ನಾಲ್ಕನೇ ಸುತ್ತಿನ ಮತ ಎಣಿಕೆಯಲ್ಲಿ ಬಿಜೆಪಿ ಅಭ್ಯರ್ಥಿ ಮಹೇಶ್ ಕುಮಟಳ್ಳಿ 9849 ಮತ ಗಳನ್ನು ಪಡೆದಿದ್ದರೆ, ಕಾಂಗ್ರೆಸ್ ಅಭ್ಯರ್ಥಿ ಲಕ್ಷ್ಮಣ್ ಸವದಿ 22765 ಮತಗಳನ್ನು ಸಾಧಿಸಿ ದ್ದಾರೆ.
ಹುಬ್ಬಳ್ಳಿ ಧಾರವಾಡ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ, ಮಾಜಿ ಸಿಎಂ ಜಗದೀಶ ಶೆಟ್ಟರ್ ಅವರು 3507 ಮತಗಳಿಂದ ಹಿನ್ನಡೆ ಸಾಧಿಸಿದ್ದಾರೆ. ಬಿಜೆಪಿಯ ಮಹೇಶ್ ಟೆಂಗಿನಕಾಯಿ 5819 ಮತಗಳನ್ನು ಪಡೆದು ಮುನ್ನಡೆ ಪಡೆದಿದ್ದಾರೆ.
ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ದೇಶದಲ್ಲಿಯೇ ಗಮನ ಸೆಳೆದಿರುವ ಮತ್ತು ಅಖಾಡ ದಲ್ಲಿ ಜಿದ್ದಾಜಿದ್ದಿಗೆ ಕಾರಣವಾಗಿರುವ 2 ಕ್ಷೇತ್ರಗಳೆಂದರೆ ಹುಬ್ಬಳ್ಳಿ- ಧಾರವಾಡ ಕೇಂದ್ರ ಹಾಗು ಬೆಳಗಾವಿಯ ಅಥಣಿ. ಬಿಜೆಪಿಯ ಕಟ್ಟಾಳುಗಳಾಗಿದ್ದ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಮತ್ತು ಲಕ್ಷ್ಮಣ ಸವದಿ ಅವರು ಟಿಕೆಟ್ ವಂಚಿತರಾದ ಬಳಿಕ ಪಕ್ಷಕ್ಕೆ ಗುಡ್ಬೈ ಹೇಳಿ ಕಾಂಗ್ರೆಸ್ ಸೇರಿದ್ದರು. ಮತ ಎಣಿಕೆ ಯಲ್ಲಿ ಇಬ್ಬರೂ ನಾಯಕರು ಮುನ್ನಡೆ ಸಾಧಿಸಿದ್ದಾರೆ. ಆ ಹಣಾಹಣಿಯ ಟ್ರೆಂಡ್ ಈಗ ಪ್ರಕಟಗೊಳ್ಳುತ್ತಾ ಸಾಗಿದೆ.
ಬಿಜೆಪಿಯಿಂದ 2012 ರಲ್ಲಿ ಸಿಎಂ ಆಗಿದ್ದ ಜಗದೀಶ್ ಶೆಟ್ಟರ್ ಅವರು ಇದುವರೆಗೆ ಯಾವ ಚುನಾವಣೆಯಲ್ಲೂ ಸೋಲದೆ 6 ಬಾರಿ ಶಾಸಕರಾಗಿ ಆಯ್ಕೆಯಾಗಿದ್ದಾರೆ. ಇವರು 1999 ಹಾಗೂ 2013ರಲ್ಲೂ ಪ್ರತಿಪಕ್ಷ ನಾಯಕರಾಗಿ ಕೆಲಸ ಮಾಡಿದ್ದ ಅನುಭವ ಹೊಂದಿದ್ದಾರೆ.
2008- 13 ರ ಅವಧಿಯಲ್ಲಿ ಸ್ಪೀಕರ್ ಆಗಿ, ಬಳಿಕ ಗ್ರಾಮೀಣಾಭಿವೃದ್ಧಿ ಸಚಿವರಾಗಿ ಕೆಲಸ ಮಾಡಿದ್ದರು. ನಂತರ ಸದಾನಂದ ಗೌಡರ ರಾಜೀನಾಮೆಯಿಂದ ರಾಜ್ಯದ ಸಿಎಂ ಆಗಿ ಕೆಲಸ ಮಾಡಿದ್ದರು.
ಲಕ್ಷ್ಮಣ ಸವದಿ ಅವರು 2018 ರ ವಿಧಾನಸಭೆ ಚುನಾವಣೆಯಲ್ಲಿ ಸೋತರೂ ಪಕ್ಷ ಉಪಮುಖ್ಯಮಂತ್ರಿ ಮಾಡಿ ಅಧಿಕಾರ ನೀಡಿತ್ತು.
ಮಾಜಿ ಸಿಎಂ ಜಗದೀಶ್ ಶೆಟ್ಟರ್ ಕ್ಷೇತ್ರವಾದ ಹುಬ್ಬಳ್ಳಿ- ಧಾರವಾಡ ಕೇಂದ್ರದಲ್ಲಿ ಗೆಲ್ಲಲೇಬೇಕೆಂದು ಹಠತೊಟ್ಟಿದ್ದರು. ಬಿಜೆಪಿ ಮತ್ತು ಆರ್ಎಸ್ಎಸ್ ಪಡೆ ಇದನ್ನ ಪ್ರತಿಷ್ಠೆಯಾಗಿ ತೆಗೆದುಕೊಂಡು ಭರ್ಜರಿ ಪ್ರಚಾರ ನಡೆಸಿತ್ತು.