ತುಮಕೂರು: ನಗರದಲ್ಲಿ ಸ್ಮಾರ್ಟ್ ಸಿಟಿ ವತಿಯಿಂದ ನೂತನವಾಗಿ ನಿರ್ಮಾಣಗೊಂಡಿರುವ ಶ್ರೀ ದೇವರಾಜ ಅರಸು ಬಸ್ ನಿಲ್ದಾಣದಿಂದ ಜು.27 ರಿಂದ ವಾಹನಗಳ ಕಾರ್ಯಾಚರಣೆ ಪ್ರಾರಂಭವಾಗಲಿದೆ ಎಂದು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ತುಮಕೂರು ವಿಭಾಗದ ವಿಭಾಗೀಯ ನಿಯಂತ್ರಣಾಧಿಕಾರಿ ಎಸ್. ಚಂದ್ರಶೇಖರ್ ತಿಳಿಸಿದ್ದಾರೆ.
ಪ್ರಸ್ತುತ ಕಾರ್ಯಾಚರಿಸುತ್ತಿರುವ ಬಸ್ ನಿಲ್ದಾಣ(ಹಳೇ ತುಮಕೂರು ಘಟಕ-1ರ ಆವರಣ) ಸ್ಥಳದಿಂದ ನೂತನ ಬಸ್ ನಿಲ್ದಾಣ ಆವರಣಕ್ಕೆ ಜು.27ರಿಂದ ವಾಹನ ಕಾರ್ಯಾಚರಣೆಯನ್ನು ಸಂಪೂರ್ಣವಾಗಿ ಸ್ಥಳಾಂತರಿಸಲಾಗುವುದು ಎಂದು ಅವರು ತಿಳಿಸಿದ್ದಾರೆ.