ಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರ ನಗರಾಭಿವೃದ್ದಿ ಪ್ರಾಧಿಕಾರಕ್ಕೆ ೩ ವರ್ಷದ ಅವಧಿಗೆ ಚಿಕ್ಕಕಾಡಿಗೇನಹಳ್ಳಿಯ ಕೆ.ಕೃಷ್ಣಮೂರ್ತಿ ಅವರನ್ನು ಅಧ್ಯಕ್ಷರನ್ನಾಗಿ ನೇಮಿಸಿ ಸರಕಾರ ಆದೇಶ ಹೊರಡಿಸಿದೆ.
ಈ ಬಗ್ಗೆ ಹರ್ಷ ವ್ಯಕ್ತಪಡಿಸಿ ಟ್ವಿಟ್ ಮಾಡಿರುವ ಆರೋಗ್ಯ ಸಚಿವ ಸುಧಾಕರ್ ನನ್ನ ಆತ್ಮೀಯ ಮಿತ್ರ ಕೃಷ್ಣಮೂರ್ತಿ ಅವರಿಗೆ ಅಭಿನಂದನೆಗಳು.ತಮ್ಮ ನೇತೃತ್ವದಲ್ಲಿ ಚಿಕ್ಕಬಳ್ಳಾಪುರ ಮಾದರಿ ನಗರವಾಗಿ ಅಭಿವೃದ್ದಿ ಹೊಂದಲಿ ಎಂದು ಹಾರೈಸುತ್ತೇನೆ ಎಂದಿದ್ದಾರೆ.ಇದೇ ರೀತಿ ಪಕ್ಷದ ಮುಖಂಡರು ಅಭಿನಂದನೆ ಸಲ್ಲಿಸಿದ್ದಾರೆ.