Friday, 22nd November 2024

Kannada Rajyotsava Award: ಕನ್ನಡ ರಾಜ್ಯೋತ್ಸವ ಪ್ರಶಸ್ತಿಗೆ 1:3 ಅನುಪಾತದಲ್ಲಿ ಆಯ್ಕೆ ಪಟ್ಟಿ ಅಂತಿಮ

Kannada Rajyotsava Award

ವಿಶ್ವವಾಣಿ ಸುದ್ದಿಮನೆ, ಬೆಂಗಳೂರು: ಕನ್ನಡ ರಾಜ್ಯೋತ್ಸವಕ್ಕೆೆ ಮೂರು ದಿನ ಬಾಕಿಯಿರುವ ಹೊಸ್ತಿಲಲ್ಲಿಯೇ ರಾಜ್ಯ ಸರಕಾರ ಕನ್ನಡ ರಾಜ್ಯೋತ್ಸವ ಪ್ರಶಸ್ತಿಗೆ ಸಾಧಕರನ್ನು (Kannada Rajyotsava Award) ಅಂತಿಮಗೊಳಿಸಿದ್ದು, ಮಂಗಳವಾರ ರಾತ್ರಿ ಅಥವಾ ಬುಧವಾರ ಬೆಳಗ್ಗೆೆ ಪ್ರಕಟವಾಗುವ ಸಾಧ್ಯತೆಯಿದೆ.

ರಾಜ್ಯೋತ್ಸವ ಪ್ರಶಸ್ತಿ ಸಂಬಂಧ ಕೆಲ ದಿನಗಳ ಹಿಂದೆ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಭೆಗೆ ರಾಜ್ಯೋತ್ಸವ ಆಯ್ಕೆ ಸಮಿತಿ ಸದಸ್ಯರು 1:3 ಅನುಪಾತದಲ್ಲಿ ಸಾಧಕರ ಹೆಸರನ್ನು ಸಲ್ಲಿಸಿತ್ತು. ಬಳಿಕ ಸಿದ್ದರಾಮಯ್ಯ ಅವರು ನೀಡಿದ ಕೆಲ ಸೂಚನೆಗಳೊಂದಿಗೆ ಪಟ್ಟಿಯನ್ನು ಅಂತಿಮಗೊಳಿಸಿತ್ತು. ಇದೀಗ ಪ್ರಶಸ್ತಿ ಪುರಸ್ಕೃತರ ಪಟ್ಟಿ ಮಂಗಳವಾರ ರಾತ್ರಿ ಅಥವಾ ಬುಧವಾರ ಬೆಳಗ್ಗೆೆ ಅಧಿಕೃತವಾಗಿ ಪ್ರಕಟವಾಗುವ ಸಾಧ್ಯತೆಯಿದೆ ಎನ್ನಲಾಗಿದೆ.

ಆಯ್ಕೆ ಪ್ರಕ್ರಿಯೆಯಲ್ಲಿ ಪ್ರಮುಖವಾಗಿ ಜಾತಿ, ಧರ್ಮ, ಪಂಥದ ವಿಷಯದಲ್ಲಿ ಯಾವುದೇ ಗೊಂದಲಕ್ಕೆೆ ಆಸ್ಪದ ನೀಡದ ರೀತಿಯಲ್ಲಿ ಕ್ರಮವಹಿಸಲಾಗಿದೆ ಎನ್ನುವ ಮಾತುಗಳನ್ನು ಆಯ್ಕೆ ಸಮಿತಿಯ ಸದಸ್ಯರು ಹೇಳಿದ್ದಾರೆ. ಇದರೊಂದಿಗೆ ಎಲ್ಲ ಕ್ಷೇತ್ರಗಳನ್ನು ಪರಿಗಣಿಸಲಾಗಿದೆ ಎಂದಿದ್ದಾಾರೆ. ಈ ಬಾರಿ 69 ಜನರಿಗೆ ಸನ್ಮಾನಿಸಲಾಗುತ್ತಿದ್ದು, ಐದು ಲಕ್ಷ ನಗದು ಹಾಗೂ 25 ಗ್ರಾಂ ಚಿನ್ನವನ್ನು ರಾಜ್ಯೋತ್ಸವ ಪ್ರಶಸ್ತಿ ಒಳಗೊಂಡಿದೆ.

ಈ ಸುದ್ದಿಯನ್ನೂ ಓದಿ | CM Siddaramaiah: ದ್ವೇಷ ಬಿತ್ತುವವರಿಗೆ ತಕ್ಕ ಶಾಸ್ತಿಯಾಗಬೇಕು; ಸಿದ್ದರಾಮಯ್ಯ