Saturday, 27th July 2024

ಮಗು ಸಾತ್ವಿಕ್ ರಕ್ಷಣೆ: 22 ಗಂಟೆಗಳ ಕಾರ್ಯಾಚರಣೆ ಸಫಲ

ವಿಜಯಪುರ : ಸತತ 22 ಗಂಟೆಗಳ ಕಾರ್ಯಾಚರಣೆ ನಂತರ ಕೊಳವೆ ಬಾವಿಗೆ ಬಿದ್ದಿದ್ದ ಎರಡು ವರ್ಷದ ಮಗು ಸಾತ್ವಿಕ್ ರಕ್ಷಣೆ ಮಾಡಲಾಗಿದೆ.

ಇಂಡಿ ತಾಲೂಕಿನ ಲಚ್ಯಾಣದಲ್ಲಿ ಕೊಳವೆ ಬಾವಿಗೆ ಬಿದ್ದಿದ್ದ ಮಗುವನ್ನು ಸತತ 21 ಗಂಟೆಗಳ ಕಾರ್ಯಾ ಚರಣೆ ಬಳಿಕ ರಕ್ಷಣೆ ಮಾಡಲಾಗಿದ್ದು, ಹೈದರಾಬಾದಿನ ಎಂದ ಎನ್ ಡಿ ಆರ್ ಎಫ್ ತಂಡ ಕಾರ್ಯಾಚರಣೆ ಬಳಿಕ ಮಗುವನ್ನು ಸುರಕ್ಷಿತವಾಗಿ ಕೊಳವೆ ಬಾವಿಯಿಂದ ಹೊರ ತೆಗೆಯಲಾಗಿದೆ.

ಶಂಕರಪ್ಪ ಮುಜಗೊಂಡ ಎನ್ನುವವರ ಜಮೀನಿನಲ್ಲಿ ಕೊಳವೆ ಬಾವಿಯಲ್ಲಿ ಎರಡು ವರ್ಷದ ಬಾಲಕ ಸಾತ್ವಿಕ್ ಸುಮಾರು 15 ರಿಂದ 20 ಅಡಿ ಆಳದಲ್ಲಿ ಬಿದ್ದಿದ್ದ. ಕಾರ್ಯಾಪ್ರವೃತ್ತರಾದ ಅಧಿಕಾರಿಗಳು ಎರಡು ಹಿಟಾಚಿ ಮೂರು ಜಿಸಿಬಿ ಗಳಿಂದ ಸಾತ್ವಿಕನ ರಕ್ಷಣೆಗಾಗಿ ಕಾರ್ಯಾಚರಣೆ ನಡೆಲಾಗಿತ್ತು. ಎಸ್ ಡಿ ಆರ್ ಎಫ್ ತಂಡ ಕೂಡ ಸ್ಥಳದಲ್ಲಿ ಬೀಡು ಬಿಟ್ಟು ಕಾರ್ಯಚರಣೆ ನಡೆಸಿದೆ. ಅಲ್ಲದೆ ಇಂಡಿ ಗ್ರಾಮಾಂತರ ಪೊಲೀಸ್ ಅಧಿಕಾರಿಗಳು ಹಾಗೂ ಅಗ್ನಿಶಾಮಕ ದಳ ಸಿಬ್ಬಂದಿ ಕೂಡ ಸ್ಥಳದಲ್ಲಿ ಕಾರ್ಯಚರಣೆ ಯಲ್ಲಿ ನಿರತರಾಗಿದ್ದರು.

ರಕ್ಷಣಾ ಕಾರ್ಯಚರಣೆ ವೇಳೆಯಲ್ಲಿ ಮಗುವಿನ ಶಬ್ದವನ್ನು ಕೇಳಿಸಿಕೊಂಡು ಸಿಬ್ಬಂದಿಗಳು ಕೆಲಸ ಮಾಡುತ್ತಿದ್ದರು. ಮಗುವಿಗೆ ಪ್ರಾಥಮಿಕ ಚಿಕಿತ್ಸೆಯನ್ನು ನೀಡಲಾಗುವುದು ಎಂದು ವೈದ್ಯರು ತಿಳಿಸಿದ್ದಾರೆ.

