ಬೆಂಗಳೂರು: ಅಕ್ಟೋಬರ್ 4ರಂದು ಉತ್ತರ ಒಳನಾಡಿನ ಹಲವು ಜಿಲ್ಲೆ ಹಾಗೂ ದಕ್ಷಿಣ ಒಳನಾಡಿನ ಬಳ್ಳಾರಿ, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ಹಾಸನ, ಕೊಡಗು, ಮಂಡ್ಯ, ರಾಮನಗರ, ಶಿವಮೊಗ್ಗ, ತುಮಕೂರು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ (Karnataka Weather) ಸಾಧ್ಯತೆಯಿದೆ, ಕರಾವಳಿ ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗಲಿದೆ (Heavy Rain) ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ.
ಅದೇ ರೀತಿ ಅ.5ರಂದು ಕರಾವಳಿ ಹಾಗೂ ಉತ್ತರ ಒಳನಾಡಿನ ಜಿಲ್ಲೆಗಳ ಹಗುರದಿಂದ ಸಾಧಾರಣ ಮಳೆ ಅಥವಾ ಗುಡುಗು ಸಹಿತ ಮಳೆಯಾಗಲಿದೆ. ದಕ್ಷಿಣ ಒಳನಾಡಿನ ಬಳ್ಳಾರಿ, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಿಕಮಗಳೂರು, ಚಿತ್ರದುರ್ಗ, ಹಾಸನ, ಕೊಡಗು, ಮೈಸೂರು ಮತ್ತು ತುಮಕೂರು ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಭಾರಿ ಮಳೆ ಅಥವಾ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ತಿಳಿಸಿದೆ.
ಇನ್ನು ಅ.6ರಂದು ಕರಾವಳಿ ಮತ್ತು ಉತ್ತರ ಒಳನಾಡಿನ ಜಿಲ್ಲೆಗಳ ಹಲವು ಸ್ಥಳಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ದಕ್ಷಿಣ ಒಳನಾಡಿನ ಚಾಮರಾಜನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಕೋಲಾರ, ಮಂಡ್ಯ, ಕೊಡಗು, ಮೈಸೂರು ಮತ್ತು ರಾಮನಗರ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಭಾರೀ ಮಳೆಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ದಕ್ಷಿಣ ಒಳನಾಡಿನ ಉಳಿದ ಜಿಲ್ಲೆಗಳ ಅನೇಕ ಸ್ಥಳಗಳಲ್ಲಿ ಸಾಧಾರಣ ಮಳೆ ಅಥವಾ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ರಾಜ್ಯದ ಬಹುತೇಕ ಕಡೆ ಇದೇ ರೀತಿಯ ಹವಾಮಾನ ಅ.8ರವರೆಗೆ ಇರಲಿದೆ ಎಂದು ಇಲಾಖೆ ತಿಳಿಸಿದೆ.
ಈ ಸುದ್ದಿಯನ್ನೂ ಓದಿ | Health Tips: ಮನೆಗೆ ಬಂದ ತಕ್ಷಣ ಪಾದಗಳನ್ನು ತೊಳೆಯುವುದರಿಂದ ಸಿಗುತ್ತವೆ ಹಲವು ಲಾಭಗಳು…
ಅಕ್ಟೋಬರ್ 5 ಬೆಳಗ್ಗೆವರೆಗೆ ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳ ಮುನ್ಸೂಚನೆ
ಮುಂದಿನ 24 ಗಂಟೆಗಳ ಕಾಲ ಸಾಮಾನ್ಯವಾಗಿ ಮೋಡ ಕವಿದ ವಾತಾವರಣವಿರುತ್ತದೆ. ಗುಡುಗು ಸಹಿತ ಮಳೆ ಹಾಗೂ ಒಮ್ಮೊಮ್ಮೆ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 29 ° C ಮತ್ತು 20 ° C ಆಗಿರಬಹುದು.