Thursday, 12th December 2024

ಬಹುಮತ ಸಿಗದಿದ್ದರೆ ಪಕ್ಷ ವಿಸರ್ಜನೆ: ಎಚ್.ಡಿ.ಕುಮಾರಸ್ವಾಮಿ

ಹಳಿಯಾಳ: ಉತ್ತರ ಕನ್ನಡ ಜಿಲ್ಲೆ ಹಳಿಯಾಳದಲ್ಲಿ ಜೆಡಿಎಸ್ ಅಭ್ಯರ್ಥಿ ಎಸ್.ಎಲ್. ಘೋಟ್ನೆಕರ್ ಪರ ಪ್ರಚಾರ ನಡೆಸಿರುವ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ, ಈ ಬಾರಿ ಸರ್ಕಾರ ರಚಿಸಲು ನಮಗೆ ಬಹುಮತ ಸಿಗದಿದ್ದರೆ ಪಕ್ಷವನ್ನೇ ವಿಸರ್ಜಿಸುವುದಾಗಿ ಮಹತ್ವದ ಹೇಳಿಕೆ ನೀಡಿದ್ದಾರೆ.

ವಿಧಾನಸಭಾ ಚುನಾವಣೆಯಲ್ಲಿ ಗೆಲುವಿಗಾಗಿ ಭರ್ಜರಿ ತಯಾರಿ ನಡೆಸಿರುವ ಜಾತ್ಯಾತೀತ ಜನತಾದಳ, ಚುನಾವಣಾ ದಿನಾಂಕ ಘೋಷಣೆಗೂ ಮುನ್ನವೇ ತನ್ನ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಪ್ರಕಟಿಸಿತ್ತು. ಶಾಸಕಾಂಗ ಪಕ್ಷದ ನಾಯಕ ಕುಮಾರಸ್ವಾಮಿ ಅವರ ನೇತೃತ್ವ ದಲ್ಲಿ ರಾಜ್ಯದಾದ್ಯಂತ ಪಂಚರತ್ನ ರಥ ಯಾತ್ರೆ ನಡೆದಿದ್ದು, ಬಹುಮತ ಸಿಗುವ ವಿಶ್ವಾಸ ಹೊಂದಿದ್ದಾರೆ.

ರಾಜ್ಯದ ಜನತೆ ಜೆಡಿಎಸ್ ಅಭ್ಯರ್ಥಿಗಳಿಗೆ ಆಶೀರ್ವಾದ ಮಾಡುವ ವಿಶ್ವಾಸವನ್ನು ತಾವು ಹೊಂದಿದ್ದು, ಒಂದು ವೇಳೆ ಸರ್ಕಾರ ರಚಿಸಲು ಬಹುಮತ ಸಿಗದಿದ್ದರೆ ಪಕ್ಷವನ್ನೇ ವಿಸರ್ಜಿ ಸಲು ತೀರ್ಮಾನ ಕೈಗೊಂಡಿದ್ದೇನೆ ಎಂದು ಕುಮಾರಸ್ವಾಮಿ ಹೇಳಿದ್ದಾರೆ. ಇದೇ ಸಂದರ್ಭದಲ್ಲಿ ಕಾಂಗ್ರೆಸ್ ಶಾಸಕ ಆರ್.ವಿ. ದೇಶಪಾಂಡೆ ವಿರುದ್ಧವೂ ಎಚ್.ಡಿ.ಕೆ. ವಾಗ್ದಾಳಿ ನಡೆಸಿದ್ದಾರೆ.