ಕೊಳವೆ ಬಾವಿಯಲ್ಲಿ ಬಿದ್ದಿರುವ ಎರಡು ವರ್ಷದ ಬಾಲಕ ಜೀವಂತವಾಗಿ ಹೊರಬರಲೆಂದು ಲಕ್ಷಣ ಗ್ರಾಮದಲ್ಲಿ ಸಿದ್ದಲಿಂಗೇಶ್ವರ ದೇವಸ್ಥಾನದಲ್ಲಿ ಗ್ರಾಮದ ಯುವಕರು ವಿಶೇಷ ಪೂಜೆ ಸಲ್ಲಿಸಿ ಪ್ರಾರ್ಥನೆ ಮಾಡಿದ್ದಾರೆ. ಅಲ್ಲದೆ ಇಡೀ ಕರುನಾಡಿನ ಜನತೆಯ ಕೂಡ ಸಾತ್ವಿಕ್ ಸಾವನ್ನು ಗೆದ್ದು ಬರಲಿ ಎಂದು ಪ್ರಾರ್ಥಿಸುತ್ತಿದ್ದರು.

ಇಂದಿನ ಪ್ರಕರಣಕ್ಕೂ ಮುಂಚೆ ಇಂತಹ ಎರಡು ಪ್ರಕರಣಗಳು ವಿಜಯಪುರ ಜಿಲ್ಲೆಯಲ್ಲಿ ನಡೆದಿದ್ದವು. 2008 ಮತ್ತು 2014ರಲ್ಲಿ ಕೊಳವೆ ಬಾವಿ ದುರಂತಗಳು ಸಂಭವಿಸಿದ್ದವು. 2008 ರಲ್ಲಿ ಚಡಚಣ ತಾಲೂಕಿನ ದೇವರನಿಂಬರಗಿ ಗ್ರಾಮದಲ್ಲಿ ಕಾಂಚನಾ ಉರ್ಪ್ ಏಗವ್ವ ಎನ್ನುವ ಬಾಲಕಿ ತೆರೆದ ಕೊಳವೆ ಬಾವಿಗೆ ಬಿದ್ದಿದ್ದಳು. ಜೆಸಿಬಿಗಳ ಮೂಲಕ ರಕ್ಷಣಾ ಕಾರ್ಯಾಚರಣೆ ನಡೆಸ ಲಾಗಿತ್ತು. ಆದ್ರೆ, ಮಗು ಮೃತಪಟ್ಟಿತ್ತು.

2014 ರಲ್ಲಿ ವಿಜಯಪುರ ತಾಲೂಕಿನ ದ್ಯಾಬೇರಿ ಗ್ರಾಮದಲ್ಲಿ ನಡೆದಿತ್ತು. ಆಟವಾಡುವ ವೇಳೆ 3 ವರ್ಷದ ಬಾಲಕಿ ಅಕ್ಷತಾ ಹನುಮಂತ ಪಾಟೀಲ್ ತೆರೆದ ಕೊಳವೆ ಬಾವಿಗೆ ಬಿದ್ದಿದ್ದಳು. ಅಕ್ಷತಾ ರಕ್ಷಣಾ ಕಾರಾಚರಣೆ ನಡೆದರೂ ಫಲ ಸಿಕ್ಕಿರಲಿಲ್ಲ. ಜೆಸಿಬಿಗಳ ಮೂಲಕ ಕಾರ್ಯಾಚರಣೆ ನಡೆಸಿದ್ದರೂ ಅಕ್ಷತಾ ಬದುಕಿ ಬರಲಿಲ್ಲ.

Leave a Reply

Your email address will not be published. Required fields are marked *

error: Content is protected !!