Friday, 13th December 2024

ಜಿ.ಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಿಷಿ ಆನಂದ ವಿವಿಧೆಡೆ ಭೇಟಿ, ಪರಿಶೀಲನೆ

ಕೊಲ್ಹಾರ: ತಾಲೂಕಿನ ತೆಲಗಿ, ರೋಣಿಹಾಳ ಹಾಗೂ ಮುಳವಾಡ ಗ್ರಾಮ ಪಂಚಾಯಿತಿಗಳಿಗೆ ಜಿ.ಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಿಷಿ ಆನಂದ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ತೆಲಗಿ ಗ್ರಾಮದ ಅಂಗನವಾಡಿ ಕೇಂದ್ರಗಳಿಗೆ ಭೇಟಿ ನೀಡಿ ಪ್ರತಿ ತಿಂಗಳು ಕಡ್ಡಾಯವಾಗಿ ಮಕ್ಕಳಿಗೆ, ಬಾಣಂತಿಯರಿಗೆ ಪೂರಕ ಪೌಷ್ಠಿಕ ಆಹಾರದ ಸಮರ್ಪಕ ವಿತರಣೆ ಮಕ್ಕಳ ಆರೋಗ್ಯ ತಪಾಸಣೆ, ಅಂಗವಾಡಿ ಕೇಂದ್ರದ ಮಕ್ಕಳಿಗೆ ಹಾಗೂ ಶಾಲಾ ಮಕ್ಕಳಿಗೆ ಆಟವಾಡಲು ಆಟದ ಮೈದಾನ ವನ್ನು ಅಭಿವೃದ್ಧಿ ಪಡಿಸಲು ಸೂಚನೆ ನೀಡಿದರು. ಗ್ರಾಮದಲ್ಲಿ ನೂತನವಾಗಿ ನಿರ್ಮಾಣಗೊಂಡಿರುವ ಗ್ರಂಥಾಲಯಕ್ಕೆ ಭೇಟಿ ನೀಡಿ ಪುಸ್ತಕ ಓದಲು ಬರುವ ಸಾರ್ವಜನಿಕರಿಗೆ ಕುಡಿಯವ ನೀರು ಸೇರಿದಂತೆ ಓದುಗರಿಗೆ ಸರ್ವ ರೀತಿಯ ಸೌಲಭ್ಯಗಳನ್ನು ಸಾರ್ವಜನಿಕರಿಗೆ ಅನುಕೂಲವಾಗುವ ರೀತಿಯಲ್ಲಿ ಪುಸ್ತಕ ಗಳನ್ನು ಗ್ರಂಥಾಲಯದಲ್ಲಿ ಅಳವಡಿಸುವ ಜೊತೆಗೆ ಮಕ್ಕಳ ಹಾಗೂ ಯುವಕರಿಗೆ ಸ್ಪರ್ಧಾತ್ಮಕ ಪರಿಕ್ಷೆಗಳಿಗ ಅನೂಕೂಲವಾಗುವಂತ ಪುಸ್ತಕ ಗಳನು ಕಲ್ಪಿಸುವಂತೆ ತಿಳಿಸಿದರು.

ಕೂಸಿನ ಮನೆ ಕೇಂದ್ರದ ಸಿಬ್ಬಂದಿಗಳು ಮಕ್ಕಳನ್ನು ಪ್ರೀತಿಯಿಂದ ಸೇವಾ ಮನೋಭಾವದಿಂದ ನೋಡಿಕೊಳ್ಳಬೇಕು. ಕೇಂದ್ರದಲ್ಲಿ ಸ್ವಚ್ಛತೆ ಕಾಪಾಡಿ ಕೊಳ್ಳುವ ಜೊತೆಗೆ ಜವಾಬ್ದಾರಿಯಿಂದ ನಿರ್ವಹಿಸಿ ಯೋಜನೆಯನ್ನು ಯಶಸ್ವಿಯಾಗಿಸಬೇಕು ಎಂದು ಸೂಚಿಸಿದರು.

