ತುಮಕೂರು: ಪವರ್ ಲೈನ್ ಅಳವಡಿಸುವ ಸಂಬಂಧ ಲಂಚದ ಹಣ ಸ್ವೀಕರಿಸುವಾಗಲೇ ಕೆಪಿಟಿಸಿಎಲ್ ಚೀಫ್ ಎಂಜಿನಿಯರ್ ನಾಗರಾಜನ್ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.
ನಗರದ ಬಿ.ಎಚ್ ರಸ್ತೆ ಸಮೀಪದ ಕೆಪಿಟಿಸಿಎಲ್ ಕಚೇರಿಯಲ್ಲಿ ವ್ಯಕ್ತಿಯೊಬ್ಬರಿಂದ 50 ಸಾವಿರ ರು. ಲಂಚ ಪಡೆಯುತ್ತಿದ್ದಾಗ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿದ್ದು, ನಾಗರಾಜನ್’ರನ್ನು ವಶಕ್ಕೆ ಪಡೆದಿದ್ದಾರೆ.
ಪವರ್ ಲೈನ್ ಎಳೆಯಲು ಅನುಮತಿ ನೀಡಲು ಗುತ್ತಿಗೆದಾರರೊಬ್ಬರಿಂದ ನಾಗರಾಜನ್ 1 ಲಕ್ಷ ಹಣಕ್ಕೆ ಬೇಡಿಕೆ ಇಟ್ಟಿದ್ದರು. ಆಗಸ್ಟ್ 4ರಂದು 50 ಸಾವಿರ ಮುಂಗಡ ನೀಡಿದ್ದ ಗುತ್ತಿಗೆದಾರ ಉಳಿದ 50 ಸಾವಿರ ರು.ಗಳನ್ನು ನೀಡುವಾಗ ಲೋಕಾಯುಕ್ತರು ದಾಳಿ ಮಾಡಿ ಆರೋಪಿಯನ್ನು ವಶಕ್ಕೆ ಪಡೆದು ಮುಂದಿನ ತನಿಖೆ ಕೈಗೊಂಡಿ ದ್ದಾರೆ.
ತುಮಕೂರು ಲೋಕಾಯುಕ್ತ ಎಸ್ಪಿ ಬಾಷಾ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಲಾಗಿತ್ತು.