Wednesday, 11th December 2024

ಕ್ರೀಡಾ ರತ್ನ ಪ್ರಶಸ್ತಿ ಪುರಸ್ಕೃತ ಖೋಖೋ ಆಟಗಾರ ವಿನಯ್ ಇನ್ನಿಲ್ಲ

ಶಿವಮೊಗ್ಗ: ಕ್ರೀಡಾ ರತ್ನ ಪ್ರಶಸ್ತಿ ಪುರಸ್ಕೃತ ಖೋಖೋ ಆಟಗಾರ ವಿನಯ್ ಅನಾರೋಗ್ಯದಿಂದ ಬಳಲುತ್ತಿದ್ದು ಮಣಿಪಾಲ ಆಸ್ಪತ್ರೆಗೆ ಸೇರಿಸಲಾಗಿತ್ತಾದರೂ ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ.

ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿಯ ವಿನಯ್ ರಾಷ್ಟ್ರಮಟ್ಟದ ಖೋಖೋ ಆಟಗಾರರಾಗಿದ್ದರು.

ಅವರನ್ನು ಮೊದಲಿಗೆ ತೀರ್ಥಹಳ್ಳಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಬಳಿಕ ಮಣಿಪಾಲದ ಆಸ್ಪತ್ರೆಗೆ ಕರೆದುಕೊಂಡು ಹೋಗಲಾಗಿತ್ತಾದರೂ ಚಿಕಿತ್ಸೆ ಫಲಕಾರಿಯಾಗಿದೆ ನಿಧನರಾಗಿದ್ದಾರೆ. ಅಂತ್ಯಕ್ರಿಯೆ ಮಂಗಳವಾರ ನಡೆಯಲಿದೆ ಎಂದು ತಿಳಿದು ಬಂದಿದೆ.