Thursday, 12th December 2024

ಸ್ವತಂತ್ರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ ಕೆ.ಎಸ್.ಈಶ್ವರಪ್ಪ

ಶಿವಮೊಗ್ಗ: ಶಿವಮೊಗ್ಗ ಲೋಕಸಭಾ ಕ್ಷೇತ್ರದಿಂದ ಬಿಜೆಪಿ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧಿಸಲು ನಿರ್ಧರಿಸುವ ಕೆಎಸ್​ ಈಶ್ವರಪ್ಪ ಶುಕ್ರವಾರ ಸ್ವತಂತ್ರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದರು.

ರಾಜ್ಯದಲ್ಲಿ ಲೋಕಸಭಾ ಚುನಾವಣೆಯ 2ನೇ ಹಂತದ ಚುನಾವಣೆಗೆ ಇಂದಿನಿಂದ ನಾಮಪತ್ರ ಸಲ್ಲಿಕೆ ಆರಂಭವಾಗಿದ್ದು, ನಾಮಪತ್ರ ಸಲ್ಲಿಕೆಗೆ ಏ.12 ರಿಂದ 19 ರವರೆಗೆ ನಾಮಪತ್ರ ಸಲ್ಲಿಕೆಗೆ ಅವಕಾಶ ನೀಡಲಾಗಿದೆ.

ತಮ್ಮ ಬೆಂಬಲಿಗ ರೊಂದಿಗೆ ಶಿವಮೊಗ್ಗದ ರಾಮಣ್ಣಶ್ರೇಷ್ಟಿ ಪಾರ್ಕ್ ನಿಂದ ಮೆರವಣಿಗೆ ಮೂಲಕ ಗೋಪಿ ಸರ್ಕಲ್ ವರೆಗೂ ತೆರಳಿ ಬಳಿಕ ನಾಮ ಪತ್ರ ಸಲ್ಲಿಸಿದರು. ಈ ಮೂಲಕ ತಮ್ಮ ಶಕ್ತಿ ಪ್ರದರ್ಶನ ಮಾಡಿದ್ದಾರೆ.

ಬಿಜೆಪಿ ಬಂಡಾಯ ಅಭ್ಯರ್ಥಿ ಕೆ ಎಸ್ ಈಶ್ವರಪ್ಪ ಸುಮಾರು 10 ಸಾವಿರ ಕಾರ್ಯಕರ್ತರ ಜೊತೆಗೆ ಮೆರವಣಿಗೆ ನಡೆಸಿ ಶಕ್ತಿ ಪ್ರದರ್ಶನ ತೋರಿದ್ದಾರೆ.

ಶಿವಮೊಗ್ಗ ಕ್ಷೇತ್ರದ ಸ್ವತಂತ್ರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ ಕೆ ಎಸ್ ಈಶ್ವರಪ್ಪಗೆ ಪತ್ನಿ ವಿಜಯಲಕ್ಷ್ಮಿ., ಪುತ್ರ ಕಾಂತೇಶ್​ ಹಾಗೂ ಮಾಜಿ ಶಾಸಕ ಗೂಳಿಹಟ್ಟಿ ಶೇಖರ್ ಹಾಗೂ ಆಪ್ತರು ಜಿಲ್ಲಾಧಿಕಾರಿ ಕಚೇರಿಗೆ ಆಗಮಿಸಿ ನಾಮಪತ್ರ ಸಲ್ಲಿಸಿದರು. ಜಿಲ್ಲಾ ಚುನಾವಣಾಧಿಕಾರಿ ಗುರುದತ್ತ ಹೆಗಡೆ ಅವರು ನಾಮಪತ್ರ ಸ್ವೀಕರಿಸಿದರು.