Sunday, 21st April 2024

ಶಿರಹಟ್ಟಿ ಮೀಸಲು ಕ್ಷೇತ್ರ: ಬಿಜೆಪಿ ಅಭ್ಯರ್ಥಿ ಡಾ.ಚಂದ್ರು ಲಮಾಣಿ ಭರ್ಜರಿ ಮುನ್ನಡೆ

ದಗ: ಶಿರಹಟ್ಟಿ ಮೀಸಲು ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಡಾ.ಚಂದ್ರು ಲಮಾಣಿ ಭರ್ಜರಿ ಮುನ್ನಡೆ ಪಡೆದು ಕೊಂಡಿದ್ದಾರೆ. ಲಮಾಣಿ 11,875 ಮತಗಳನ್ನು ಪಡೆದುಕೊಂಡಿದ್ದು, ಕಾಂಗ್ರೆಸ್‌ ಅಭ್ಯರ್ಥಿ ಸುಜಾತಾ ದೊಡ್ಡಮನಿ 7,174 ಮತಗಳನ್ನು ಪಡೆದುಕೊಂಡಿದ್ದಾರೆ.

ಪಕ್ಷೇತರ ಅಭ್ಯರ್ಥಿ, ರಾಮಕೃಷ್ಣ ದೊಡ್ಡಮನಿ ಅವರಿ 7408 ಮತಗಳನ್ನು ಪಡೆದುಕೊಂಡಿದ್ದಾರೆ.

ಹಾಲಿ ಶಾಸಕ ರಾಮಣ್ಣ ಲಮಾಣಿ ಅವರನ್ನು ಕೈಬಿಟ್ಟ ಬಿಜೆಪಿ ಡಾ. ಚಂದ್ರು ಲಮಾಣಿಗೆ ಟಿಕೆಟ್ ನೀಡಿದೆ. ಕಾಂಗ್ರೆಸ್‌ ಕೂಡ ಹೊಸ ಮುಖಕ್ಕೆ ಮಣೆ ಹಾಕಿದ್ದು, ಕೆಪಿಸಿಸಿ ರಾಜ್ಯ ಪ್ರಧಾನ ಕಾರ್ಯದರ್ಶಿ ಸುಜಾತಾ ದೊಡ್ಡಮನಿ ಅವರನ್ನು ಕಣಕ್ಕಿಳಿಸಿದೆ.

ಡಾ. ಚಂದ್ರು ಲಮಾಣಿ ಗೆಲ್ಲುವ ವಿಶ್ವಾಸದಿಂದ ಬಿಜೆಪಿ ಟಿಕೆಟ್ ನೀಡಿದೆ.

error: Content is protected !!