Saturday, 14th December 2024

ಮಾಜಿ ಡಿಸಿಎಂ ಕೆ.ಎಸ್.ಈಶ್ವರಪ್ಪ ಇಂದಿನಿಂದ ಪ್ರಚಾರ

ಶಿವಮೊಗ್ಗ: ಯಡಿಯೂರಪ್ಪ ಕುಟುಂಬದ ವಿರುದ್ಧ ಬಂಡಾಯ ಸಾರಿರುವ ಮಾಜಿ ಡಿಸಿಎಂ ಕೆ.ಎಸ್.ಈಶ್ವರಪ್ಪ ಅವರು ಲೋಕಸಭೆ ಚುನಾವಣೆ ಪ್ರಚಾರಕ್ಕೆ ಇಂದಿನಿಂದ ಚಾಲನೆ ನೀಡಿದ್ದಾರೆ.

ಶನಿವಾರ ಪುರಲೆಯ ಗಣಪತಿ ದೇವಾಲಯದಲ್ಲಿ ಪೂಜೆ ಸಲ್ಲಿಸಿ, ದೇವರ ಆಶೀರ್ವಾದ ಪಡೆದ ಈಶ್ವರಪ್ಪನವರು, ಪ್ರಚಾರ ಕಾರ್ಯ ಕೈಗೊಂಡರು.

ಈ ವೇಳೆ ಮಾತನಾಡಿದ ಅವರು, 1989 ರಲ್ಲಿ ನನ್ನ ರಾಜಕೀಯ ಜೀವನ ಪ್ರಾರಂಭವಾಯಿತು. ಅಂದು ಇಲ್ಲಿನ ಜನರು ಅಧಿಕ ಮತ ನೀಡಿ ಆಶೀರ್ವದಿ ಸಿದ್ದರು. ಆ ಕಾರಣಕ್ಕೆ ನನ್ನ ಚುನಾವಣಾ ಪ್ರಚಾರವನ್ನು ಇಲ್ಲಿಂದಲೇ ಶುರು ಮಾಡುತ್ತಿದ್ದೇನೆ ಎಂದರು.

ಇನ್ನು ತನ್ನ ಪುತ್ರನಿಗೆ ಹಾವೇರಿ ಲೋಕಸಭೆ ಕ್ಷೇತ್ರದ ಟಿಕೆಟ್‌ ಸಿಗಲಿಲ್ಲ ಎಂದು ಆಕ್ರೋಶಗೊಂಡಿರುವ ಈಶ್ವರಪ್ಪ, ಶಿವಮೊಗ್ಗದಲ್ಲಿ ಹಾಲಿ ಎಂಪಿ ಹಾಗೂ ಯಡಿಯೂರಪ್ಪನವರ ಪುತ್ರ ಬಿ.ವೈ.ವಿಜಯೇಂದ್ರ ವಿರುದ್ಧ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧೆಗೆ ಇಳಿದಿದ್ದಾರೆ. ಈಶ್ವರಪ್ಪ ಅವರ ನಿವಾಸಕ್ಕೆ ಜಿಲ್ಲೆಯ ವಿವಿಧೆಡೆಯಿಂದ ಆಪ್ತರು, ಹಿತೈಷಿಗಳು ಆಗಮಿಸಿ ಬೆಂಬಲ ಸೂಚಿಸುತ್ತಿದ್ದಾರೆ.