ಬೆಂಗಳೂರು : ಕೊಪ್ಪಳ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ರಾಜಶೇಖರ ಹಿಟ್ನಾಳ್ ಜಯಭೇರಿ ಭಾರಿಸಿದ್ದಾರೆ. 45,000 ಮತಗಳ ಅಂತರದಲ್ಲಿ ಗೆಲುವು ಸಾಧಿಸಿದ್ದಾರೆ.
ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ.ಕೆ.ಸುಧಾಕರ್ ಅವರು ಒಂದು ಲಕ್ಷ ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ರಕ್ಷಾ ರಾಮಯ್ಯಗೆ ತೀವ್ರ ಹಿನ್ನಡೆಯಾಗಿದೆ. ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಜೆಡಿಎಸ್ ಅಭ್ಯರ್ಥಿ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಭರ್ಜರಿ ಗೆಲುವು ಸಾಧಿಸಿದ್ದಾರೆ. ಬೆಳಗಾವಿ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಜಗದೀಶ್ ಶೆಟ್ಟರ್ ಭರ್ಜರಿ ಗೆಲುವು ಸಾಧಿಸಿದ್ದಾರೆ. ಬಳ್ಳಾರಿ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಇ.ತುಕಾರಾಮ್ ಭರ್ಜರಿ ಗೆಲುವು ಸಾಧಿಸಿದ್ದಾರೆ.
ಹಾಸನ ಲೋಕಸಭಾ ಕ್ಷೇತ್ರದಲ್ಲಿ ಜೆಡಿಎಸ್ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ಹೀನಾಯವಾಗಿ ಸೋಲನುಭವಿಸಿದ್ದಾರೆ. ಶ್ರೇಯಸ್ ಪಟೇಲ್ ಹಾಸನ ಕ್ಷೇತ್ರದಲ್ಲಿ ಭರ್ಜರಿ ಗೆಲುವು ಸಾಧಿಸಿದ್ದಾರೆ. ತುಮಕೂರು ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ವಿ.ಸೋಮಣ್ಣ ಭರ್ಜರಿ ಗೆಲುವು ಸಾಧಿಸಿದ್ದಾರೆ.
ಇಲ್ಲಿಯವರೆಗೆ ಬಿಜೆಪಿ 238, ಕಾಂಗ್ರೆಸ್ 97, ಎಸ್ಪಿ 33, ಟಿಎಂಸಿ 29, ಡಿಎಂಕೆ 21, ಜೆಡಿಯು 15, ಎಸ್ಎಸ್ (ಉದ್ಧವ್ ಠಾಕ್ರೆ ಬಣ) 10, ಎಸ್ಎಸ್ ಶಿಂಧೆ 6, ಟಿಡಿಪಿ 16, ವೈಎಸ್ಆರ್ಸಿಪಿ 4, ಎಎಪಿ 3 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿವೆ.