Thursday, 12th December 2024

ಬೈಕ್ ರ‍್ಯಾಲಿ ಜಾಗೃತಿ ಜಾಥಾಗೆ ಜಿಲ್ಲಾಧಿಕಾರಿ ಎನ್.ಎಂ.ನಾಗರಾಜ್ ಚಾಲನೆ

ಚಿಕ್ಕಬಳ್ಳಾಪುರ: ಮತದಾನ ಮಾಡಲು ಅರ್ಹರಿರುವವರು ಯಾರು ಕೂಡ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು. ಆ ನಿಟ್ಟಿನಲ್ಲಿ ಜಿಲ್ಲೆಯಾದ್ಯಂತ ಜಾಗೃತಿ ಮೂಡಿಸಲು ಇಂದು ಜಿಲ್ಲಾ ಕೇಂದ್ರದಲ್ಲಿ ಬೈಕ್ ರ‍್ಯಾಲಿಯನ್ನು ಹಾಗೂ ಎಲ್ಲಾ ತಾಲೂಕು ಕೇಂದ್ರಗಳಲ್ಲಿ ವಿವಿಧ ಜಾಗೃತಿ ಜಾಥಾ ಕಾರ್ಯಕ್ರಮಗಳನ್ನು ಆಯೋಜಿಸ ಲಾಗಿದೆ ಎಂದು ಜಿಲ್ಲಾಧಿಕಾರಿ ಎನ್.ಎಂ. ನಾಗರಾಜ್ ತಿಳಿಸಿದರು.

ಅವರು ಬುಧವಾರ ಜಿಲ್ಲಾಡಳಿತ, ಜಿಲ್ಲಾ ಸ್ವೀಪ್ ಸಮಿತಿ ಮತ್ತು ತಾಲ್ಲೂಕು ಆಡಳಿತ ದಿಂದ ನಗರದ ಜೂನಿಯರ್ ಕಾಲೇಜು ಬಳಿ ಆಯೋಜಿಸಿದ್ದ “ಮತದಾರರ ಪಟ್ಟಿಯ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ ಕುರಿತ ಜಾಗೃತಿ”ಯ ಬೈಕ್ ರ‍್ಯಾಲಿಗೆ ಹಸಿರು ನಿಶಾನೆ ಮೂಲಕ ಚಾಲನೆ ನೀಡಿ ಮಾತನಾಡಿದರು.

ಇಂದಿನಿ0ದ ಡಿಸೆಂಬರ್ ೮ ರವರೆಗೆ ಮತದಾರರ ಪಟ್ಟಿಗೆ ಸೇರ್ಪಡೆ, ತಿದ್ದುಪಡಿ ಹಾಗೂ ಆಕ್ಷೇಪಣೆ ಸಲ್ಲಿಸಲು ಅವಕಾಶ ನೀಡ ಲಾಗಿದೆ. ಹಲವು ಕಾರಣಗಳಿಂದ ತಮ್ಮ ಕುಟುಂಬದ ಸದಸ್ಯರು ಬಿಟ್ಟು ಹೋಗಿದ್ದಲ್ಲಿ ಅಥವಾ ಹೊಸದಾಗಿ ಸೇರ್ಪಡೆ ಆಗಿದ್ದರೆ ಪಟ್ಟಿಯಲ್ಲಿ ಸೇರ್ಪಡೆ ಮಾಡಲು ಮತ್ತು ತೆಗೆದುಹಾಕಲು ಅವಕಾಶವಿದೆ. ಕರಡು ಮತದಾರರ ಪಟ್ಟಿಯನ್ನು ಇಂದು ಪ್ರಕಟಿಸ ಲಾಗುತ್ತಿದೆ.

