Friday, 13th December 2024

ದಸರಾ ಆಯುಧ ಪೂಜೆಗೆ ಕೇವಲ 50 ರೂ: ಕೆಎಸ್‌ಆರ್‌ಟಿಸಿ ಸಿಬ್ಬಂದಿ ಆಕ್ರೋಶ

ಮಂಡ್ಯ : ದಸರಾ ಆಯುಧ ಪೂಜೆಗೆ ಕೇವಲ 50 ರೂ ಕೊಟ್ಟ ರಾಜ್ಯ ಸರ್ಕಾರದ ವಿರುದ್ಧ ಮಂಡ್ಯ ಕೆಎಸ್‌ಆರ್‌ಟಿಸಿ ಸಿಬ್ಬಂದಿ ಆಕ್ರೋಶ ವ್ಯಕ್ತಪಡಿಸಿದೆ

ಕೋಟಿ ಕೋಟಿ ಬೊಕ್ಕಸಕ್ಕೆ ತುಂಬಿಕೊಳ್ಳುವ ಸರ್ಕಾರ ಚಿಲ್ಲರೆ ಕಾಸು ನೀಡಿದೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ಮಂಡ್ಯ ಘಟಕಗಳಲ್ಲಿನ ಪ್ರತಿ ವಾಹನಕ್ಕೆ ತಲಾ 50 ರೂಪಾಯಿ. ವಿಭಾಗೀಯ ಕಾರ್ಯ ಗಾರಕ್ಕೆ 1000 ರೂಪಾಯಿ. ಪ್ರಾದೇಶಿಕ ಕಾರ್ಯಾಗಾರಕ್ಕೆ 2000 ರೂಪಾಯಿ ಹೀಗೆ ಆಯುಧ ಪೂಜೆಗಾಗಿ ಕೆಎಸ್‌ಆರ್‌ಟಿಸಿಗೆ ಸರ್ಕಾರ ಚಿಲ್ಲರೆ ಕಾಸು ಕೊಟ್ಟಿದೆ ಎಂದು ಹೇಳಲಾಗುತ್ತಿದೆ.

50 ರೂ ಕೊಟ್ಟು ಶ್ರದ್ಧಾಭಕ್ತಿಯಿಂದ ಆಯುಧ ಪೂಜೆ ಮಾಡುವಂತೆ ಸರ್ಕಾರ ಸೂಚಿಸಿದೆ. 50 ರೂಪಾಯಿಗೆ ನಾಲ್ಕು ನಿಂಬೆಹಣ್ಣು ಬರುವುದಿಲ್ಲ. ಪ್ರತಿ ವರ್ಷ ಕೂಡ ಸರ್ಕಾರ ಕೆಎಸ್‌ಆರ್‌ಟಿಸಿಗೆ ಕಡಿಮೆ ಹಣ ನೀಡಿ ಆಯುಧ ಪೂಜೆ ಮಾಡುವಂತೆ ಹೇಳುತ್ತಿದೆ. ಈಗೀನ ವಸ್ತುಗಳ ಬೆಲೆ ಗಗನಕ್ಕೇರಿದೆ.

ಕೂಡಲೇ ಸರ್ಕಾರ ಎಚ್ಚೆತ್ತು ಪ್ರತಿ ವಾಹನಕ್ಕೆ 500 ರೂಪಾಯಿ ಬಿಡುಗಡೆ ಮಾಡಬೇಕು ಎಂದು ಸಿಬ್ಬಂದಿ ಆಗ್ರಹಿಸಿದೆ.