ರೋಣಿಹಾಳ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುಪಕಡ್ಡಿ ಗ್ರಾಮದ ಆರ್.ಎಂ.ಎಸ್‌.ಎ ಪ್ರೌಢ ಶಾಲೆಗೆ ಭೇಟಿ ನೀಡಿ ಶಾಲೆಯ ಮೂರು ವರ್ಗಕೋಣೆಗಳಲ್ಲಿ ತಂತ್ರಜ್ಞಾನಾಧಾರಿತ ಸ್ಮಾರ್ಟ್‌ ಕ್ಲಾಸ್‌ ಬೋರ್ಡ ಗಳನ್ನು ವಿಕ್ಷಣೆ ಮಾಡಿ ಮೆಚ್ಚುಗೆ ವ್ಯಕ್ತಪಡಿಸಿ ವಿದ್ಯಾರ್ಥಿಗಳೊಂದಿಗೆ ಚರ್ಚೆ ನಡೆಸಿದರು.

10ನೇಯ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿ ದುಂಡಪ್ಪ ಸಿದ್ದಪ್ಪ ಕುರದಡ್ಡಿ ಜೋತೆಗೆ ಮಾತನಾಡಿ ಸಮಸ್ಯೆಗಳನ್ನು ಆಲಿಸಿದರು. ನರೇಗಾ ಯೋಜನೆಯಡಿ ಪ್ರಗತಿಯಲ್ಲಿರುವ ಆಟದ ಮೈದಾನ ಅಭಿವೃದ್ಧಿ ಕಾಮಗಾರಿಯನ್ನು ವಿಕ್ಷಣೆ ಮಾಡಿ ಆದಷ್ಟು ಬೇಗ ಪ್ರಗತಿಯಲ್ಲಿರುವ ಎಲ್ಲಾ ಕೆಲಸಗಳನ್ನು ಪೂರ್ಣಗೊಳಿಸಲು ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಸುಕನ್ಯಾ ಲಂಬು ಅವರಿಗೆ ಸೂಚನೆ ನೀಡಿದರು.

ಮುಳವಾಡ ಗ್ರಾಮದ ನಮ್ಮೂರ ಸರಕಾರಿ ಕನ್ನಡ ಗಂಡು ಮಕ್ಕಳ ಹಿರಿಯ ಪ್ರಾಥಮಿಕ ಶಾಲೆಗೆ ಭೇಟಿ ಮಾಡಿ ಶಾಲಾ ಕೊಠಡಿಗಳನ್ನು ಪರಿಶಿಲಿಸಿದರು. ನರೇಗಾ ಯೋಜನೆಯಡಿಯಲ್ಲಿ ಆಟದ ಮೈದಾನ , ಮಳೆ ನೀರಿನ ಕೊಯ್ಲು, ಕಿಚನ್‌ ಗಾರ್ಡನ್‌ ನಿರ್ಮಾಣ ಮಾಡಲು ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ರಾಘವೇಂದ್ರ ಪಂಚಾಳ ಅವರಿಗೆ ಸೂಚನೆ ನೀಡಿದರು.

ಈ ಸಂದರ್ಭದಲ್ಲ ತಾ.ಪಂ ಕಾರ್ಯನಿರ್ವಾಹಕ ಅಧಿಕಾರಿ ಸುನಿಲ್ ಮುದ್ದೀನ್, ಜಿ.ಪಂ ಸಹಾಯಕ ಯೋಜನಾಧಿಕಾರಿ ಅರುಣಕುಮಾರ ದಳವಾಯಿ, ಬ.ಬಾಗೇವಾಡಿ ತಾ.ಪಂ ಕಾರ್ಯನಿರ್ವಾಹಕ ಅಧಿಕಾರಿ ಪ್ರಕಾಶ ದೇಸಾಯಿ, ಶಿಶು ಅಬಿವೃದ್ದಿ ಯೋಜನಾಧಿಕಾರಿ ಶ್ರೀಮತಿ ನಿರ್ಮಲಾ ಸುರಪುರ, ಪಂಚಾ ಯತ್ ರಾಜ್ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರ ವಿಲಾಸ ರಾಠೋಡ, ಜನಜೀವನ ಮಿಷನ್ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರ ವಿ. ಬಿ ಗೊಂಗಡಿ ಸಹಿತ ಅನೇಕ ಅಧಿಕಾರಿಗಳು ಇದ್ದರು.