Thursday, 12th December 2024

ಯಡಿಯೂರಪ್ಪ ಆಪ್ತ, ಕಾಪು ಸಿದ್ದಲಿಂಗಸ್ವಾಮಿ ವಿಧಿವಶ

ಮೈಸೂರು: ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಆಪ್ತ, ಬಿಜೆಪಿ ಮುಖಂಡ ಕಾಪು ಸಿದ್ದಲಿಂಗಸ್ವಾಮಿ ವಿಧಿವಶರಾಗಿದ್ದಾರೆ.

ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಆಪ್ತರಾಗಿದ್ದ ಅವರು ಪ್ರವಾಸೋದ್ಯಮ ನಿಗಮದ ಅಧ್ಯಕ್ಷರಾಗಿಯೂ ಕೂಡ ಕರ್ತವ್ಯ ನಿರ್ವಹಿಸಿದ್ದರು.

ಸಿಎಂ ಸಿದ್ದರಾಮಯ್ಯ ವರುಣಾ ಕ್ಷೇತ್ರದಲ್ಲಿ ಸ್ಪರ್ಧೆ ಮಾಡಿದ್ದ ವೇಳೆ ಕಾಪು ಸಿದ್ದಲಿಂಗಸ್ವಾಮಿ ಅವರ ವಿರುದ್ಧ ಅಖಾಡಕ್ಕಿಳಿದಿದ್ದರು. ಯಡಿಯೂರಪ್ಪ ಅವರು ಸಿಎಂ ಆಗಿದ್ದಾಗ ಪ್ರವಾಸೋದ್ಯಮ ನಿಗಮದ ಅಧ್ಯಕ್ಷರಾಗಿಯೂ ಕೆಲಸ ಮಾಡಿದ್ದರು.