ತೇಲ್ಕರ್ ಸೇರಿ ಓಬಿಸಿ ಜಿಲ್ಲೆಯ ವಿವಿಧ ಭಾಗದ ಉಪಾಧ್ಯಕ್ಷರು, ಕಾರ್ಯದರ್ಶಿಗಳು, ಕಾರ್ಯಕಾರಿಣಿ ಮಂಡಳಿ ಸದಸ್ಯರು, ತಾಲೂಕು ಅಧ್ಯಕ್ಷರು, ಮಂಡಲ ಅಧ್ಯಕ್ಷರು, ಬೂತ್ ಅಧ್ಯಕ್ಷರು, ಕಾರ್ಯದರ್ಶಿಗಳು, ಪದಾಧಿಕಾರಿಗಳು, ಕಾರ್ಯಕರ್ತರು ಭಾಗವಹಿಸಿದ್ದರು. ಓಬಿಸಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಕೆ.ವೇದಮೂರ್ತಿ ಸ್ವಾಗತಿಸಿದರೆ, ಗೋಕುಲ್ ಮಂಜುನಾಥ್ ನಿರೂಪಿಸಿದರು. ಓಬಿಸಿ ಸಂಯೋಜಕಿ ಉಮಾ ವಂದೇ ಮಾತರಂ ಗೀತೆ ಹಾಡಿದರು.