Sunday, 15th December 2024

ಕಲ್ಪತರು ನಾಡಿನಲ್ಲಿ ಶಾಸ್ತ್ರಿ, ಗಾಂಧಿ ನಮನ

ತುಮಕೂರು: ನಮ್ಮ ದೇಶಕ್ಕೆ ಅಹಿಂಸಾ ಮಾರ್ಗದ ಮೂಲಕ ಸ್ ಮಹಾತ್ಮಗಾಂಧೀಜಿ ಹಾಗೂ ಕ್ಷೀರ ಕ್ರಾಂತಿಯ ಹರಿಕಾರ ಮಾಜಿ ಪ್ರಧಾನಿ ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಆದರ್ಶವನ್ನು ಪ್ರತಿಯೊ ಬ್ಬರೂ ಪಾಲಿಸಬೇಕು ಎಂದು ಜಿಲ್ಲಾಧಿಕಾರಿ ಕೆ.ಶ್ರೀನಿವಾಸ್ ಕರೆ ನೀಡಿದರು.
ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜಿಲ್ಲಾಡಳಿತದ ವತಿಯಿಂದ ಹಮ್ಮಿಕೊಂಡಿದ್ದ ರಾಷ್ಟçಪಿತ ಮಹಾತ್ಮಗಾಂಧೀಜಿಯವರ 154ನೇ ಜಯಂತಿ ಹಾಗೂ ಮಾಜಿ ಪ್ರಧಾನಿ ಲಾಲ್ ಬಹ ದ್ದೂರ್ ಶಾಸ್ತ್ರಿ ಅವರ 119ನೇ ಜಯಂತಿಯನ್ನು ಮಹನೀಯರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸುವ ಮೂಲಕ ಗೌರವ ಸಮರ್ಪಿಸಿ ಅವರು ಮಾತನಾಡಿ ದರು.
ನಾವು ಆರ್ಥಿಕವಾಗಿ ಮತ್ತು ಆಹಾರ ಉತ್ಪಾದನೆಯಲ್ಲಿ ಸದೃಢರಾಗಿದ್ದೇವೆ. ಆದರೆ ಅಂದು ಇದ್ಯಾವುದೂ ಸಹ ಇರಲಿಲ್ಲ. ಅಂದು ತಳಮಟ್ಟದಿಂದ ಎಲ್ಲವನ್ನು ಸಾಧಿಸಲು ಈ ಮಹಾನ್ ನಾಯಕರ ಪಾತ್ರ ಪ್ರಮುಖಲಾಗಿದೆ ಎಂದರು.
ಜಿಲ್ಲಾ ಕಸಾಪ ಅಧ್ಯಕ್ಷ ಕೆ.ಎಸ್. ಸಿದ್ದಲಿಂಗಪ್ಪ, ಈ ಸಂದರ್ಭದಲ್ಲಿ ಶಾಸಕ ಜ್ಯೋತಿಗಣೇಶ್, ಜಿ.ಪಂ. ಮುಖ್ಯ ಕಾರ್ಯನಿರ್ವಣಾಧಿಕಾರಿ ಜಿ. ಪ್ರಭು, ಉಪವಿಭಾಗಾಧಿಕಾರಿ ಗೌರವಕುಮಾರ್ ಶೆಟ್ಟಿ, ತಹಶೀಲ್ದಾರ್ ಸಿದ್ದೇಶ್, ಮೋಹನ್‌ಕುಮಾರ್, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕಿ ಮಮತಾ, ಜಿಲ್ಲಾ ಸರಕಾರಿ ನೌಕರರ ಸಂಘದ ಅಧ್ಯಕ್ಷ ನರಸಿಂಹರಾಜು ಮತ್ತಿತರರು ಭಾಗವಹಿಸಿದ್ದರು.
ಗಾಂಧೀಜಿಯವರ ಆದರ್ಶವನ್ನು  ವಿಶ್ವವೇ ಮೆಚ್ಚಿದೆ
ಮಹಾತ್ಮ ಗಾಂಧೀಜಿಯವರ ಆದರ್ಶಗಳನ್ನು ಇಡೀ ವಿಶ್ವವೇ ಮೆಚ್ಚಿ ಕೊಂಡಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಾ. ಜಿ ಪರಮೇಶ್ವರ್ ಹೇಳಿದರು. ನಗರದ ಸರಕಾರಿ ಪದವಿ ಪೂರ್ವ ಕಾಲೇಜು ಮೈದಾನದಲ್ಲಿ ಮಹಾ ನಗರ ಪಾಲಿಕೆ ವತಿಯಿಂದ   ಏರ್ಪಡಿಸಲಾಗಿದ್ದ ಮಹಾತ್ಮ ಗಾಂಧೀಜಯಂತಿ ಹಾಗೂ ಲಾಲ್ ಬಹುದ್ದೂರ್ ಶಾಸ್ತ್ರಿ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದರು.
