ತುಮಕೂರು: ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ತಾಲ್ಲೂಕು ಕಾನೂನು ಸೇವಾ ಸಮಿತಿಗಳು ಮತ್ತು ಖಾಯಂ ಜನತಾ ನ್ಯಾಯಾಲಯಗಳಲ್ಲಿ ಜಿಲ್ಲೆಯಾದ್ಯಂತ ಸೆ.11 ಕ್ಕೆ ರಾಷ್ಟ್ರೀಯ ಲೋಕ ಅದಾಲತ್ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರು ಹಾಗೂ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಗೀತಾ ತಿಳಿಸಿದರು.
ಸುದ್ದಿಗೋಷ್ಠಿ ಮಾತನಾಡಿ, ಲೋಕ ಆದಾಲತ್ ಮೂಲಕ ಕಕ್ಷಿದಾರರು ರಾಜಿ ಅಥವಾ ಸಂಧಾನದ ಮೂಲಕ ತಮ್ಮ ಪ್ರಕರಣ ಗಳನ್ನು ಸುಲಭವಾಗಿ ಮತ್ತು ಶೀಘ್ರವಾಗಿ ಯಾವು ದೇ ಶುಲ್ಕವಿಲ್ಲದೇ ಇತ್ಟರ್ಥ ಪಡಿಸಿಕೊಳ್ಳಬಹುದು ಇದರಿಂದ ನ್ಯಾಯಾಲಯ ದಲ್ಲಿ ಹೆಚ್ಚುತ್ತಿರುವ ಪ್ರಕರಣಗಳ ಸಂಖ್ಯೆ ಕಡಿಮೆಯಾಗಿ ನ್ಯಾಯಾಧೀಶರು ಹೆಚ್ಚು ಅವಶ್ಯಕತೆ, ಇರುವಂತಹ ಕಾನೂನಿನ ಸಂಕಿರ್ಣತೆ ಇರುವಂತಹ ಪ್ರಕರಣಗಳಿಗೆ ಹೆಚ್ಚು ಒತ್ತು ನೀಡಲು ಸಾಧ್ಯವಾಗುತ್ತದೆ, ಲೋಕ್ ಅದಾಲತ್ನಲ್ಲಿ ರಾಜಿಯಾದ ಪ್ರಕರಣಗಳ ಆದೇಶ ಅಂತಿಮವಾಗಿರುತ್ತದೆ. ಪ್ರಕರಣವು ಇತ್ಯರ್ಥವಾದ ಬಳಿಕ ಮೇಲ್ಮನವಿಗೆ ಅವಕಾಶ ಇರುವುದಿಲ್ಲ, ಸ್ವಪ್ರೇರಣೆ ಯಿಂದ ಮುಂದೆ ಬಂದು ತಮ್ಮ ವಿವಾದಗಳನ್ನು ಬಗೆಹರಿಸಿ ಕೊಂಡಲ್ಲಿ ಸೌಹಾರ್ದಯುತವಾಗಿ ಜೀವನ ನಡೆಸಬಹುದಾಗಿದ್ದು, ಸಾರ್ವಜನಿಕರು ಮುಂಚಿತವಾಗಿ ಹತ್ತಿರದ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಅಥವಾ ತಾಲೂಕು ಕಾನೂನು ಸೇವೆಗಳ ಸಮಿತಿಗೆ ಭೇಟಿ ನೀಡಿ, ತಮ್ಮ ಸಿವಿಲ್ ಪ್ರಕರಣ ಇತ್ಯರ್ಥಪಡಿಸ ಕೊಳ್ಳಬಹುದು, ಪ್ರಕರಣ ಇತ್ಯರ್ಥವಾದಲ್ಲಿ ನ್ಯಾಯಾಲಯಕ್ಕೆ ಪಾವತಿಸಲಾದ ಶುಲ್ಕವನ್ನು ಪೂರ್ಣ ಮರುಪಾವತಿಸ ಲಾಗುವುದು ಕಡಿಮೆ ಖರ್ಚಿನಲ್ಲಿ ಶೀಘ್ರ ತೀರ್ಮಾನಕ್ಕಾಗಿ ಇಂದೊಂದು ವಿಶೇಷ ಅವಕಾಶವಾಗಿದೆ ಎಂದರು.