ಅಂತಿಮ ಪಟ್ಟಿಯನ್ನು ೨೦೨೩ರ ಜನವರಿ ೫ ರಂದು ಪ್ರಕಟಿಸಲಾಗುತ್ತದೆ. ನವೆಂಬರ್ ೧೨, ೨೦ ಮತ್ತು ಡಿಸೆಂಬರ್ ೦೩ ಹಾಗೂ ೪ ರಂದು ವಿಶೇಷ ಅಭಿಯಾನ ಹಮ್ಮಿಕೊಂಡು ನವ ಮತದಾರರನ್ನು ಪಟ್ಟಿಗೆ ಸೇರ್ಪಡೆ ಮಾಡುವುದು ಮತ್ತು ಮತದಾರರ ಪಟ್ಟಿಯಲ್ಲಿ ತಿದ್ದುಪಡಿ ಕಾರ್ಯಗಳನ್ನು ಮಾಡಲು ಜಿಲ್ಲೆಯಲ್ಲಿ ಯೋಜಿಸಲಾಗಿದೆ. ಈ ಸುವರ್ಣ ಅವಕಾಶವನ್ನು ಬಳಸಿಕೊಂಡು ಆನ್ ಲೈನ್ ನಲ್ಲಿ ಗಿಊಂ ಮತ್ತು ತಿತಿತಿ.ಟಿvsಠಿ.iಟಿ ನಲ್ಲಿ ಅರ್ಜಿ ಸಲ್ಲಿಸಬಹುದು. ಜೊತೆಗೆ ಸ್ಥಳೀಯ ಮತಗಟ್ಟೆ ಅಧಿಕಾರಿಗಳನ್ನು ಸಂಪರ್ಕಿಸಿ ಅಗತ್ಯ ದಾಖಲೆ ನೀಡಿ ನೊಂದಾಯಿಸಿಕೊಳ್ಳುವ0ತೆ ಸಾರ್ವಜನಿಕ ರಲ್ಲಿ ಮನವಿ ಮಾಡಿದರು.

ರ‍್ಯಾಲಿ ಅಂಗವಾಗಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಾಹಕಾಧಿಕಾರಿ ಪಿ.ಶಿವಶಂಕರ್ ರ‍್ಯಾಲಿಯೊಂದಿಗೆ ಬೈಕ್ ಸವಾರಿ ಮಾಡಿ ನಗರದ ಬಜಾರ್ ರಸ್ತೆ, ಗಂಗಮ್ಮಗುಡಿ ರಸ್ತೆ, ಎಂ.ಜಿ ರಸ್ತೆ, ನಿಮ್ಮಾಕಲಕುಂಟೆ, ಕೋರ್ಟ್ ಮುಂಭಾಗ, ಬಿ.ಬಿ.ರಸ್ತೆಯಲ್ಲಿ ಸಂಚರಿಸಿ ಜೂನಿಯರ್ ಕಾಲೇಜಿನಲ್ಲಿ ಬೈಕ್ ರ‍್ಯಾಲಿಯನ್ನು ಅಂತಿಮಗೊಳಿಸಿದರು. ಜಿಲ್ಲಾ ಮಟ್ಟದ ಮತ್ತು ತಾಲ್ಲೂಕು ಮಟ್ಟದ ಅಧಿಕಾರಿಗಳು ಮತ್ತು ಸಿಬ್ಬಂದಿ ಅವರಿಗೆ ಸಾಥ್ ನೀಡಿ ಬೈಕ್ ರ‍್ಯಾಲಿಯನ್ನು ಯಶಸ್ವಿಗೊಳಿಸಿದರು. ಮತದಾರರ ಪಟ್ಟಿ ಸೇರ್ಪಡೆಗೆ ಸ್ವಯಂ ಮುಂದಾಗುತ್ತೇವೆAದು ಸಂಕಲ್ಪವನ್ನು ಈ ಸಂದರ್ಭದಲ್ಲಿ ಬೋಧಿಸಲಾಯಿತು. ಪ್ರಚಾರ ಫಲಕಗಳನ್ನು ಹಿಡಿದು ನೂರಾರು ಬೈಕ್ ಸವಾರರು ರ‍್ಯಾಲಿಗೆ ಮೆರುಗು ನೀಡಿದರು.

ಈ ಸಂದರ್ಭದಲ್ಲಿ ಸಾರ್ವಜನಿಕರು, ಕಾಲೇಜು ವಿದ್ಯಾರ್ಥಿಗಳು ಸೇರಿದಂತೆ ಇತರರು ಇದ್ದರು.