Thursday, 21st November 2024

ಸಾಮೂಹಿಕ ನಕಲು: 16 ಶಿಕ್ಷಕರ ಅಮಾನತು

ಲಬುರಗಿ : ಎಸ್‌ಎಸ್ ಎಲ್ ಸಿ ಪರೀಕ್ಷೆಯಲ್ಲಿ ಸಾಮೂಹಿಕ ನಕಲಿಗೆ ಸಹಕರಿಸಿದ ಆರೋಪದ ಹಿನ್ನೆಲೆಯಲ್ಲಿ ಅಫಜಲ್ಪುರ ತಾಲೂಕಿನ ಗೊಬ್ಬರು ಎಸ್‌ಎಸ್ ಎಲ್ ಸಿ ಪರೀಕ್ಷಾ ಕೇಂದ್ರದ 16 ಶಿಕ್ಷಕರನ್ನು ಅಮಾನತು ಮಾಡಲಾಗಿದೆ.

ಗೊಬ್ಬೂರ (ಬಿ) ಸರ್ಕಾರಿ ಪ್ರೌಢಶಾಲೆಯಲ್ಲಿ ಏಪ್ರಿಲ್ 3 ರಂದು ನಡೆದ ಎಸ್‌ಎಸ್ ಎಲ್ ಸಿ ಪರೀಕ್ಷೆಯಲ್ಲಿ ಸಾಮೂಹಿಕ ನಕಲು ಮಾಡಲು ಅವಕಾಶ ಮಾಡಿಕೊಟ್ಟ ಹಿನ್ನೆಲೆಯಲ್ಲಿ ಪರೀಕ್ಷಾ ಕೇಂದ್ರದ ಅಧೀಕ್ಷಕರು, ಕಸ್ಟೋಡಿಯನ್, ಜಾಗೃತದಳ, ಕೋಣೆ ಮೇಲ್ವಿಚಾರಕರು ಸೇರಿ 16 ಶಿಕ್ಷಕರನ್ನು ಅಮಾನತು ಮಾಡಿ ಆದೇಶ ಹೊರಡಿಸಲಾಗಿದೆ.

ಈ ಕುರಿತು ಮಾಹಿತಿ ನೀಡಿರುವ ಅಪರ ಆಯುಕ್ತ ಆನಂದ ಮೀನಾ, ಎಸ್‌ಎಸ್ ಎಲ್ ಸಿ ಪರೀಕ್ಷೆಯಲ್ಲಿ ಸಾಮೂಹಿಕ ನಕಲಿಗೆ ಅವಕಾಶ ಮಾಡಿಕೊಟ್ಟು ಪರೀಕ್ಷೆಯ ಪಾವಿತ್ರ್ಯತೆಯನ್ನೇ ವಿಫಲಗೊಳಿಸಿ, ಕರ್ತವ್ಯ ಲೋಪ ಎಸಗಿರುವ ಆರೋಪದ ಮೇಲೆ 16 ಶಿಕ್ಷಕರನ್ನು ಸೇವೆಯಿಂದ ಅಮಾನತು ಮಾಡಲಾಗಿದೆ ಎಂದು ತಿಳಿಸಿದ್ದಾರೆ.