Saturday, 23rd November 2024

K H Muniyappa: ಬಣ ರಾಜಕೀಯದ ಹಿಂದೆ ಯಾರಿದ್ದಾರೆ ಎಂಬುವುದು ನನಗೆ ಗೊತ್ತಿದೆ- ಕೆ.ಹೆಚ್.ಮುನಿಯಪ್ಪ

ಚಿಂತಾಮಣಿ: ಕೆ.ಎಚ್.ಮುನಿಯಪ್ಪ ಬಣ ಹಾಗೂ ಮಾಜಿ ಸ್ಪೀಕರ್ ರಮೇಶ್ ಕುಮಾರ್ ಬಣದ ಮುಖಂಡರ ನಡುವೆ ನಡೆದಿರುವ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಭಾನುವಾರ ಕೈವಾರದಲ್ಲಿ ಮಾಧ್ಯಮದೊಂದಿಗೆ ಮಾತನಾಡಿದ ಕೆಹೆಚ್ ಮುನಿಯಪ್ಪ ತಪ್ಪಿತಸ್ಥರ ವಿರುದ್ದ ಕೆಪಿಸಿಸಿಗೆ ದೂರು ನೀಡುವುದಾಗಿ ತಿಳಿಸಿದರು.

ಇತ್ತೀಚೆಗೆ ಕೋಲಾರದಲ್ಲಿ ನಡೆದಿದ್ದ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಲಕ್ಷ್ಮಿನಾರಾಯಣ್ ಹಾಗೂ ಮಾಜಿ ಸ್ಪೀಕರ್ ರಮೇಶ್ ಕುಮಾರ್ ಬಣದ ಮುಖಂಡರ ನಡುವಿನ ಹಲ್ಲೆ ಜಗಳದ ಬಗ್ಗೆ ಮಾತನಾಡಿದ ಸಚಿವ ಕೆ.ಹೆಚ್.ಮುನಿಯಪ್ಪ ಈ ಘಟನೆಯನ್ನು ತೀವ್ರವಾಗಿ ಖಂಡಿಸಿದ್ದಾರೆ. ಈ ಘಟನೆಯ ಹಿಂದೆ ಯಾರು ಇದ್ದಾರೆ ಎಂಬುವುದು ನನಗೆ ಗೊತ್ತಿದೆ ಈ ಕುರಿತು ನಾನು ಕಾಂಗ್ರೆಸ್ ಪ್ರದೇಶ ಸಮಿತಿಗೆ ದೂರು ನೀಡುವುದಾಗಿ ಸ್ಪಷ್ಟಪಡಿಸಿದ್ದಾರೆ.

ಚಿಂತಾಮಣಿ ತಾಲೂಕಿನ ಕೈವಾರ ಕ್ಷೇತ್ರಕ್ಕೆ ಭೇಟಿ ನೀಡಿದ್ದ ವೇಳೆ ವೇಳೆ ಸಚಿವ ಕೆ.ಹೆಚ್.ಮುನಿಯಪ್ಪ ಚಿಕ್ಕ ವಿಷಯ ಗಳನ್ನು ದೊಡ್ಡದಾಗಿ ಮಾಡಿಕೊಳ್ಳಬಾರದಾಗಿತ್ತು. ಒಬ್ಬ ಅಧ್ಯಕ್ಷರ ಮೇಲೆ ಈ ರೀತಿ ದಾಳಿ ಮಾಡಿರುವುದು ಖಂಡ ನೀಯ. ಅಧ್ಯಕ್ಷರಿಗೆ ಅಪಮಾನ ಮಾಡಿರುವುದು ಕಾಂಗ್ರೆಸ್ ಪ್ರದೇಶ ಸಮಿತಿಗೆ ಅಪಮಾನ ಮಾಡಿದಂತಾಗುತ್ತದೆ. ನಿಜವಾದ ಕಾಂಗ್ರೆಸ್ ನವರು ಆಗಿದ್ರೆ ಈ ರೀತಿ ಮಾಡುತ್ತಿರಲಿಲ್ಲಾ. ಈ ಘಟನೆಯಿಂದ ನನಗೆ ಸಾಕಷ್ಟು ನೋವಾಗಿದೆ ಎಂದು ಬೇಸರ ವ್ಯಕ್ತಪಡಿಸಿದರು.

ಇನ್ನೂ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರ ಮೇಲೆ ಈ ರೀತಿ ಮಾಡಿರುವುದು ರಾಜ್ಯದ ಗಮನ ಸೆಳೆದಿದೆ. ಈ ರೀತಿ ಮಾಡಿರು ವುದು ಇದಕ್ಕೆ ಪ್ರೋತ್ಸಾಹ ಮಾಡಿದವರು ಸರಿಯಿಲ್ಲಾ. ದೊಡ್ಡ ಪಕ್ಷದಲ್ಲಿ ಭಿನ್ನಾಭಿಪ್ರಾಯ ಬರುವುದು ಸಹಜ. ಅದನ್ನು ಕುಳಿತು ಮಾತುಕತೆ ಮೂಲಕ ಬಗೆಹರಿಸಿಕೊಳ್ಳಬೇಕು. ಆದರೆ ಅಧ್ಯಕ್ಷರ ಮೇಲೆ ಹಲ್ಲೆ ನಡೆದಿರುವುದು ಖಂಡನೀಯ ಇದರಲ್ಲಿ ಯಾರ ಪಾತ್ರ ಇದೆ ಎಂಬುದು ಗೊತ್ತಿದ್ದು ಅಂತಹವರ ಮೇಲೆ ಕ್ರಮ ಕೈಗೊಳ್ಳಬೇಕು ಎಂದು ಪ್ರದೇಶ ಕಾಂಗ್ರೆಸ್ ಸಮಿತಿಗೆ ದೂರು ನೀಡುವುದಾಗಿ ಸ್ಪಷ್ಟಪಡಿಸಿದ್ದಾರೆ.

ಇದನ್ನೂ ಓದಿ: K H Muniyappa: ಪಿಸಿಬಿ ವಾಲಿಬಾಲ್ ಮತ್ತು ಥ್ರೋ ಬಾಲ್ ಪಂದ್ಯಾವಳಿಯ ಲೋಗೋ ಮತ್ತು ಟೀ ಶರ್ಟ್ ಬಿಡುಗಡೆ ಮಾಡಿದ- ಆಹಾರ ಸಚಿವ ಕೆ.ಹೆಚ್.ಮುನಿಯಪ್ಪ.