Tuesday, 19th November 2024

Chikkaballapur News: ಕನ್ನಡ ಚಲನಚಿತ್ರಗಳನ್ನು ಪ್ರದರ್ಶಿಸುವಂತೆ ಕನ್ನಡಸೇನೆ ವತಿಯಿಂದ ಅಪರ ಜಿಲ್ಲಾಧಿಕಾರಿಗಳಿಗೆ ಮನವಿ

ಚಿಕ್ಕಬಳ್ಳಾಪುರ : 69ನೇ ಕನ್ನಡ ರಾಜ್ಯೋತ್ಸವ ಪ್ರಯುಕ್ತ ನವೆಂಬರ್-2024ರ ಮಾಹೆಯಲ್ಲಿ ಚಿಕ್ಕಬಳ್ಳಾಪುರ ಜಿಲ್ಲೆಯ ಎಲ್ಲಾ ಚಲನಚಿತ್ರ ಮಂದಿರಗಳಲ್ಲಿ ಕಡ್ಡಾಯವಾಗಿ ಕನ್ನಡ ಚಲನಚಿತ್ರಗಳನ್ನು ಮಾತ್ರ ಪ್ರದರ್ಶಿಸುವಂತೆ ಕನ್ನಡ ಸೇನೆ ಜಿಲ್ಲಾಧ್ಯಕ್ಷ ವಿ.ರವಿಕುಮಾರ್‌ರವರ ನೇತೃತ್ವದಲ್ಲಿ ಚಿಕ್ಕಬಳ್ಳಾಪುರ ಅಪರ ಜಿಲ್ಲಾಧಿಕಾರಿಗಳಿಗೆ ಮನವಿಯನ್ನು ಸಲ್ಲಿಸಲಾಯಿತು.

ನವೆಂಬರ್ ಮಾಹೆಯಂದು ರಾಜ್ಯದ ಎಲ್ಲಾ ಕಡೆಗಳಲ್ಲಿ ಕಡ್ಡಾಯವಾಗಿ ಕನ್ನಡ ಚಲನಚಿತ್ರಗಳನ್ನು ಮಾತ್ರ ಪ್ರದರ್ಶಿಸಿಕೊಂಡು ಬರುತ್ತಿದ್ದು, ಅದೇ ರೀತಿಯಾಗಿ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿಯೂ ಕನ್ನಡ ಚಲನಚಿತ್ರಗಳ ಪ್ರದರ್ಶನವನ್ನು ಮಾಡಿಕೊಂಡು ಬರುತ್ತಿದ್ದು, ಚಿಕ್ಕಬಳ್ಳಾಪುರ ಜಿಲ್ಲೆಯು ಗಡಿಭಾಗದ ಜಿಲ್ಲೆಯಾಗಿರುವುದರಿಂದ ಇಲ್ಲಿ ತೆಲಗು ಭಾಷೆಯ ಹಾವಳಿ ಹೆಚ್ಚಾಗಿರುವುದರಿಂದ ಜಿಲ್ಲೆಯ ಎಲ್ಲಾ ಚಲನಚಿತ್ರ ಮಂದಿರಗಳಲ್ಲಿ ಕಡ್ಡಾಯ ವಾಗಿ ಕನ್ನಡ ಚಲನಚಿತ್ರಗಳನ್ನು ಮಾತ್ರ ಪ್ರದರ್ಶಿಸಲು ಕ್ರಮ ವಹಿಸುವಂತೆ ಅಪರ ಜಿಲ್ಲಾಧಿಕಾರಿಗಳಿಗೆ ಮನವಿ ಯನ್ನು ಸಲ್ಲಿಸಲಾಯಿತು.

ನಿಯೋಗದಲ್ಲಿ ಕನ್ನಡಸೇನೆಯ ಜಿಲ್ಲಾ ಉಪಾಧ್ಯಕ್ಷ ನಕ್ಕನಹಳ್ಳಿ ಮಂಜುನಾಥ್, ವಿದ್ಯಾರ್ಥಿ ಘಟಕದ ಜಿಲ್ಲಾಧ್ಯಕ್ಷ ಚಂದು, ಜಿಲ್ಲಾ ಸಹಕಾರ್ಯದರ್ಶಿ ಅಂಬರೀಶ್ ಹಾಗೂ ಮಂಜುನಾಥ್ ಮುಂತಾದವರು ಉಪಸ್ಥಿತರಿದ್ದರು.