ಹಿರಿಯ ಸಿವಿಲ್ ನ್ಯಾಯಾಧೀಶರು ಮತ್ತು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ನ್ಯಾ. ನೂರುನ್ನೀಸ ಮಾತನಾಡಿ, ರಾಜ್ಯ ಸರಕಾರ ಆದೇಶದ ರೀತ್ಯ ಪೊಲೀಸ್ ಇಲಾಖೆ ಇ-ಚಲನ್ ಗಳ ಮೂಲಕ ಹಾಕಿರುವ ದಂಡದ ಮೊತ್ತದಲ್ಲಿ ಶೇ.50 ರಿಯಾಯಿತಿ ನೀಡಲಾಗಿದ್ದು, ಸಂಚಾರ ನಿಯಮ ಉಲ್ಲಂಘನೆಯ ದಂಡವನ್ನು ಸೆಪ್ಟಂಬರ್ 09 ರೊಳಗೆ ಸ್ವಯಂಪ್ರೇರಿತವಾಗಿ ಪಾವತಿಸಿದಲ್ಲಿ ಶೇ. 50% ವಿನಾಯಿತಿ ನೀಡಲಾಗಿದ್ದು, ಇದರ ಸದೋಪಯೋಗ ಪಡಿಸಿಕೊಳ್ಳುವಂತೆ ಕರೆ ನೀಡಿದರು.
ಲೋಕ ಆದಾಲತ್ ಸಾಧನೆ: ಜುಲ್ಯೆ 09 ರಂದು ಆಯೋಜಿಸಲಾಗಿದ್ದ ಲೋಕ ಅದಾಲತ್ನಲ್ಲಿ ಜೆಲ್ಲೆಯಾದ್ಯಂತ ಎಲ್ಲಾ ಬಾಕಿ ಇದ್ದ 92,178 ಪ್ರಕರಣಗಳಲ್ಲಿ 11,790 ಪ್ರಕರಣಗಳು ಹಾಗೂ ವ್ಯಾಜ್ಯ ಪೂರ್ವ ಪ್ರಕರಣಗಳಲ್ಲಿ 1,59,265 ಪ್ರಕರಣಗಳನ್ನು ವಿಲೇವಾರಿ ಮಾಡಲಾಗಿದೆ.
ಹೆಚ್ಚಿನ ಮಾಹಿತಿಗಾಗಿ: ಪ್ರಾಧಿಕಾರಕ್ಕೆ ಮತ್ತು ಕಾನೂನು ಸೇವಾ ಸಮಿತಿಗಳಿಗೆ ಈ ಮೇಲ್ ವಿಳಾಸ: ಜಟsಚಿಣumಞuಡಿ1@gmಚಿiಟ.ಛಿ om ನ್ನು ಮತ್ತು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಯವರ ಕಛೇರಿ ದೂರವಾಣಿ ಸಂಖ್ಯೆ:08162255133 ಮತ್ತು 9141193959 ಅನ್ನು ಸಂಪರ್ಕಿಸಬಹುದು, ಹೆಚ್ಚಿನ ಮಾಹಿತಿಗೆ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಉಚಿತ ಸಹಾಯವಾಣಿ:1800-425-90900ಗೆ ಸಂಪರ್ಕಿಸಬಹುದು.
ಈ ಸಂದರ್ಭದಲ್ಲಿ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ನರಸಿಂಹಮೂರ್ತಿ, ಲತಾ ಉಪಸ್ಥಿತರಿದ್ದರು.