Tuesday, 3rd December 2024

ತೆರಿಗೆ ಹೆಚ್ಚಳ ವಿರೋಧಿಸಿ ಕೋಲಾರ ಬಂದ್

ಕೋಲಾರ: ಜಿಲ್ಲೆಯ ಬಂಗಾರಪೇಟೆ ಪಟ್ಟಣದಲ್ಲಿ ಆಹಾರ ಪದಾರ್ಥಗಳ ಮೇಲೆ ತೆರಿಗೆ ಹೆಚ್ಚಳ ವಿರೋಧಿಸಿ ಅಂಗಡಿ ಮುಂಗಟ್ಟು ಗಳು ಬಂದ್ ಮಾಡಲಾ ಗಿದೆ.

ವಾಣಿಜ್ಯ ವರ್ತಕರಿಂದ ಎರಡು ದಿನಗಳ ಕಾಲ ಅಂಗಡಿ ಮುಂಗಟ್ಟುಗಳು, ಅಕ್ಕಿ ಗಿರಣಿಗಳು ಬಂದ್ ಮಾಡಿ ಪ್ರತಿಭಟನೆ ನಡೆಸು ತ್ತಿದ್ದಾರೆ.ಇತ್ತೀಚಿಗೆ ಕೇಂದ್ರ ಸರ್ಕಾರ ಆಹಾರ ಪದಾರ್ಥಗಳ ಮೇಲಿನ ಸಿಎಸ್ಟಿ ಶೇ.5 ರಷ್ಟು ತೆರಿಗೆ ಹೆಚ್ಚಳ ಮಾಡಿದೆ.

ಕೇಂದ್ರದ ನಿರ್ಧಾರ ಖಂಡಿಸಿ ಶನಿವಾರ ಬಂಗಾರಪೇಟೆ ಪಟ್ಟಣದಲ್ಲಿ ಅಂಗಡಿ ಮುಂಗಟ್ಟುಗಳು ಬಂದ್ ಮಾಡಿ ಪ್ರತಿಭಟನೆ ನಡೆಸ ಲಾಗಿದೆ. ಈ ವೇಳೆ ಸರ್ಕಾರದ ವಿರುದ್ಧ ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಎಪಿಎಂಸಿ ನಿರ್ದೇಶಕ ಜಿ.ಎಸ್.ಶಿವ ಶಂಕರ್ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಗಿದೆ.