Thursday, 19th September 2024

ಖೋಖೋ ಪಂದ್ಯಾವಳಿ: ನಾಲ್ವರು ವಿದ್ಯಾರ್ಥಿಗಳು ಆಯ್ಕೆ

ತುಮಕೂರು: ನಗರದ ಸರ್ವೋದಯ ಪ್ರೌಢಶಾಲೆಯ ಆವರಣದಲ್ಲಿ ನಡೆದ ವಿಭಾಗ ಮತ್ತು ರಾಜ್ಯಮಟ್ಟದ ಖೋಖೋ ಪಂದ್ಯಾವಳಿಯಲ್ಲಿ ಸರ್ವೋದಯ ಶಾಲೆಯ ನಾಲ್ವರು ವಿದ್ಯಾರ್ಥಿಗಳು ರಾಷ್ಟ್ರ ಮಟ್ಟದ ಖೋಖೋ ಪಂದ್ಯಾವಳಿಗೆ ಆಯ್ಕೆಯಾಗಿದ್ದಾರೆ.
ಮಹಾರಾಷ್ಟçದ ನಾಸಿಕ್‌ನಲ್ಲಿ ಡಿ. 2 ರಿಂದ 7ರ ವರೆಗೆ ನಡೆಯಲಿರುವ ರಾಷ್ಟçಮಟ್ಟದ ಖೋಖೋ ಪಂದ್ಯಾವಳಿಗೆ ಸರ್ವೋದಯ ಪ್ರೌಢಶಾಲೆಯ ವಿದ್ಯಾರ್ಥಿಗಳು ವಿಕಾಸ್ ಜಿ., ತೇಜಸ್ ಎಂ., ಎಂ.ಡಿ. ಹರ್ಷ ಹಾಗೂ ಮಹಮದ್ ಜಾಹೀದ್  ಆಯ್ಕೆಯಾಗಿದ್ದಾರೆ.
ಖೋಖೋ ಕ್ರೀಡಾಕೂಟಕ್ಕೆ ಆಯ್ಕೆಯಾಗಿರುವ ವಿದ್ಯಾರ್ಥಿಗಳನ್ನು ಸರ್ವೋದಯ ಪ್ರೌಢಶಾಲೆಯಲ್ಲಿ ಅಭಿನಂದಿಸಿ ಮಾತನಾಡಿದ ಕ್ಷೇತ್ರ ಶಿಕ್ಷಣಾಧಿಕಾರಿ ಡಾ. ಸೂರ್ಯಕಲಾ ಅವರು, ತುಮಕೂರಿನಲ್ಲಿ ನಡೆದ ವಿಭಾಗ ಮತ್ತು ರಾಜ್ಯಮಟ್ಟದ ಖೋಖೋ ಪಂದ್ಯಾವಳಿಯಲ್ಲಿ ಉತ್ತಮ ಪ್ರದರ್ಶನ ನೀಡಿ ರಾಷ್ಟçಮಟ್ಟಕ್ಕೆ ಆಯ್ಕೆಯಾಗಿರುವುದು ತುಂಬಾ ಸಂತಸ ತಂದಿದೆ. ಈ ಸ್ಪರ್ಧಿಗಳು ರಾಷ್ಟಿçÃಯ ಮಟ್ಟದ ಪಂದ್ಯಾವಳಿಯಲ್ಲೂ ಅತ್ಯುತ್ತಮ ಪ್ರದರ್ಶನ ನೀಡುವ ಮೂಲಕ ರಾಜ್ಯ ಮತ್ತು ಜಿಲ್ಲೆಗೆ ಕೀರ್ತಿ ತರಬೇಕು ಎಂದು ಶುಭ ಹಾರೈಸಿದರು.
ವಿದ್ಯಾರ್ಥಿಗಳು ಪಠ್ಯದ ಜತೆಗೆ ಕ್ರೀಡಾ ಚಟುವಟಿಕೆಗಳಿಗೂ ಒತ್ತು ನೀಡಿ ದೈಹಿಕ ಮತ್ತು ಮಾನಸಿಕವಾಗಿ ಸದೃಢರಾಗಬೇಕು. ಈ ಮೂಲಕ ಶಾಲೆ, ಶಿಕ್ಷಕರು, ಹೆತ್ತವರು ಹಾಗೂ ತಮ್ಮ ಊರಿಗೆ ಕೀರ್ತಿ ತರುವ ಕೆಲಸವನ್ನು ಮಾಡಬೇಕು ಎಂದು ಕರೆ ನೀಡಿದರು.
ಕ್ರೀಡೆ ಪ್ರತಿಯೊಬ್ಬರ ಜೀವನದ ಅವಿಭಾಜ್ಯವಾಗಬೇಕು. ಈ ನಿಟ್ಟಿನಲ್ಲಿ ವಿದ್ಯಾರ್ಥಿಗಳು ಶಿಕ್ಷಣದ ಜತೆಗೆ ಕ್ರೀಡೆಗಳಲ್ಲೂ ಪಾಲ್ಗೊಳ್ಳಬೇಕು ಎಂದು ಸಲಹೆ ನೀಡಿದರು. ಕ್ರೀಡಾಕೂಟಗಳಲ್ಲಿ ಮಕ್ಕಳು ಭಾಗವಹಿಸುತ್ತಿದ್ದರೆ ಅಂತಹವರನ್ನು ಗುರುತಿಸಿ ಪೋಷಕರು ಮತ್ತು ಶಿಕ್ಷಕರು ಪ್ರೋತ್ಸಾಹ ನೀಡುವ ಕೆಲಸ ಮಾಡಬೇಕು ಎಂದು ಹೇಳಿದರು.
ಈ ಸಂದರ್ಭದಲ್ಲಿ ಶಾಲೆಯ ಪ್ರಾಂಶುಪಾಲರಾದ ಹೆಚ್.ಆರ್. ನಾಗರಾಜು, ದೈಹಿಕ ಶಿಕ್ಷಣ ನಿರ್ದೇಶಕರಾದ ಎಂ.ಬಿ. ಪರಮೇಶ್ವರ್, ದೈಹಿಕ ಶಿಕ್ಷಣ ಶಿಕ್ಷಕ ರಮೇಶ್ ವೈ., ಮಾರುತಿ ಮತ್ತಿತರರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *