ತುಮಕೂರು:ನಗರದ ಹೃದಯ ಭಾಗದಲ್ಲಿರುವ ಸರಕಾರಿ ಜೂನಿಯರ್ ಕಾಲೇಜು ಮೈದಾನವನ್ನು ಕ್ರೀಡಾ ಚಟುವಟಿಕೆ ಹಾಗೂ ರಾಷ್ಟ್ರೀಯ ಹಬ್ಬಗಳ ಆಚರಣೆಗೆ ಹೊರತು ಪಡಿಸಿ ಬೇರೆ ಖಾಸಗಿ ಕಾರ್ಯಕ್ರಮಗಳಿಗೆ ಬಾಡಿಗೆ ನೀಡದಂತೆ ಅಗತ್ಯ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿ, ಮುಂಜಾನೆ ಗೆಳೆಯರ ಬಳಗ,ಕನ್ನಡ ಸೇನೆ ಹಾಗೂ ವಿವಿಧ ಕನ್ನಡಪರ ಸಂಘಟನೆಗಳ ವತಿಯಿಂದ ಎಡಿಸಿಯವರಿಗೆ ಮನವಿ ಸಲ್ಲಿಸಲಾಯಿತು.