Wednesday, 29th May 2024

ಸವದಿ ತವರು ಜಿಲ್ಲೆಯಲ್ಲಿ ಸಾರಿಗೆ ನೌಕರನ ಆತ್ಮಹತ್ಯೆ

ಬೆಳಗಾವಿ: ಸಾರಿಗೆ ಸಚಿವ ಲಕ್ಷ್ಮಣ ಸವದಿ ತವರು ಜಿಲ್ಲೆಯಲ್ಲಿ ಸಾರಿಗೆ ನೌಕರರೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ನಿರ್ವಾಹಕ ಶಿವಕುಮಾರ ನೀಲಗಾರ (40) ಆತ್ಮಹತ್ಯೆ ಮಾಡಿಕೊಂಡವರು.

ಕರ್ತವ್ಯಕ್ಕೆ ಹಾಜರಾಗುವಂತೆ ಅಧಿಕಾರಿಗಳು ಕಿರುಕುಳ ನೀಡುತ್ತಿದ್ದಾರೆ ಎಂದು ಆರೋಪಿಸಲಾಗಿದೆ. ಮುಷ್ಕರ ನಡೆಯುತ್ತಿದ್ದರೂ ಕೆಲಸಕ್ಕೆ ಬರುವಂತೆ ಅಧಿಕಾರಿಗಳು ಒತ್ತಡ ಹಾಕಿದ್ದಾರೆ. ಕೆಲಸಕ್ಕೆ ಬಾರದಿದ್ದರೆ ಕೆಲಸದಿಂದ ತೆಗೆದು ಹಾಕುವುದಾಗಿ ಬೆದರಿಕೆ ಹಾಕಿ ದ್ದರು ಎಂದು ಆರೋಪಿಸಲಾಗಿದೆ. ಇದರಿಂದಾಗಿ ಮನನೊಂದ ಶಿವಕುಮಾರ ನೀಲಗಾರ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಧಾರವಾಡ ವಿಭಾಗದ ಸವದತ್ತಿ ಘಟಕದಲ್ಲಿ ಕಾರ್ಯ ನಿರ್ವಹಣೆ ಮಾಡುತ್ತಿದ್ದರು. 12 ವರ್ಷಗಳಿಂದ ಅವರು ಸಂಸ್ಥೆಯಲ್ಲಿ ಕಾರ್ಯ ನಿರ್ವಹಣೆ ಮಾಡುತ್ತಿದ್ದರು.

ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಬೆಳಗಾವಿ ಲೋಕಸಭೆ ಉಪ ಚುನಾವಣೆ ಪ್ರಚಾರಕ್ಕಾಗಿ ಸವದತ್ತಿಗೆ ಭೇಟಿ ನೀಡಲಿದ್ದಾರೆ.

ಕ್ಷಣ ಕ್ಷಣದ ಸುದ್ದಿಗಳಿಗಾಗಿ ವಿಶ್ವವಾಣಿ ಫೇಸ್‌ ಬುಕ್‌ ಪೇಜ್‌ ಲೈಕ್‌ ಮಾಡಿ

https://www.facebook.com/Vishwavanidaily

Leave a Reply

Your email address will not be published. Required fields are marked *

error: Content is protected !!