Monday, 16th September 2024

28 ರಂದು ಬೆಳಗುಲಿ ಗ್ರಾ.ಪಂ ಕಟ್ಟಡ ಲೋಕಾರ್ಪಣೆ

ಚಿಕ್ಕನಾಯಕನಹಳ್ಳಿ : ಬೆಳಗುಲಿ ಗ್ರಾಮದಲ್ಲಿ ಮಹಾತ್ಮ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆಯಡಿ ನಿರ್ಮಿಸಲಾಗಿರುವ ಭಾರತ್ ನಿರ್ಮಾಣ ಸೇವಾ ಕೇಂದ್ರ (ಗ್ರಾ.ಪಂ.ಕಟ್ಟಡದ) ಲೋಕಾರ್ಪಣೆ ಸಮಾರಂಭ ಆ. 28 ರಂದು ನಡೆಯಲಿದೆ.

ಉದ್ಘಾಟನಾ ಸಮಾರಂಭದಲ್ಲಿ ರೈಲ್ವೆ ಮತ್ತು ಜಲಶಕ್ತಿ ಖಾತೆ ಸಚಿವ ವಿ.ಸೋಮಣ್ಣ, ಉಸ್ತುವಾರಿ ಸಚಿವ ಡಾ.ಪರಮೇಶ್ವರ್, ಸಹಕಾರ ಸಚಿವ ಕೆ.ಎನ್. ರಾಜಣ್ಣ, ಗ್ರಾಮೀಣಾಭಿವೃದ್ದಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕಖರ್ಗೆ, ದೆಹಲಿ ವಿಶೇಷ ಪ್ರತಿನಿಧಿ ಟಿ.ಬಿ.ಜಯಚಂದ್ರ ಉಪಸ್ಥಿತರಿರುವರು.

ಶಾಸಕ ಸಿ.ಬಿ.ಸುರೇಶಬಾಬು ಕಟ್ಟಡವನ್ನು ಉದ್ಘಾಟಿಸಲಿದ್ದು ಗ್ರಾ.ಪಂ ಅಧ್ಯಕ್ಷ ಬಿ.ಎನ್.ರಾಮಯ್ಯ ಅಧ್ಯಕ್ಷತೆ ವಹಿಸಲಿದ್ದಾರೆ.

ವಿಶೇಷ ಆಹ್ವಾನಿತಾಗಿ ಮಾಜಿ ಸಚಿವ ಜೆ.ಸಿ.ಮಾಧುಸ್ವಾಮಿ, ಮಾಜಿ ಶಾಸಕರುಗಳಾದ ಕಿರಣಕುಮಾರ್, ಲಕ್ಕಪ್ಪ ಹಾಗು ಬೆಳಗುಲಿ ಎಲ್ಲಾ ಗ್ರಾ.ಪಂ ಸದಸ್ಯರು ಆಗಮಿಸಲಿದ್ದಾರೆ ಎಂದು ಗ್ರಾ.ಪಂ. ಸದಸ್ಯ ಶಾಂತರಾಜು ತಿಳಿಸಿದರು.

Leave a Reply

Your email address will not be published. Required fields are marked *