Thursday, 21st November 2024

ಸ್ವಾತಂತ್ರ‍್ಯದ ಅಮೃತ ಮಹೋತ್ಸವ ಅದ್ಧೂರಿ ಆಚರಣೆ

ಕೋಲಾರ: ಪಟ್ಟಣದ ಸರಕಾರಿ ಕನ್ನಡ ಗಂಡು ಮಕ್ಕಳ ಮಾದರಿ ಪ್ರಾಥಮಿಕ ಶಾಲೆಯ ಆವರಣದಲ್ಲಿ ತಾಲೂಕಾ ಆಡಳಿತ ಮಂಡಳಿಯ ವತಿಯಿಂದ ೭೫ ನೇ ಸ್ವಾತಂತ್ರ‍್ಯದ ಅಮೃತ ಮಹೋತ್ಸವ ಸಮಾರಂಭವನ್ನು ಅದ್ಧೂರಿಯಾಗಿ ಆಚರಿಸಲಾಯಿತು.

ತಹಶೀಲ್ದಾರ ಪಿ ಜಿ ಪವಾರ ಧ್ವಜಾರೋಹಣವನ್ನು ನೇರವೇರಿಸಿ ಮಾತನಾಡಿ, ದೇಶ ಸ್ವತಂತ್ರಗೊAಡು ೭೫ ವರ್ಷಗಳನ್ನು ಪೂರೈಸುತ್ತಿರುವ ಸುಸಂದರ್ಭದಲ್ಲಿ ನಾವೆಲ್ಲ ಒಟ್ಟಾಗಿ ದೇಶದ ಹಿತಕ್ಕಾಗಿ ಹಾಗೂ ಏಳ್ಗೆಗಾಗಿ ಶ್ರಮಿಸಬೇಕು. ಸ್ವಾತಂತ್ರ‍್ಯದಕ್ಕಾಗಿ ಹೋರಾಡಿ ತ್ಯಾಗ, ಬಲಿದಾನ ಗೈದ ಮಹಾನ್ ನಾಯಕರುಗಳನ್ನು ಈ ಸಂದರ್ಭದಲ್ಲಿ ಸ್ಮರಿಸಬೇಕು. ಜಾತಿ, ಮತ, ಪಂಥ, ಬೇದ, ಭಾವ ಮರೆತು ಬದುಕಬೇಕು ಎಂದು ಕರೆ ನೀಡಿದರು.

ಪಟ್ಟಣದ ವಿವಿಧ ಶಾಲೆಯ ಮಕ್ಕಳಿಂದ ಹಾಗೂ ಪೋಲಿಸ್ ಇಲಾಖೆಯಿಂದ ಪಥ ಸಂಚಲನ ಜರುಗಿತು. ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದವರನ್ನು ಹುತಾತ್ಮ ಸೈನಿಕರ ಕುಟುಂಬದವರನ್ನು ಈ ಸಂದರ್ಭದಲ್ಲಿ ಸನ್ಮಾನಿಸಲಾಯಿತು. ಆಯ್ದ ಶಾಲೆಯ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಿದವು.

ಸಮಾರಂಭದಲ್ಲಿ ತಾಪಂ ಕಾರ್ಯನಿರ್ವಾಹಕ ಅಧಿಕಾರಿ ಎಫ್ ಎಚ್ ಪಠಾಣ, ಪಟ್ಟಣ ಪಂಚಾಯತಿ ಮುಖ್ಯಾಧಿಕಾರಿ ವಿರೇಶ ಹಟ್ಟಿ, ಕೃಷಿ ಇಲಾಖೆಯ ಅಧಿಕಾರಿ ಫಾತಿಮಾ ಬಾನು ಸುತಾರ, ಪಿ.ಎಸ್.ಐ ಪ್ರೀತಮ್ ನಾಯಕ, ಅಪರಾಧ ವಿಭಾಗ ಪಿ.ಎಸ್.ಐ ಆರ್.ಎನ್ ಬಿರಾದಾರ, ಪ್ರಾಥಮಿಕ ಆರೋಗ್ಯ ಕೇಂದ್ರದ ವೈಧ್ಯಾಧಿಕಾರಿ ಡಾ.ಎಸ್.ಎಮ್ ಪಾಟೀಲ್ ಬಾಗವಹಿಸಿದ್ದರು.