ತುಮಕೂರು: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜ್ಯದ 224 ಕ್ಷೇತ್ರಗಳಲ್ಲಿ ಯಾವ ಕ್ಷೇತ್ರದಲ್ಲಾದರೂ ಸ್ಪರ್ಧಿಸಬಹುದು. ನಾವು ಈ ಹಿಂದೆ ಚಿಕ್ಕನಾಯಕನಹಳ್ಳಿ ಕ್ಷೇತ್ರದಿಂದ ಸ್ಪರ್ಧಿಸಲು ಮನವಿ ಮಾಡಿದ್ದೆವು ಎಂದು ಮಾಜಿ ಶಾಸಕ ಹಾಗೂ ಡಿಸಿಸಿ ಬ್ಯಾಂಕ್ ಅಧ್ಯಕ್ಷ ರಾಜಣ್ಣ ತಿಳಿಸಿದರು.
ಸುದ್ದಿಗೋಷ್ಟಿಯಲ್ಲಿ ಮಾತನಾಡಿ, ಸಿದ್ದರಾಮಯ್ಯ ಜಿಲ್ಲೆಯ ಯಾವ ಕ್ಷೇತ್ರದಲ್ಲಿ ನಿಂತರೂ ಗೆಲ್ಲಿಸುತ್ತೇವೆ. ಮಾಜಿ ಶಾಸಕ ಎಚ್ ನಿಂಗಪ್ಪ ರವರು ಕಾಂಗ್ರೆಸ್ ಸೇರುವುದು ಬಹುತೇಕ ಖಚಿತ, ಟಿಕೆಟ್ ನೀಡುವುದು ಬಿಡುವ ಬಗ್ಗೆ ಹೈಕಮಾಂಡ್ ತೀರ್ಮಾನಿಸುತ್ತದೆ ಎಂದರು.ರಾ
ಜ್ಯ ಸರ್ಕಾರದಿಂದ ಪುನರ್ ಸ್ಥಾಪಿಸಿರುವ ಯಶಸ್ವಿನಿ ಆರೋಗ್ಯ ರಕ್ಷಣಾ ಯೋಜನೆ ಅಡಿ ಯಲ್ಲಿ ಸಹಕಾರ ಸಂಘಗಳ ಮೂಲಕ ಜಿಲ್ಲೆಯ ಹೆಚ್ಚು ಮಂದಿ ರೈತರು ಸದಸ್ಯತ್ವ ನೊಂದಾ ಯಿಸಬೇಕೆಂದು ಮನವಿ ಮಾಡಿದರು.
ಯಶಸ್ವಿನಿ ಯೋಜನೆಯಡಿ ನೊಂದಾಯಿತ ನೆಟ್ವರ್ಕ್ ಆಸ್ಪತ್ರೆಗಳಲ್ಲಿ1650 ಕಾಯಿಲೆಗಳಿಗೆ ಚಿಕಿತ್ಸೆ ಪಡೆಯಲು ಪ್ರತಿ ಕುಟುಂಬಕ್ಕೆ 5 ಲಕ್ಷ ರೂ ವರೆಗೆ ಆರೋಗ್ಯ ವಿಮಾ ಸೌಲಭ್ಯವಿದೆ. ಪ್ರತಿಯೊಬ್ಬರು ಈ ಸೌಲಭ್ಯ ಪಡೆಯಬೇಕೆಂದರು. ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡದ ಸದಸ್ಯರುಗಳಿಗೆ ವಾರ್ಷಿಕ ವಂತಿಕೆ ಪಾವತಿಗೆ ವಿನಾಯಿತಿ ಇದೆ ಹೆಚ್ಚಿನ ಮಾಹಿತಿಗಾಗಿ ಡಿಸಿಸಿ ಬ್ಯಾಂಕ್ ಶಾಖೆ ಅಥವಾ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳ ಕಾರ್ಯದರ್ಶಿ ಗಳನ್ನು ಸಂಪರ್ಕಿಸಬಹುದಾಗಿದೆ ಎಂದರು.
ಈ ಹಿಂದೆ ಯಶಸ್ವಿನಿ ಯೋಜನೆ ಪುನರ್ ಸ್ಥಾಪನೆಗೆ ಒತ್ತಾಯಿಸಿದ್ದೆವು. ಮುಖ್ಯಮಂತ್ರಿಗಳು ಸಹಕಾರ ಸಚಿವರು ಅಧಿಕಾರಿ ಗಳೊಂದಿಗೆ ಚರ್ಚಿಸಿ ಯಶಸ್ವಿನಿ ಯೋಜನೆ ಮತ್ತೆ ಜಾರಿಗೆ ತಂದಿರುವುದು ಅಭಿನಂದನೀಯ ಎಂದರು.
ಹಾಲಿನ ದರ 10 ರು ಬೇಕಾದರೆ ಹೆಚ್ಚಿಸಲಿ ಆದರೆ ಕಚೇರಿ ಕೆಲಸಕ್ಕೆ ಸಂಬಳ ಸಾರಿಗೆಗೆ ಆ ಹಣವನ್ನು ಉಪಯೋಗಿಸಬಾರದು, 10 ರುಗಳನ್ನು ಹಾಲು ಉತ್ಪಾದಕರಿಗೆ ನೀಡಬೇಕು.ಹಾಲು ಉತ್ಪಾದಕರ ಸ್ಥಿತಿ ಕಷ್ಟಕರವಾಗಿದೆ ಹೀಗಾಗಿ ಎಷ್ಟೇ ಹೆಚ್ಚು ಮಾಡಿದರು ಅದನ್ನು ಉತ್ಪಾದಕರಿಗೆ ನೀಡಬೇಕು, ಶಾಲೆಗಳನ್ನು ಕೇಸರಿ ಕಾರಣ ಮಾಡಲು ಹೊರಟಿರುವ ಕ್ರಮ ಸರಿಯಲ್ಲ, ಸ್ವಾಮಿ ವಿವೇಕಾ ನಂದರು ಹೊರದೇಶದಲ್ಲೆಲ್ಲಾ ಭಾರತದ ಗೌರವವನ್ನು ಹೆಚ್ಚಿಸಿದ್ದಾರೆ ಅಂತಹವರಿಗೆ ಅವಮಾನ ಮಾಡುವುದು ಸರಿಯಲ್ಲ ವೆಂದರು.
ಮಧುಗಿರಿ ಕ್ಷೇತ್ರದ ಜನ 2023ನೇ ಸಾಲಿನಲ್ಲಿ ನಡೆಯುವ ವಿಧಾನಸಭಾ ಚುನಾವಣೆಯಲ್ಲಿ ನನ್ನನ್ನು ಗೆಲ್ಲಿಸಿದರೆ ಮಧುಗಿರಿ ಜಿಲ್ಲೆಯನ್ನಾಗಿ ಮಾಡಿಸಲು ಸರ್ಕಾರಕ್ಕೆ ಒತ್ತಡ ತರುತ್ತೇನೆ, 54 ಕೆರೆಗಳಿಗೂ ನೀರು ತುಂಬಿಸುತ್ತೇನೆ, ರೈಲ್ವೆ ಕಾಮಗಾರಿಗಳನ್ನು ಸಂಪೂರ್ಣ ಮಾಡಿಸಲು ಶ್ರಮವಹಿಸುವುದರ ಜೊತೆಗೆ ಕ್ಷೇತ್ರದ ಅಭಿವೃದ್ಧಿಗೆ ಕಾಳಜಿ ಇಟ್ಟು ಕೆಲಸ ಮಾಡುತ್ತೇನೆ ಎಂದರು.
ಪತ್ರಿಕಾಗೋಷ್ಠಿಯಲ್ಲಿ ಜಿ ಜೆ ರಾಜಣ್ಣ, ಶ್ರೀಧರ್, ಸಣ್ಣಪ್ಪಯ್ಯ, ವೆಂಕಟೇಶ್, ಮತ್ತಿತರರು ಉಪಸ್ಥಿತರಿದ್ದರು.