Wednesday, 27th November 2024

Kalaburagi Police Good Work: ಮತ್ತೆ ತಾಯಿ ಮಡಿಲು ಸೇರಿದ ಹಸುಗೂಸು

ಜಿಮ್ಸ್ ಆಸ್ಪತ್ರೆ ನವಜಾತಾ ಶಿಶು ಅಪಹರಣ ಪ್ರಕರಣ: 36 ಗಂಟೆಯಲ್ಲೇ ಪ್ರಕರಣ ಭೇದಿಸಿದ ಪೊಲೀಸರು

ಪೊಲೀಸ್ ಅಧಿಕಾರಿಗಳ ಕಾರ್ಯಕ್ಕೆ ಎಲ್ಲೆಡೆ ಮೆಚ್ಚುಗೆ ವ್ಯಕ್ತ

ಕಲಬುರಗಿ: ಇಲ್ಲಿನ ಜಿಮ್ಸ್ ಆಸ್ಪತ್ರೆಯಲ್ಲಿ ಸೋಮವಾರ ನವಜಾತಾ ಶಿಶುವನ್ನು ಅಪಹರಣ ಮಾಡಿದ ವಿಡಿಯೋ ಎಲ್ಲೆಡೆ ವೈರಲ್ ಆಗಿ, ರಾಜ್ಯದಾದ್ಯಂತ ಸದ್ದು ಮಾಡಿದ್ದ ಬೆನ್ನಲೇ, ನಗರ ಪೊಲೀಸ್ ಅಧಿಕಾರಿಗಳು ಚುರುಕಿನ ಕಾರ್ಯಾಚರಣೆ ನಡೆಸುವ ಮೂಲಕ ಪುಟ್ಟ ಕಂದಮ್ಮ ಮತ್ತೆ ತನ್ನ ತಾಯಿಯ ಮಡಿಲು ಸೇರುವ ಹಾಗೇ ಮಾಡಿರುವ ಪೊಲೀಸರ ಈ ಕಾರ್ಯಕ್ಕೆ ಜಿಲ್ಲೆಯಲ್ಲಿ ಬಾರಿ ಮೆಚ್ಚುಗೆ ವ್ಯಕ್ತವಾಗಿದೆ.

ಜಿಲ್ಲೆಯ ಚಿತ್ತಾಪುರ ತಾಲೂಕಿನ ರಾವೂರ್ ಗ್ರಾಮದ ದಂಪತಿಗಳಾದ ರಾಮಕೃಷ್ಣ ಸಗರ ಹಾಗೂ ಕಸ್ತೂರಿ ದಂಪತಿಯ ಗಂಡು ಮಗುವನ್ನು ನರ್ಸ್ ವೇಷದಲ್ಲಿ ಆಗಮಿಸಿದ ಇಬ್ಬರು ಮಹಿಳೆಯರು ಜಿಮ್ಸ್ ಆಸ್ಪತ್ರೆಯ ತಾಯಿ ಮತ್ತು ಮಕ್ಕಳ ಚಿಕಿತ್ಸಾ ಘಟಕದಿಂದ ಅಪಹರಣ ಮಾಡಿದ ವಿಡಿಯೋ ಬಾರಿ ವೈರಲ್ ಆಗಿತ್ತು. ಈ ಕುರಿತು ನಗರ ಪೋಲಿಸ್ ಅಧಿಕಾರಿಗಳು ನಡೆಸಿದ 36 ಗಂಟೆಗಳ ಸತತ ಕಾರ್ಯಾಚರಣೆಯಿಂದಾಗಿ ಇದೀಗ ತಾಯಿ-ಮಗು ಒಂದುಗೂಡುವಂತಾಗಿದ್ದು, ಬೆರ್ಪಟ್ಟ ತಾಯಿ-ಮಗುವನ್ನು ಕೇವಲ ಒಂದೇ ದಿನದಲ್ಲಿ ಸೇರಿಸಿರುವ ಪೊಲೀಸರ ಕಾರ್ಯಕ್ಕೆ ಸಾರ್ವಜನಿಕರು ಸಾಮಾಜಿಕ ಜಾಲತಾಣದಲ್ಲಿ ಬಾರಿ ಪ್ರಶಂಸೆ ವ್ಯಕ್ತಪಡಿಸಿ, ಶಬ್ಬಾಸ್ ನೀಡಿದ್ದಾರೆ.

ಈ ಕುರಿತು ಬ್ರಹ್ಮಪುರ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಮಗುವಿನ ಪತ್ತೆಗಾಗಿ ನಗರ ಪೊಲೀಸ್ ಆಯುಕ್ತ ಡಾ. ಶರಣಪ್ಪ ಎಸ್.ಡಿ ಅವರ ಮಾರ್ಗದರ್ಶನದಲ್ಲಿ, ಎಸಿಪಿ ಕನಿಕಾ ಸಿಕ್ರಿವಾಲ್ ಅವರ ನೇತೃತ್ವದಲ್ಲಿ ವಿಶೇಷ ತನಿಖಾ ತಂಡ ರಚಿಸಲಾಗಿತ್ತು. ತ್ವರಿತ ಗತಿಯಲ್ಲಿ ತನಿಖೆ ನಡೆಸಿದ ಪೊಲೀಸರು ಬುಧವಾರ ನಸುಕಿನ ಜಾವ ಅಪಹರಣವಾದ ಗಂಡು ಶಿಶುವನ್ನು ಹೆತ್ತ ತಾಯಿಯ ಮಡಿಲಿಗೆ ಹಾಕಿದ್ದಾರೆ. ಕೇವಲ 36 ಗಂಟೆಯಲ್ಲಿ ಗಂಡು ಶಿಶುವನ್ನು ಪತ್ತೆ ಹಚ್ಚುವಲ್ಲಿ ಯಶಸ್ವಿಯಾದ ಪೊಲೀಸ್ ಅಧಿಕಾರಿ, ಸಿಬ್ಬಂದಿ ಕಾರ್ಯಕ್ಕೆ ಕಮಿಷನರ್ ಡಾ. ಶರಣಪ್ಪ ಎಸ್.ಡಿ ಶ್ಲಾಘಿಸಿದ್ದಾರೆ. ಇನ್ನೂ, ಮಗು ಕಳ್ಳಿಯರನ್ನು ವಶಕ್ಕೆ ಪಡೆದಿರುವ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ ಪೊಲೀಸ್ ಮೂಲಗಳು ತಿಳಿಸಿವೆ.

ಇದನ್ನೂ ಓದಿ: #KalaburagiBreaking