Sunday, 15th December 2024

ಸೆ.10 ಮತ್ತು 11 ರಂದು ರಾಜ್ಯಮಟ್ಟದ 9 ನೇ ಕನ್ನಡ ಕಲ್ಪಿತ ನ್ಯಾಯಾಲಯ ಸ್ಪರ್ಧೆ

-ಕುಲಪತಿ ಡಾ.ಸಿ.ಬಸವರಾಜು

ಹುಬ್ಬಳ್ಳಿ: ಕರ್ನಾಟಕ ರಾಜ್ಯ ಕಾನೂನು ವಿವಿಯಲ್ಲಿ ರಾಜ್ಯಮಟ್ಟದ 9ನೇ ಕನ್ನಡ ಕಲ್ಪಿತ ನ್ಯಾಯಾಲಯ ಸ್ಪರ್ಧೆಯನ್ನು ಸೆಪ್ಟೆಂಬರ್ 10 ಮತ್ತು 11 ರಂದು ಎರಡು ದಿನಗಳ ಕಾಲ ವಿಶ್ವವಿದ್ಯಾಲಯದ ಸಭಾಂಗಣ ದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾಲಯದ ಕುಲಪತಿ ಡಾ.ಸಿ.ಬಸವರಾಜು ಹೇಳಿದರು.

ನವನಗರದಲ್ಲಿರುವ ವಿಶ್ವವಿದ್ಯಾಲಯದಲ್ಲಿ ಇಂದು ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ಅವರು, ಸೆಪ್ಟೆಂಬರ್ 10 ರಂದು ಬೆಳಿಗ್ಗೆ 10:30ಕ್ಕೆ ಕಾನೂನು, ಸಂಸದೀಯ ವ್ಯವಹಾರ ಮತ್ತು ಶಾಸನ ಹಾಗೂ ಸಣ್ಣ ನೀರಾವರಿ ಸಚಿವ ಮತ್ತು ವಿಶ್ವವಿದ್ಯಾಲಯದ ಸಮಕುಲಾ ಧಿಪತಿ ಜೆ.ಸಿ. ಮಾಧುಸ್ವಾಮಿ ಕಾರ್ಯಕ್ರಮವನ್ನು ಉದ್ಘಾಟಿಸುವರು. ಕರ್ನಾಟಕ ಉಚ್ಛ ನ್ಯಾಯಾಲಯದ ನಿವೃತ್ತ ನ್ಯಾಯಮೂರ್ತಿ ಎಚ್.ಬಿಲ್ಲಪ್ಪ ಮುಖ್ಯ ಅತಿಥಿಗಳಾಗಿ ಭಾಗವಹಿಸುವರು. ವಿವಿಯ ಕುಲಪತಿ ಡಾ.ಸಿ.ಬಸವರಾಜು ಅಧ್ಯಕ್ಷತೆ ವಹಿಸಲಿದ್ದಾರೆ ಎಂದರು.

ಸೆಪ್ಟೆಂಬರ್ 11 ರಂದು ಸಂಜೆ 4.30 ಕ್ಕೆ ನಡೆಯುವ ಸಮಾರೋಪ ಸಮಾರಂಭದ ಮುಖ್ಯ ಅತಿಥಿಗಳಾಗಿ ಕರ್ನಾಟಕ ಉಚ್ಚ ನ್ಯಾಯಾಲಯದ ನ್ಯಾಯಮೂರ್ತಿ ರವಿ ವಿ. ಹೊಸಮನಿ, ಕರ್ನಾಟಕ ಉಚ್ಚ ನ್ಯಾಯಾಲಯದ ನ್ಯಾಯಮೂರ್ತಿ ಜಿ.ಬಸವರಾಜ, ನ್ಯಾಯವಾದಿ ಬಸವಪ್ರಭು ಹೊಸಕೇರಿ ಅತಿಥಿಗಳಾಗಿ ಪಾಲ್ಗೊಳ್ಳುವರು. ವಿವಿಯ ಕುಲಪತಿ ಡಾ.ಸಿ.ಬಸವರಾಜು ಅಧ್ಯಕ್ಷತೆ ವಹಿಸುವರು. ರಾಜ್ಯದ 36 ಕಾನೂನು ಮಹಾವಿದ್ಯಾಲಯ ಗಳ ವಿದ್ಯಾರ್ಥಿಗಳು ಸ್ಪರ್ಧೆಗಳಲ್ಲಿ ಭಾಗವಹಿಸಲಿದ್ದಾರೆ ಎಂದು ತಿಳಿಸಿದರು.

ವಿಶ್ವವಿದ್ಯಾಲಯದ ಮೌಲ್ಯಮಾಪನ ಕುಲಸಚಿವ ಡಾ.ಜಿ.ಬಿ.ಪಾಟೀಲ್, ವಿವಿಯ ಡೀನ್ ಮತ್ತು‌ ನಿರ್ದೇಶಕಿ ಡಾ. ರತ್ನಾ ಆರ್. ಭರಮಗೌಡರ ಸುದ್ದಿಗೋಷ್ಟಿಯಲ್ಲಿದ್ದರು.