Friday, 13th December 2024

ಜುಲೈ 8ರಂದು ರಾಷ್ಟ್ರೀಯ ಲೋಕ ಅದಾಲತ್

ಗುಬ್ಬಿ : ಜುಲೈ 8ರಂದು ರಾಷ್ಟ್ರೀಯ ಲೋಕ ಅದಾಲತ್ ಇದ್ದು ಯಾವುದೇ ಕೇಸುಗಳಿದ್ದರೂ ರಾಜಿ ಮಾಡಿ ಕೊಳ್ಳುವ ಮುಕ್ತ ಅವಕಾಶ ಕಲ್ಪಿಸಲಾಗಿದೆ.

ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಳ್ಳಬೇಕೆಂದು ಎಂದು ಪ್ರಧಾನ ಹಿರಿಯ ಸಿವಿಲ್ ನ್ಯಾಯಾಧೀಶ ರಾದ ಮಂಜುಳ ಉಂಡಿ ಶಿವಪ್ಪ ತಿಳಿಸಿದರು. ಪಟ್ಟಣದ ಹಿರಿಯ ಸಿವಿಲ್ ನ್ಯಾಯಾಲಯ ಸಭಾಂಗಣದಲ್ಲಿ ತಾಲೂಕು ಮಟ್ಟದ ಅಧಿಕಾರಿಗಳ ಜೊತೆ ನಡೆದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು, ಜನರು ಸಣ್ಣ ಪುಟ್ಟ ವಿಷಯಗಳ ವಿಚಾರವಾಗಿ ಸಂಬಂಧಗಳನ್ನು ಹಾಳು ಮಾಡಿಕೊಂಡು ಕೋರ್ಟ್ ಮೆಟ್ಟಿಲೇರಿ ಹಲವು ವರ್ಷಗಳು ಅಲೆಯುತ್ತಾರೆ. ಕಾನೂನಿನ ಬಗ್ಗೆ ಅರಿವು ಮೂಡಿಸಿ ರಾಜಿ ಸಂಧಾನದ ಮೂಲಕ ಸಂಬಂಧಗಳನ್ನು ಉಳಿಸಿಕೊಳ್ಳುವ ಪ್ರಯತ್ನವನ್ನು ಲೋಕ ಅದಾಲತ್ ಮೂಲಕ ಮಾಡಲಾಗುತ್ತದೆ.
ಲೋಕ ಅದಾಲತ್ ವಿಚಾರವಾಗಿ ಕೇಸುಗಳಿಗೆ ಸಂಬಂಧಪಟ್ಟವರು ಅವರ ವಕೀಲರನ್ನು ತಿಳಿದುಕೊಳ್ಳಬೇಕು. ನ್ಯಾಯಾಲಯದ ಕಚೇರಿಗೆ ಭೇಟಿ ನೀಡಿ ಕ್ಲರ್ಕ್ ಮೂಲಕ ಮಾಹಿತಿ ಪಡೆಯಬಹುದು ಎಂದು ತಿಳಿಸಿದರು.
ವಾಹನ ಚಾಲನೆ ಮಾಡುವಾಗ ಮೊಬೈಲ್ ಬಳಕೆ ಮಾಡುವುದರಿಂದ ಅಪಘಾತಗಳು ಸಂಭವಿಸಿ ಹೆಚ್ಚು ಪ್ರಕರಣಗಳು ದಾಖಲಾಗುತ್ತಿವೆ. ಬೀದಿ ಬದಿ ವ್ಯಾಪಾರಿಗಳು ಮೇನ್ ರೋಡ್ ಪಕ್ಕದಲ್ಲಿ ವ್ಯಾಪಾರ ಮಾಡುವುದರಿಂದ ಸ್ಕೂಲ್ ವಿದ್ಯಾರ್ಥಿಗಳು ಸಾರ್ವಜನಿಕರು ಓಡಾಡಲು, ವಾಹನ ಚಲಾಯಿಸಲು ತುಂಬಾ ತೊಂದರೆಯಾಗುತ್ತಿದ್ದು. ಮಾರುಕಟ್ಟೆ ಜಾಗದಲ್ಲಿ ಮಾರಾಟ ಮಾಡಬೇಕು ಇಲ್ಲವಾದಲ್ಲಿ ಸಂಬಂಧಪಟ್ಟ ಅಧಿಕಾರಿಗಳಿಂದ ಸೂಕ್ತ ಕ್ರಮ ಜರುಗಿಸಲಾಗುವುದು.
ಕೆ ಎಸ್ ಆರ್ ಟಿ ಸಿ ಬಸ್‌ಗಳಲ್ಲಿ ಇಂಡಿಕೇಟರ್ ವ್ಯವಸ್ಥೆ ಅಳವಡಿಸಿಕೊಂಡು ಮುಂದಾಗುವ ಅನಾಹುತಗಳನ್ನು ತಪ್ಪಿಸಬೇಕು ಬೀದಿ ಬದಿಯಲ್ಲಿ ಕಸ ಬಿಸಾಡುವುದನ್ನು ನಿಯಂತ್ರಿಸಬೇಕು ತಾಲೂಕು ಮಟ್ಟದ ಅಧಿಕಾರಿಗಳು ಇಲಾಖೆಗೆ ಸಂಬಂಧಿಸಿದಂತೆ ಜನರಿಗೆ ಕಾನೂನಿನ ಬಗ್ಗೆ ಅರಿವು ಮೂಡಿಸಬೇಕು ಎಂದು ತಿಳಿಸಿದರು.
ಸಭೆಯಲ್ಲಿ ಪ್ರಧಾನ ಕಿರಿಯ ಸಿವಿಲ್ ನ್ಯಾಯಾಧೀಶೆ ವಿನುತಾ, ಅಧಿಕ ಸಿವಿಲ್ ನ್ಯಾಯಾಧೀಶೆ ವೇದ,ತಹಶೀಲ್ದಾರ್ ಬಿ ಆರತಿ, ಸಹಾಯಕ ಸರ್ಕಾರಿ ಅಭಿಯೋಜಕ ನಿರಂಜನ ಮೂರ್ತಿ, ಸಿಪಿಐ ಗೋಪಿನಾಥ್, ಸೇರಿದಂತೆ   ತಾಲೂಕ ಮಟ್ಟದ ಅಧಿಕಾರಿಗಳು, ವಕೀಲರು  ಹಾಜರಿದ್ದರು.