Thursday, 12th December 2024

ಜೆಡಿಎಸ್ ಪಕ್ಷವನ್ನು ಮುಗಿಸಲು ಯಾರಿಂದಲೂ ಸಾಧ್ಯವಿಲ್ಲ: ನಿಖಿಲ್ 

ತುಮಕೂರು: ಜೆಡಿಎಸ್ ಪಕ್ಷವನ್ನು ಮುಗಿಸಲು ಯಾರಿಂದಲೂ ಸಾಧ್ಯವಿಲ್ಲ. ಇದೊಂದು ಕಾರ್ಯಕರ್ತರ ಪಕ್ಷ ಎಂದು ಜೆಡಿಎಸ್ ಯುವನಾಯಕ ನಿಖಿಲ್ ಕುಮಾರಸ್ವಾಮಿ ತಿಳಿಸಿದರು.
ನಗರದ ಕೊಲ್ಲಾಪುರದಮ್ಮ ದೇವಾಲಯದಲ್ಲಿ ಜೆಡಿಎಸ್ ಪಕ್ಷದ ಸದಸ್ಯತ್ವ ನೋಂದಣಿಗೆ ಚಾಲನೆ ನೀಡಿ ಮಾತನಾಡಿದರು.

ಕಾಂಗ್ರೆಸ್‌ ಪಕ್ಷದವರು ಕುಮಾರಸ್ವಾಮಿ ಅವರನ್ನು ಐದು ವರ್ಷ ಮುಖ್ಯಮಂತ್ರಿ ಎಂದು ಕರೆದುಕೊಂಡು ಹೋದರು. ಮತ್ತೆ ಮಾಜಿ ಪ್ರಧಾನಿ ದೇವೇಗೌಡರನ್ನು ಲೋಕಸಭೆಗೆ ಕರೆದುಕೊಂಡು ಬಂದು ವಿಶ್ವಾಸ ದ್ರೋಹವೆಸಗುವ ಕೆಲಸ ಮಾಡಿದ್ದರು. ಆದರೂ ಜೆಡಿಎಸ್ ಪಕ್ಷದವರು ಎದೆಗುಂದಲಿಲ್ಲ ಎಂದರು.

ಜೆಡಿಎಸ್ ಪಕ್ಷವನ್ನು ಮುಗಿಸಲು ಪ್ರಯತ್ನ ಮಾಡಿದಷ್ಟು ಪುಟಿದೇಳುತ್ತಿರುತ್ತೇವೆ. ಪ್ರತಿಯೊಬ್ಬ ಕಾರ್ಯಕರ್ತರು ನಮ್ಮ ಪಕ್ಷದ ಐಕಾನ್ ಎಂದು ಹೇಳಿದರು.