Saturday, 23rd November 2024

Karnataka Weather: ಇಂದಿನ ಮಳೆ ಭವಿಷ್ಯ; ಬೆಂಗಳೂರು, ಉತ್ತರ ಕನ್ನಡ, ಉಡುಪಿ ಸೇರಿ ವಿವಿಧ ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರಿ ಮಳೆ!

Karnataka Weather

ಬೆಂಗಳೂರು: ಅ.21ರಂದು ಸೋಮವಾರ ಬೆಂಗಳೂರು, ಉತ್ತರ ಕನ್ನಡ, ಉಡುಪಿ, ಬೆಳಗಾವಿ, ಧಾರವಾಡ, ಹಾವೇರಿ, ಗದಗ, ಶಿವಮೊಗ್ಗ, ದಾವಣಗೆರೆ, ಬಳ್ಳಾರಿ, ತುಮಕೂರು, ಚಿತ್ರದುರ್ಗ, ಚಿಕ್ಕಬಳ್ಳಾಪುರ, ಕೋಲಾರ ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಇನ್ನು ಉತ್ತರ ಒಳನಾಡು, ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆಯಾಗಲಿದೆ (Karnataka Weather) ಎಂದು ಭಾರತ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಇನ್ನು ಅ.22 ರಂದು ಮೈಸೂರು, ಮಂಡ್ಯ, ರಾಮನಗರ, ಚಾಮರಾಜನಗರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ಒಂದು ಅಥವಾ ಎರಡು ಸ್ಥಳಗಳಲ್ಲಿ ಭಾರಿ ಮಳೆ ಅಥವಾ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಒಳನಾಡಿನ ಕೆಲವು ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆ ಅಥವಾ ಗುಡುಗು ಸಹಿತ ಮಳೆಯಾಗಲಿದೆ. ದಕ್ಷಿಣ ಒಳನಾಡಿನ ಉಳಿದ ಜಿಲ್ಲೆಗಳು ಹಾಗೂ ಕರಾವಳಿ ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆ/ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ತಿಳಿಸಿದೆ.

ಅದೇ ರೀತಿ ಅ.23ರಂದು ಮೈಸೂರು, ಮಂಡ್ಯ, ರಾಮನಗರ, ಚಾಮರಾಜನಗರ, ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ಒಂದು ಅಥವಾ ಎರಡು ಸ್ಥಳಗಳಲ್ಲಿ ಭಾರಿ ಮಳೆ ಅಥವಾ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಉತ್ತರ, ದಕ್ಷಿಣ ಒಳನಾಡು ಹಾಗೂ ಕರಾವಳಿ ಜಿಲ್ಲೆಗಳಲ್ಲಿ ಸಾಧಾರಣ ಮಳೆ/ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ.

ಅ.24ರಂದು ಕರಾವಳಿಯ ಕೆಲವು ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನ ಕೆಲವು ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಇದೇ ರೀತಿಯ ಹವಾಮಾನ ಅ.27ರವರೆಗೆ ಮುಂದುವರಿಯಲಿದೆ.

ಈ ಸುದ್ದಿಯನ್ನೂ ಓದಿ | Karnataka Rain: ಶಿವಮೊಗ್ಗ, ಕಾಫಿನಾಡಿನಲ್ಲಿ ಮಳೆಯಾರ್ಭಟ; ಮನೆಗಳಿಗೆ ನುಗ್ಗಿದ ನೀರು, ನಾಳೆಯೂ ಭಾರಿ ಮಳೆ ನಿರೀಕ್ಷೆ

ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳ ಮುನ್ಸೂಚನೆ:
ಮುಂದಿನ 24 ಗಂಟೆಗಳ ಕಾಲ ಸಾಮಾನ್ಯವಾಗಿ ಮೋಡ ಕವಿದ ಅಕಾಶ ಇರಲಿದ್ದು, ಸಾಧಾರಣ ಮಳೆ ಅಥವಾ ಗುಡುಗು ಸಹಿತ ಮಳೆ ಕೆಲವೊಮ್ಮೆ ತುಂಬಾ ಜೋರಾಗಿರುತ್ತದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 26° C ಮತ್ತು 20 ° C ಆಗಿರಬಹುದು.