Friday, 22nd November 2024

Kannada Rajyotsava: ತುಮಕೂರು ವಿವಿಯಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ

Kannada Rajyotsava

ತುಮಕೂರು: ರಾಷ್ಟ್ರೀಯ ಹಾಗೂ ರಾಜ್ಯ ಹಬ್ಬಗಳ ಆಚರಣೆಯ ದಿನಗಳನ್ನು ರಜಾ ದಿನವೆಂದು ಪರಿಗಣಿಸದೆ, ದೇಶ, ನಾಡು-ನುಡಿಗಾಗಿ (Kannada Rajyotsava) ಶ್ರಮಿಸುವ ಕರ್ತವ್ಯ ದಿನವೆಂದು ಎಲ್ಲರೂ ಕಾರ್ಯನಿರ್ವಹಿಸಬೇಕು ಎಂದು ತುಮಕೂರು ವಿಶ್ವವಿದ್ಯಾಲಯದ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಹೇಳಿದರು. ತುಮಕೂರು ವಿಶ್ವವಿದ್ಯಾಲಯದಲ್ಲಿ ಶುಕ್ರವಾರ ಆಯೋಜಿಸಲಾಗಿದ್ದ 69ನೇ ಕರ್ನಾಟಕ ರಾಜ್ಯೋತ್ಸವ ಆಚರಣೆಯಲ್ಲಿ ಅವರು ಮಾತನಾಡಿದರು.

ಈ ಸುದ್ದಿಯನ್ನೂ ಓದಿ | Kannada Rajyotsava: ಭಾಷೆಯನ್ನು ಬೆಳೆಸಿ ಉಳಿಸಲು ಮೊದಲು ಕನ್ನಡಿಗರಾಗಿ: ಸಿಎಂ ಕರೆ

ರಾಜ್ಯದ ಎಲ್ಲ ಶಿಕ್ಷಣ ಸಂಸ್ಥೆಗಳಲ್ಲೂ ಕನ್ನಡ ಭಾಷೆ ಆಡಳಿತ ಭಾಷೆಯಾಗಬೇಕು. “ಕನ್ನಡ ಮಾತನಾಡಿ, ಕನ್ನಡದಲ್ಲೇ ವ್ಯವಹರಿಸಿ” ಎಂದು ಕಡ್ಡಾಯ ಮಾಡುವ ಕಾಲದಲ್ಲಿ ನಾವಿರುವುದು ಬೇಸರದ ಸಂಗತಿ. ಕರ್ನಾಟಕದಲ್ಲಿ ಕನ್ನಡ ಭಾಷೆಯೇ ಸಾರ್ವಭೌಮ ಎಂದು ತಿಳಿಸಿದರು.

ಈ ಸುದ್ದಿಯನ್ನೂ ಓದಿ | Rajyotsava Award 2024: 69 ಸಾಧಕರಿಗೆ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ ಮಾಡಿದ ಸಿಎಂ

ಈ ಸಂದರ್ಭದಲ್ಲಿ ತುಮಕೂರು ವಿಶ್ವವಿದ್ಯಾಲಯದ ಕುಲಸಚಿವೆ ನಾಹಿದಾ ಜಮ್ ಜಮ್, ರಾಷ್ಟ್ರೀಯ ಹಬ್ಬಗಳ ಆಚರಣೆ ಸಂಯೋಜಕ ಡಾ. ಎ.ಎಂ. ಮಂಜುನಾಥ, ಹಣಕಾಸು ಅಧಿಕಾರಿ ನರಸಿಂಹಮೂರ್ತಿ ಹಾಗೂ ವಿವಿಯ ಬೋಧಕ-ಬೋಧಕೇತರ ಸಿಬ್ಬಂದಿ, ವಿದ್ಯಾರ್ಥಿಗಳು ಭಾಗವಹಿಸಿದ್ದರು.