Friday, 13th December 2024

ಫೆಬ್ರವರಿ 16 ಅಥವಾ 17ರಂದು ರಾಜ್ಯ ಬಜೆಟ್ ಮಂಡನೆ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಫೆಬ್ರವರಿ 16 ಅಥವಾ 17ರಂದು ರಾಜ್ಯ ಮುಂಗಡ ಪತ್ರ ಮಂಡಿಸುವ ನಿರೀಕ್ಷೆ ಇದೆ.

15ನೇ ಬಾರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಬಜೆಟ್ ಮಂಡಿಸಲಿದ್ದಾರೆ. ಗ್ಯಾರಂಟಿ ಯೋಜನೆಗಳ ಜಾರಿ ಹಿನ್ನೆಲೆಯಲ್ಲಿ ವ್ಯಕ್ತಿಯ ಶಿಸ್ತಿನ ಬಜೆಟ್ ಮಂಡಿಸಲಿದ್ದಾರೆ ಎನ್ನುವ ಕುತೂಹಲ ಮೂಡಿದೆ. ಜನಪ್ರಿಯ ಯೋಜನೆಗಳ ಘೋಷಣೆ ಮಾಡುವ ಸಾಧ್ಯತೆ ಕಡಿಮೆ ಇದೆ.

ಫೆಬ್ರವರಿ 12ರಿಂದ ರಾಜ್ಯ ವಿಧಾನ ಮಂಡಲ ಜಂಟಿ ಅಧಿವೇಶನ ಆರಂಭವಾಗಲಿದ್ದು, ರಾಜ್ಯಪಾಲ ತಾವರ್ ಚಂದ್ ಗೆಹ್ಲೋಟ್ ಉಭಯ ಸದನಗಳನ್ನು ಉದ್ದೇಶಿಸಿ ಭಾಷಣ ಮಾಡಲಿದ್ದಾರೆ. ನಾಲ್ಕು ದಿನಗಳ ಕಾಲ ವಂದನಾ ನಿರ್ಣಯದ ಮೇಲೆ ಚರ್ಚೆ ನಡೆಯಲಿದ್ದು, ಫೆಬ್ರವರಿ 16 ಅಥವಾ 17ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಮ್ಮ 15ನೇ ಆಯವ್ಯಯ ಮಂಡಿಸಲಿದ್ದಾರೆ.

ಫೆಬ್ರವರಿ 12 ರಿಂದ 23 ರವರೆಗೆ ವಿಧಾನ ಮಂಡಲ ಅಧಿವೇಶನ ನಡೆಯಲಿದೆ.