Thursday, 30th November 2023

102 ಕ್ಷೇತ್ರಗಳಲ್ಲಿ ಅಭ್ಯರ್ಥಿಗಳು ಕಣಕ್ಕೆ: ಜನಾರ್ದನ ರೆಡ್ಡಿ

ಳ್ಳಾರಿ: ಕಲ್ಯಾಣ ರಾಜ್ಯ ಪ್ರಗತಿ ಪಕ್ಷ ಸ್ಥಾಪನೆ ಮಾಡುವ ಮೂಲಕ ಮಾಜಿ ಸಚಿವ ಜನಾ ರ್ದನ ರೆಡ್ಡಿ ಅವರು ಮುಂದಿನ ವಿಧಾನ ಸಭೆ ಚುನಾವಣೆಯಲ್ಲಿ ಸುಮಾರು 102 ಕ್ಷೇತ್ರ ಗಳಲ್ಲಿ ಅಭ್ಯರ್ಥಿಗಳನ್ನು ಕಣಕ್ಕಿಳಿಸಲು ಸಿದ್ಧತೆ ನಡೆಸಿದ್ದಾರೆ.

ತಾಲೂಕಿನ ಗಡಿಭಾಗದ ಬೆಣಕಲ್ಲು ಗ್ರಾಮದಲ್ಲಿ ಪಕ್ಷದ ಬಾವುಟ ಬಿಡುಗಡೆಗೊಳಿಸುವ ಮೂಲಕ ಪ್ರಚಾರಕ್ಕೆ ಅಧಿಕೃತ ಚಾಲನೆ ನೀಡಿದ್ದಾರೆ. ಜನಾರ್ದನ ರೆಡ್ಡಿ ಗಂಗಾವತಿ ಕ್ಷೇತ್ರ ದಿಂದ ಕಣಕ್ಕಿಳಿಯಲಿದ್ದಾರೆ.

ಒಎಂಸಿ ಎಂಡಿ ಬಿ.ವಿ. ಶ್ರೀನಿವಾಸ ರೆಡ್ಡಿ ಕೊಪ್ಪಳ, ರಾಯಚೂರು, ಕಲಬುರಗಿಯ ಸೇಡಂ ಪೈಕಿ ಒಂದು ಕ್ಷೇತ್ರದಿಂದ ಕಣಕ್ಕಿಳಿಯಲಿದ್ದಾರೆ.

ಉತ್ತರ ಕರ್ನಾಟಕದ 64 ಮತ್ತು ದಕ್ಷಿಣ ಕರ್ನಾಟಕದ 38 ಕ್ಷೇತ್ರಗಳಲ್ಲಿ ಕೆಆರ್‌ಪಿ ಪಕ್ಷ ಅಭ್ಯರ್ಥಿಗಳನ್ನು ಕಣಕ್ಕಿಳಿಸಲಿದೆ. ಜ.16ರಂದು ಉತ್ತರ ಕರ್ನಾಟಕದ 25 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ರೆಡ್ಡಿ ಘೋಷಿಸಲಿದ್ದಾರೆ ಎನ್ನಲಾಗಿದೆ.

Read E-Paper click here

 

 

error: Content is protected !!