Thursday, 12th December 2024

ನಾಮಪತ್ರ ಸಲ್ಲಿಸಿದ ಸಚಿವ ಆರ್.ಅಶೋಕ್

R Ashok

ರಾಮನಗರ : ರಾಜ್ಯ ರಾಜಕೀಯದಲ್ಲಿ ತೀವ್ರ ಕುತೂಹಲ ಮೂಡಿಸಿರುವ ಕನಕಪುರ ವಿಧಾನಸಭೆ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಯಾಗಿ ಸಚಿವ ಆರ್. ಅಶೋಕ್ ನಾಮಪತ್ರ ಸಲ್ಲಿಕೆ ಮಾಡಿದ್ದಾರೆ.

ಕನಕಪುರದಲ್ಲಿ ಇಂದು ಬೃಹತ್ ರೋಡ್ ಶೋ ಮೂಲಕ ಸಚಿವ ಅಶೋಕ್ ತಹಸೀಲ್ದಾರ್ ಕಚೇರಿಗೆ ಕಾರ್ಯಕರ್ತರ ಜೊತೆಗೆ ಬೃಹತ್ ಮೆರವಣಿಗೆ ಮೂಲಕ ಆಗಮಿಸಿ ನಾಮಪತ್ರ ಸಲ್ಲಿಕೆ ಮಾಡಿದ್ದಾರೆ.

ಅಶೋಕ್ ನಾಮಪತ್ರ ಸಲ್ಲಿಕೆ ಕಾರ್ಯಕ್ರಮದಲ್ಲಿ ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್, ಸಚಿವ ಅಶ್ವತ್ಥ್ ನಾರಾಯಣ ಸಾಥ್ ನೀಡಿದ್ದಾರೆ. ಇನ್ನು ಕನಕಪುರ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ನಿನ್ನೆಯಷ್ಟೇ ಡಿ.ಕೆ. ಶಿವಕುಮಾರ್ ನಾಮಪತ್ರ ಸಲ್ಲಿಕೆ ಮಾಡಿದ್ದಾರೆ.