Wednesday, 11th December 2024

ಕೋಟಾ ಶ್ರೀನಿವಾಸ್ ಪೂಜಾರಿಗೆ ಭಾರೀ ಮುನ್ನಡೆ

ಡುಪಿ: ಉಡುಪಿ ಚಿಕ್ಕಮಗಳೂರು ಲೋಕಸಭೆ ಕ್ಷೇತ್ರದಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿ ಅಭ್ಯರ್ಥಿ ಕೋಟಾ ಶ್ರೀನಿವಾಸ್ ಪೂಜಾರಿ ಭಾರೀ ಮುನ್ನಡೆ ಸಾಧಿಸಿದ ಹಿನ್ನೆಲೆಯಲ್ಲಿ ಬಿಜೆಪಿ ಹಾಗೂ ಜೆಡಿಎಸ್ ಕಾರ್ಯಕರ್ತರು ಸಂಭ್ರಮಾಚರಣೆ ನಡೆಸಿದರು.

ಉಡುಪಿ ಜಿಲ್ಲಾ ಬಿಜೆಪಿ ಕಚೇರಿ ಮುಂಭಾಗದಲ್ಲಿ ಪಟಾಕಿ ಸಿಡಿಸಿ ಸಂಭ್ರಮಾಚರಣೆ ಮಾಡಿದರು.

ಬಿಜೆಪಿಯ ಕೋಟ ಶ್ರೀನಿವಾಸ್ ಪೂಜಾರಿ ಅವರು 5,27,714 ಮತಗಳನ್ನು ಹಾಗೂ ಕಾಂಗ್ರೆಸ್ ನ ಜಯಪ್ರಕಾಶ್ ಹೆಗ್ಡೆ ಅವರು 3,45,563 ಮತಗಳನ್ನು ಪಡೆದುಕೊಂಡಿದ್ದಾರೆ. ಈ ಮೂಲಕ ಬಿಜೆಪಿಯು 1,82,151 ಮತಗಳ ಅಂತರವನ್ನು ಕಾಯ್ದುಕೊಂಡಿದೆ.

ಇನ್ನು ಕೋಟ ಶ್ರೀನಿವಾಸ್ ಪೂಜಾರಿ ಅವರು ಭಾರೀ ಮುನ್ನಡೆ ಸಾಧಿಸಿದ ಹಿನ್ನೆಲೆ ಉಡುಪಿ ಕಡಿಯಾಳಿಯಲ್ಲಿರುವ ಬಿಜೆಪಿ ಕಚೇರಿ ಮುಂಭಾಗದಲ್ಲಿ ಬಿಜೆಪಿ ಹಾಗೂ ಜೆಡಿಎಸ್ ಕಾರ್ಯಕರ್ತರು ಪಟಾಕಿ ಸಿಡಿಸಿ ಸಂಭ್ರಮಾಚರಣೆ ಮಾಡಿದ್ದಾರೆ.