Sunday, 15th December 2024

Leader Ramaiah Movie: ಸಿಎಂ ಸಿದ್ದರಾಮಯ್ಯ ಜೀವನಾಧಾರಿತ ಚಿತ್ರದ ಶೂಟಿಂಗ್‌ ಸ್ಥಗಿತ; ಕಾರಣವೇನು?

Leader Ramaiah Movie

ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರ ಜೀವನ ಆಧಾರಿತ ಸಿನಿಮಾ ʼಲೀಡರ್‌ ರಾಮಯ್ಯʼ (Leader Ramaiah Movie) ತೆರೆಗೆ ಬರುತ್ತಿರುವ ವಿಚಾರ ಗೊತ್ತೇ ಇದೆ. ಆದರೆ, ಈಗ ಕಾರಣಾಂತರಗಳಿಂದ ಸಿನಿಮಾ ಚಿತ್ರೀಕರಣ ಸ್ಥಗಿತಗೊಂಡಿದೆ ಎಂದು ತಿಳಿದುಬಂದಿದೆ. ಒಂದೆಡೆ ಮುಡಾ ನಿವೇಶನ ಹಗರಣ ಸಂಬಂಧ ಎಫ್‌ಐಆರ್‌ ದಾಖಲಾಗಿ ಸಿಎಂ ಸಿದ್ದರಾಮಯ್ಯ ಸಂಕಷ್ಟ ಎದುರಿಸುತ್ತಿದ್ದರೆ, ಮತ್ತೊಂದೆಡೆ ಅವರ ಚಿತ್ರದ ಶೂಟಿಂಗ್‌ಗೂ ಅಡಚಣೆ ಉಂಟಾಗಿದೆ.

ಸಿದ್ದರಾಮಯ್ಯ ಅವರ ಜೀವನಾಧಾರಿತ ಚಿತ್ರ ಮಾಡಲಾಗುತ್ತಿದೆ ಎಂಬ ವಿಷಯ ಬಾರಿ ಸಂಚಲನ ಮೂಡಿಸಿತ್ತು. ಈ ಚಿತ್ರದ ನಿರ್ದೇಶಕರು ಯಾರು, ಸಿದ್ದರಾಮಯ್ಯ ಪಾತ್ರದಲ್ಲಿ ಯಾರು ನಟಿಸಲಿದ್ದಾರೆ ಎಂಬ ಕುತೂಹಲ ಅಭಿಮಾನಿಗಳಲ್ಲಿ ಮೂಡಿತ್ತು. ನಂತರ ಖ್ಯಾತ ತಮಿಳು ಹೀರೋ ವಿಜತ್ ಸೇತುಪತಿ ಈ ಸಿನಿಮಾದ ನಾಯಕ ನಟನಾಗಿ ಅಭಿನಯಿಸಲಿದ್ದಾರೆ ಎಂದು ತಿಳಿದುಬಂದಿತ್ತು.

ಈ ಸಿನಿಮಾದ ಶೂಟಿಂಗ್ ಕೂಡ ಭರದಿಂದ ಸಾಗುತ್ತಿತ್ತು. ಆದರೆ, ಈಗ ಅವರ ಸಿನಿಮಾ ಚಿತ್ರೀಕರಣ ಸ್ಥಗಿತಗೊಂಡಿದೆ. ಮುಡಾ ಹಗರಣದ ಹಾಗೂ ಚಿತ್ರದ ನಾಯಕನ ಡೇಟ್ ಸಮಸ್ಯೆ ಹಿನ್ನೆಲೆಯಲ್ಲಿ ಚಿತ್ರೀಕರಣಕ್ಕೆ ಬ್ರೇಕ್ ಹಾಕಲಾಗಿದೆ ಎನ್ನಲಾಗಿದೆ. ಇನ್ನು ಮೈಸೂರು ಭಾಗದಲ್ಲಿ ಸಿಎಂ ಬಾಲ್ಯದ ಜೀವನದ ಚಿತ್ರೀಕರಣ ಪೂರ್ಣಗೊಂಡಿದೆ. ಮುಡಾ ಪ್ರಕರಣ ಹಿನ್ನೆಲೆ 2ನೇ ಭಾಗದ ಸನ್ನಿವೇಶಗಳ ಚಿತ್ರೀಕರಣಕ್ಕೆ ಬ್ರೇಕ್ ಹಾಕಲಾಗಿದೆ. ಮುಡಾ ಬೆಳವಣಿಗೆಯನ್ನು ಸಿನಿಮಾದಲ್ಲಿ ಸೇರಿಸಲು ಚಿಂತನೆ ನಡೆದಿದೆ. ಹೀಗಾಗಿಯೇ ಚಿತ್ರೀಕರಣಕ್ಕೆ ಬ್ರೇಕ್‌ ಬಿದ್ದಿದೆ ಎನ್ನಲಾಗುತ್ತಿದೆ.

ಈ ಸುದ್ದಿಯನ್ನೂ ಓದಿ | HD Kumarswamy : ಕೇಂದ್ರ ಸಚಿವ ಎಚ್‌ ಡಿ ಕುಮಾರಸ್ವಾಮಿ ವಿರುದ್ಧ ಬೆದರಿಕೆ ದಾಖಲಿಸಿದ ಉದ್ಯಮಿ ವಿಜಯ್‌ ಟಾಟಾ

ಇನ್ನು ಈ ಕುರಿತು ಕೊಪ್ಪಳದಲ್ಲಿ ಮಾತನಾಡಿರುವ ಚಿತ್ರದ ನಿರ್ಮಾಪಕ ಹಯ್ಯಾತ್ ಪೀರ್, ಮುಡಾ ಪ್ರಕರಣದ ಹಿನ್ನೆಲೆ 2ನೇ ಹಂತದ ಚಿತ್ರೀಕರಣಕ್ಕೆ ಬ್ರೇಕ್ ಹಾಕಲಾಗಿದೆ. ಮುಡಾ ಬೆಳವಣಿಗೆಯನ್ನು ಚಿತ್ರದಲ್ಲಿ ಸೇರಿಸುವ ಚಿಂತನೆ ನಡೆದಿದೆ. ಇನ್ನು ನಟ ವಿಜಯ್ ಸೇತುಪತಿ ಕೂಡ ಹಲವಾರು ಚಿತ್ರಗಳಲ್ಲಿ ತೊಡಗಿಸಿಕೊಂಡಿದ್ದಾರೆ. ಹೀಗಾಗಿ ಅವರ ಡೇಟ್ ಕೂಡ ಸಮಸ್ಯೆಯಾಗಿದೆ. ಈ ಎಲ್ಲಾ ಕಾರಣಗಳಿಗೆ ಚಿತ್ರದ ಶೂಟಿಂಗ್ ಸದ್ಯಕ್ಕೆ ನಿಲ್ಲಿಸಿದ್ದೇವೆ ಎಂದು ಹೇಳಿದ್ದಾರೆ.