‘ಪಾಲಾರ್ ಬಾಂಬ್ ಸ್ಫೋಟ’ ಪ್ರಕರಣದಲ್ಲಿ ಮುಖ್ಯ ಆರೋಪಿಯಾಗಿದ್ದ ಜ್ಞಾನಪ್ರಕಾಶ್‌ಗೆ ಗಲ್ಲು ಶಿಕ್ಷೆ ವಿಧಿಸಲಾಗಿತ್ತು. ಬಳಿಕ, ಸುಪ್ರೀಂ ಕೋರ್ಟ್ 2014ರಲ್ಲಿ ಗಲ್ಲು ಶಿಕ್ಷೆ ಬದಲಿಸಿ ಜೀವಾವಧಿ ಶಿಕ್ಷೆ ವಿಧಿಸಿತ್ತು.
ಕಳೆದ ಮೂರು ವರ್ಷಗಳಿಂದ ಶ್ವಾಸಕೋಸ ಕ್ಯಾನ್ಸರ್‌ನಿಂದ ಬಳಲುತ್ತಿದ್ದಾರೆ. ಈ ಹಿನ್ನೆಲೆ ಯಲ್ಲಿ ಮಾನವೀಯತೆ ಆಧಾರದ ಮೇಲೆ ಸುಪ್ರೀಂಕೋರ್ಟ್ ಜಾಮೀನು ಮಂಜೂರು ಮಾಡಿತ್ತು.
ತಮ್ಮ ಜೈಲಿನ ವಸ್ತುಗಳು ಹಾಗೂ ಹಲಸಿನ ಗಿಡದ ಸಸಿಯೊಂದಿಗೆ ಜೈಲಿನಿಂದ ಹೊರ ಬಂದ ಜ್ಞಾನಪ್ರಕಾಶ್ ಅವರನ್ನು ನೋಡಿ ಕುಟುಂಬಸ್ಥರು ಭಾವುಕರಾದರು.
ಹನೂರು ತಾಲೂಕಿನ ಸಂದನಪಾಳ್ಯ ಗ್ರಾಮದ ನಿವಾಸಿಯಾಗಿರುವ ಜ್ಞಾನಪ್ರಕಾಶ್, 1993ರಲ್ಲಿ ನಡೆದ ಪಲಾರ್ ಬಾಂಬ್ ಸ್ಫೋಟ ಪ್ರಕರಣದಲ್ಲಿ ವೀರಪ್ಪನ್, ಸೈಮನ್, ಬಿಲವೇಂದ್ರನ್ ಹಾಗೂ ಮಾದಯ್ಯ ಜೊತೆಗೆ ಭಾಗಿಯಾಗಿದ್ದರು ಎಂದು ಟಾಡಾ ಕಾಯ್ದೆಯಡಿ ಮೈಸೂರಿನ ಟಾಡಾ ನ್ಯಾಯಾಲಯವು 1997ರಲ್ಲಿ ಗಲ್ಲು ಶಿಕ್ಷೆ ವಿಧಿಸಿತ್ತು. ಬಳಿಕ, ಸುಪ್ರೀಂ ಕೋರ್ಟ್ 2014ರಲ್ಲಿ ಗಲ್ಲು ಶಿಕ್ಷೆ ಬದಲಿಸಿ ಜೀವಾವಧಿ ಶಿಕ್ಷೆ ನೀಡಿತ್ತು.
Read E-Paper click here