Sunday, 28th April 2024

ಎಲ್ಲ ಇಲಾಖೆಯ ಸಹಕಾರದಿಂದ ಲೋಕ ಅದಾಲತ್ ಯಶಸ್ವಿಯಾಗಲಿ: ಪ್ರಧಾನ ಜಿಲ್ಲಾ ನ್ಯಾಯಾಧೀಶ ಸಿ.ಎಂ.ಜೋಶಿ

ಬೆಳಗಾವಿ: ಕೌಟುಂಬಿಕ ದೌರ್ಜನ್ಯ ಪ್ರಕರಣಗಳನ್ನು ಪೂರ್ವ ಜನತಾ ನ್ಯಾಯಾಲಯ ಕಾರ್ಯಕ್ರಮದಲ್ಲಿ ಸಂಬಂಧಿಸಿದ ಎಲ್ಲಾ ಇಲಾಖೆಯ ಸಹಕಾರದೊಂದಿಗೆ ಬಗೆಹರಿಸಿಕೊಳ್ಳಬೇಕು ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರಾದ ಸಿ. ಎಂ. ಜೋಶಿ ಹೇಳಿದರು.

ಜಿಲ್ಲಾ ಸೇವೆಗಳ ಪ್ರಾಧಿಕಾರ,ನ್ಯಾಯಾಂಗ ಇಲಾಖೆ ವಕೀಲರ ಸಂಘ ಪೊಲೀಸ್ ಇಲಾಖೆ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಬೆಳಗಾವಿ ಆಶ್ರಯದಲ್ಲಿ ಶನಿವಾರ ಜೆ.ಎಂ.ಎಫ್.ಸಿ ನ್ಯಾಯಾಲಯದ ಆವರಣದಲ್ಲಿ ಏರ್ಪಡಿಸಲಾಗಿದ್ದ ಕೌಟುಂಬಿಕ ದೌರ್ಜನ್ಯ ತಡೆ ಕಾಯ್ದೆಉಡಿ ದಾಖಲಾಗಿರುವ ಪ್ರಕರಣಗಳ ಪೂರ್ವಭಾವಿ ಜನತಾ ನ್ಯಾಯಾಲಯ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಪೊಲೀಸ್, ಕಂದಾಯ ಹಾಗೂ ಮಕ್ಕಳ ಹಾಗೂ ಅಭಿವೃದ್ಧಿ ಇಲಾಖೆ ಜನತಾ ನ್ಯಾಯಾಲಯದ ಸದುಪಯೋಗ ಪಡೆದುಕೊಂಡು ಶೀಘ್ರ ಎಲ್ಲಾ ಪ್ರಕರಣಗಳನ್ನು ಇತ್ಯರ್ಥ ಮಾಡಬೇಕು ಹಾಗೂ ಜನತಾ ನ್ಯಾಯಾಲಯದ ಸದುಪಯೋಗ ಪಡೆದುಕೊಳ್ಳಬೇಕೆಂದು ಹೇಳಿದರು.

ಕೌಟುಂಬಿಕ ನ್ಯಾಯಾಲಯದ ನ್ಯಾಯಾಧೀಶರಾದ ವೇಲಾ ಡಿ. ಖೋಡೆ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಗೌರವ ಕಾರ್ಯದರ್ಶಿಗಳಾದ ವಿಜಯ್ ದೇವರಾಜ್ ಅರಸ್, ವಕೀಲರ ಸಂಘದ ಅಧ್ಯಕ್ಷರಾದ ಡಿ. ಎಂ. ಪಾಟೀಲ್ , ಶಿಶು ಅಭಿವೃದ್ಧಿ ಯೋಜನಾಧಿಕಾರಿ ಕಾಂಚನ ಆಮಟೆ, ವಕೀಲರು ಹಾಗೂ ಪೊಲೀಸ್ ಸಿಬ್ಬಂದಿ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

ಕಾರ್ಯಕ್ರಮದ ಉದ್ಘಾಟನೆಯ ನಂತರ ಲೋಕ ಅದಾಲತ್ ಪೂರ್ವ ಜನತಾ ನ್ಯಾಯಾಲಯ ಕಾರ್ಯಕ್ರಮ ಆರಂಭಗೊಂಡಿತು.

Leave a Reply

Your email address will not be published. Required fields are marked *

error: Content is protected !!