ತುಮಕೂರು ಜಿಲ್ಲೆಗೆ ಮಹಾತ್ಮ ಗಾಂಧೀಜಿಯವರು ಆಗಮಿಸಿದ್ದರು. ಮೊದಲಿಗೆ 1927ರಲ್ಲಿ ಸರಕಾರಿ ಪದವಿ ಪೂರ್ವ ಕಾಲೇಜಿನ ಆವರಣಕ್ಕೆ ಬಂದು ಒಂದು ದಿನ ತಂಗಿ ಸ್ವಾತಂತ್ರ್ಯ ಹೋರಾಟದ ಬಗ್ಗೆ ಅಸ್ಪೃಶ್ಯತೆ ಬಗ್ಗೆ  ಅರಿವು ಮೂಡಿಸಿದ್ದರು. ಗಾಂಧೀಜಿ  ತಂಗಿದ್ದ ಕೊಠಡಿಯನ್ನು ಪಾಲಿಕೆ ವತಿಯಿಂದ ಅಭಿವೃದ್ಧಿಪಡಿಸಲಾಗಿದೆ ಹಾಗೂ ಆ ಕೊಠಡಿ ಮುಂಭಾಗದಲ್ಲಿ ಗಾಂಧಿ ಪ್ರತಿಮೆಯನ್ನು ಸ್ಥಾಪಿಸಲಾಗಿದೆ ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಶಾಸಕ ಜ್ಯೋತಿ ಗಣೇಶ್, ಮಹಾನಗರ ಪಾಲಿಕೆಯ ಮೇಯರ್ ಪ್ರಭಾವತಿ, ಉಪ ಮೇಯರ್ ನರಸಿಂಹಮೂರ್ತಿ, ಜಿಲ್ಲಾಧಿಕಾರಿ ಕೆ ಶ್ರೀನಿವಾಸ್, ಜಿಪಂ ಸಿಇಒ ಪ್ರಭು,  ಎಸ್ಪಿ ಅಶೋಕ್, ಪಾಲಿಕೆ ಆಯುಕ್ತೆ ಅಶ್ವಿಜ  ಮತ್ತಿತರರು ಉಪಸ್ಥಿತರಿದ್ದರು.
ಆದರ್ಶ ಪಾಲಿಸಿದರೆ ಮೌಲ್ಯಯುತ ಸಮಾಜ
ತುಮಕೂರು: ನಮ್ಮ ದೇಶದ ಮಹಾನ್‌ ವ್ಯಕ್ತಿಗಳ ಆದರ್ಶಗಳನ್ನು ನಾವು ನಿತ್ಯ ಜೀವನದಲ್ಲಿ ಪಾಲಿಸಿದರೆ ಮೌಲ್ಯಯುತ ಸಮಾಜ ನಿರ್ಮಾಣವಾಗುತ್ತದೆ ಎಂದು ಸಿದ್ಧಗಂಗಾ ಆಸ್ಪತ್ರೆ ನಿರ್ದೇಶಕ ಡಾ.ಎಸ್.ಪರಮೇಶ್‌ ತಿಳಿಸಿದರು.
ಸಿದ್ಧಗಂಗಾ ಆಸ್ಪತ್ರೆಯಲ್ಲಿ ಹಮ್ಮಿಕೊಂಡಿದ್ದ ಮಹತ್ಮಗಾಂಧೀಜಿ ಹಾಗೂ ಲಾಲ್‌ ಬಹದ್ಧೂರ್‌ ಶಾಸ್ತ್ರಿ ಜಯಂತಿಯಲ್ಲಿ ಮಾತನಾಡಿ,  ಮಹಾತ್ಮ ಗಾಂಧೀಜಿ ಯವರು ಸತ್ಯ ಹಾಗೂ ಸಮಯ ಪಾಲನೆಗೆ ಹೆಚ್ಚಿನ ಮಹತ್ವ ನೀಡುತ್ತಿದ್ದರೆ, ಲಾಲ್‌ ಬಹದ್ಧೂರ್‌ ಶಾಸ್ತ್ರಿ ದೇಶದ ಆರ್ಥಿಕತೆ ಹಾಗೂ ಪ್ರಮಾಣಿಕತೆಯನ್ನು ತಮ್ಮ ದಾರಿಯನ್ನಾಗಿಸಿಕೊಂಡವರು ಅವರ ಚಿಂತನೆಗಳು ನಮ್ಮ ಜೀವನದ ದಾರಿದೀಪವಾಗಬೇಕು ಎಂದರು.
ಸಿದ್ಧಗಂಗಾ ಮೆಡಿಕಲ್‌ ಕಾಲೇಜಿನ ಪ್ರಾಂಶುಪಾಲರಾದ ಡಾ.ಶಾಲಿನಿ  ಮಾತನಾಡಿ ಇಬ್ಬರು ಮಹಾನ್‌ ಚೇತನರ ಜನ್ಮದಿನ ಒಂದೇ ದಿನ ಬಂದಿದೆ. ಸಮಾನ ಮನಸ್ಕರು ಅವರುಗಳ ಸರಳತೆ ಬದ್ಧತೆ ಹಾಗೂ ಸತ್ಯ, ರಾಷ್ಟ್ರಭಕ್ತಿಯಿಂದ ಪ್ರತಿಯೊಬ್ಬರೂ ಕಲಿಯಬೇಕಿದೆ. ನಮ್ಮ ನಾಯಕರು ನಿರ್ಮಿಸಿದ ಸಮಾಜ ಹಾಗೂ ಆದರ್ಶಗಳನ್ನು ಸದೃಢವಾಗಿ ಕಟ್ಟುವ ಜವಾಬ್ದಾರಿ ಇಂದಿನ ಯುವಜನತೆಯ ಮೇಲಿದೆ ಎಂದರು. ವೈದ್ಯಕೀಯ ಕಾಲೇಜಿನ ಉಪನ್ಯಾಸಕರು, ವಿದ್ಯಾರ್ಥಿಗಳು ಹಾಗೂ ಸಿಬ್ಬಂದಿ ಉಪಸ್ಥಿತರಿದ್ದರು.
ಬಾಪೂಜಿ ಕಾಲೇಜಿನಲ್ಲಿ ಗಾಂಧಿ ಜಯಂತಿ
ತುಮಕೂರು: ನಗರದ ಬಾಪೂಜಿ ಕಾಲೇಜಿನ ರವೀಂದ್ರ ಕಲಾನಿಕೇತನ ಸಭಾಂಗಣದಲ್ಲಿ ಜಿಲ್ಲಾ ವಿಷ್ಣು ಸೇನಾ ಸಮಿತಿ ವತಿಯಿಂದ ಹಮ್ಮಿಕೊಂಡಿದ್ದ ಗಾಂಧಿ ಜಯಂತಿ ಕಾರ್ಯಕ್ರಮದಲ್ಲಿ ಹಿರಿಯ ಸ್ವಾತಂತ್ರ್ಯ ಹೋರಾಟಗಾರರ ಟಿ ಆರ್. ರೇವಣ್ಣ ಅವರನ್ನು ಸನ್ಮಾನಿಸಲಾಯಿತು.
ಕಾರ್ಯಕ್ರಮದಲ್ಲಿ ಗಾಂಧಿವಾದಿ ಎಂ. ಬಸವಯ್ಯ,  ಡಾ. ವಿಷ್ಣು ಸೇನಾ ಸಮಿತಿ ಜಿಲ್ಲಾಧ್ಯಕ್ಷ ಮೂರ್ತಿ,  ಉಪಾಧ್ಯಕ್ಷ ಹೃದಯ ಚಂದನ್, ನಗರ ಅಧ್ಯಕ್ಷ ಎಸ್. ರಾಮಚಂದ್ರ ರಾವ್, ಕಾರ್ಯದರ್ಶಿ ವಿಷ್ಣುಕುಮಾರ್, ಅಂತೋನಿರಾಜ್, ಜಿಲ್ಲಾ ವಕ್ಫ್ ಬೋರ್ಡ್ ಉಪಾಧ್ಯಕ್ಷ ಶಬ್ಬೀರ್ ಅಹ್ಮದ್, ರಿಯಾಜ್ ಅಹಮದ್, ಇಮ್ರಾನ್ ಅಹಮದ್, ಸೈಯದ್ ನೂರ್ ಮೊಹಮ್ಮದ್, ಆರ್. ನಾಗರಾಜು. ಅನಿಲ್‌ಕುಮಾರ್, ಯೋಗೀಶ್, ದಿವಾಕರ್, ಶ್ರೀಹಿತ್, ರಾಮಣ್ಣ, ಪ್ರಸನ್ನ ಕುಮಾರ್ ಹಾಗೂ ರವೀಂದ್ರ ಕಲಾನಿಕೇತನ ಕಾಲೇಜಿನ ಎಲ್ಲಾ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.